ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ: ಬಿ ಕೆ ಹರಿಪ್ರಸಾದ್‌

Date:

Advertisements

“ಇಂಡಿಯಾ ಒಕ್ಕೂಟವನ್ನು ಒಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ಪಟ್ಟಿದ್ದು, ಇ.ಡಿ, ಸಿಬಿಐ ಹಾಗೂ ಐಟಿ ಮೂಲಕ ಬೆದರಿಸಿದೆ. ಆದರೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ” ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಹೇಳಿದರು.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಚುನಾವಣೆ ಬಾಂಡ್‌ ಮೂಲಕ ಏಳು ಸಾವಿರ ಕೋಟಿ ಭ್ರಷ್ಟಾಚಾರವನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ. ಜನ ಇದನ್ನೆಲ್ಲ ನೋಡಿದ್ದಾರೆ. ಮೋದಿ ಅವರಿಗೆ ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

“ಇಂಡಿಯಾ ಒಕ್ಕೂಟದಲ್ಲಿ ಇರುವವರು ಬಿಜೆಪಿಯನ್ನು ಮನೆಗೆ ಕಳುಹಿಸಬೇಕು ಎಂದು ಒಗ್ಗಟ್ಟಾಗಿದ್ದಾರೆ. ಚುನಾವಣಾ ಫಲಿತಾಂಶ ಎಲ್ಲದಕ್ಕೂ ಉತ್ತರ ಕೊಡಲಿದೆ. ಈ ಬಾರಿ 200 ಸೀಟುಗಳಿಗಿಂತ ಕೆಳಗಡೆ ಬಿಜೆಪಿ ಇಳಿಯುತ್ತದೆ. ಬಿಜೆಪಿಯನ್ನು ನಾವೆಲ್ಲ ಒಗ್ಗಟ್ಟಾಗಿ ಸೋಲಿಸುತ್ತೇವೆ. ಇದು ನಮ್ಮ ಗ್ಯಾರಂಟಿ” ಎಂದು ಹೇಳಿದರು.

Advertisements

“ಮುಸ್ಲಿಂ ಲೀಗ್‌ ಮೇಲೆ ಬಿಜೆಪಿಯವರಿಗೆ ಬಹಳ ಪ್ರೀತಿ. ಸಂವಿಧಾನ ವಿರುದ್ಧ ಬಿಜೆಪಿಯವರು ಏಕೆ ಮಾತನಾಡುತ್ತಾರೆ? ಅವರಿಗೆ ಸಮನತೆ ಬೇಕಾಗಿಲ್ಲ. ಉದ್ದೇಶಪೂರ್ವಕವಾಗಿ ಮುಸ್ಲಿಮರನ್ನು ಮುಂದಿಟ್ಟು ಸಮಾನತೆ ಆಶಯವನ್ನು ಹಾಳು ಮಾಡುತ್ತಿದ್ದಾರೆ. ಯತ್ನಾಳ್‌ ಅಂತವರು ಸಮಾಜ ದ್ರೋಹಿಗಳು” ಎಂದು ಕಿಡಿಕಾರಿದರು.

“ಜನಸಾಮಾನ್ಯರಿಗೆ ಮೋದಿ ಮೋಸ ಅರ್ಥವಾಗಿದೆ. ಬಿಜೆಪಿ ಭ್ರಷ್ಟಾಚಾರದಲ್ಲಿ ಸಂಪೂರ್ಣವಾಗಿ ಮುಳುಗಿದೆ. ಬಿಜೆಪಿಯವರು ಯಾವಾಗಲು ತಿರುಕನ ಕನಸು ಕಾಣುತ್ತಾರೆ. ದೇಶದ ಜನತೆ ಮೋದಿ ಆಡಳಿತದಿಂದ ರೋಸಿ ಹೋಗಿದ್ದಾರೆ. ಫಲಿತಾಂಶ ನೀವೇ ನೋಡಿ” ಎಂದು ಹೇಳಿದರು.

“ಇದು ದೇಶದ ರಾಜಕರಾಣ. ನಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ನಾವು ಹೋರಾಡುತ್ತಿದ್ದೇವೆ. ರಾಜ್ಯ ರಾಜಕಾರಣ ಬಗ್ಗೆ ಮಾತನಾಡುವುದಿಲ್ಲ. ಲೋಕಸಭೆ ಚುನಾವಣೆ ಮುಗಿದ ಮೇಲೆ ಮಾತನಾಡುವೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X