“ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ರಮ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹11,77,100 ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ 2 ಮೊಬೈಲ್ ಫೋನ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದರು.
ಶುಕ್ರವಾರ ವಾರದಗೋಷ್ಟಿಯಲ್ಲಿ ಮಾತನಾಡಿದ ಅವರು, “ಬೆಂಗಳೂರಿನ ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಿಕ್ಷಾಟನೆ ದಂಧೆಯಿಂದ 47 ಅಪ್ರಾಪ್ತ ಮಕ್ಕಳನ್ನು ಪೊಲೀಸ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಈ ದಂಧೆಯಲ್ಲಿ ತೊಡಗಿದ್ದ 36 ಮಹಿಳೆಯರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದರು.
“ಮಾರ್ಚ್ 29ರಂದು ರಾಜಗೋಪಾಲನಗರ ಪೊಲೀಸ್ ಠಾಣಾ ಅಪರಾಧ ವಿಭಾಗವು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನರನ್ನು ಬಂಧಿಸಿದ್ದು, ಬಂಧಿತರ ಪೈಕಿ ಒಬ್ಬರು ರಾಜಗೋಪಾಲನಗರದ ರೌಡಿಯಾಗಿದ್ದಾನೆ. ಅಧಿಕಾರಿಗಳು ₹28,50,000 ಮೌಲ್ಯದ ದ್ವಿಚಕ್ರ ವಾಹನದ ಜತೆಗೆ 470 ಗ್ರಾಂ ಚಿನ್ನಾಭರಣಗಳು, 500 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ ₹50,000 ನಗದು ವಶಪಡಿಸಿಕೊಂಡಿದ್ದಾರೆ” ಎಂದು ಹೇಳಿದರು.
On 29/03/2024, the Crime Branch of Rajgopalnagar PS arrested 4 persons in connection with a burglary case, notably, one among them is a rowdy from Rajgopalnagar. The officers have recovered 470 gm of gold ornaments, 500 gm of silver articles, and ₹50,000 cash, alongside a… pic.twitter.com/llI2US0BDz
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) April 12, 2024
“ಸಂಜಯನಗರ ಠಾಣೆಯ ಪೊಲೀಸರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಿದ 1 ದ್ವಿಚಕ್ರ ವಾಹನದ ಜೊತೆಗೆ ₹10,00,000 ಮೌಲ್ಯದ 151 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯಿಂದ ಬಂಧಿತರಲ್ಲಿ ಒಬ್ಬ ಗಿರಿನಗರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾನೆ ಎಂದು ತಿಳಿದುಬಂದಿದೆ” ಎಂದರು.
“2012ರಲ್ಲಿ ಡಕಾಯಿತಿ ಪ್ರಕರಣ ಮತ್ತು 2009ರಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಬೆಂಗಳೂರು ಮತ್ತು ತಮಿಳುನಾಡಿನಲ್ಲಿ ಒಟ್ಟು 10 ಪ್ರಕರಣಗಳನ್ನು ಎದುರಿಸುತ್ತಿದ್ದ ದೀರ್ಘಕಾಲದವರೆಗೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಏ.8ರಂದು ಬಸವನಗುಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಬಂಧಿತ ಆರೋಪಿಗಳು ಕಳೆದ 8 ವರ್ಷಗಳಿಂದ ಪರಾರಿಯಾಗಿದ್ದರು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್ಐಎ
“ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಮೊಬೈಲ್ ದರೋಡೆಗಳಿಗೆ ಸಂಬಂಧಿಸಿದಂತೆ 6 ಅಂತಾರಾಜ್ಯ ಅಪರಾಧಿಗಳನ್ನು ಏ.5ರಂದು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಫೋನ್ ಪಿಕ್ ಪಾಕೆಟ್ ಮಾಡಲು ಜನದಟ್ಟಣೆಯ ಬಿಎಂಟಿಸಿ ಬಸ್‌ಗಳನ್ನು ಗುರಿಯಾಗಿಸಿಕೊಂಡು ಇತರ ರಾಜ್ಯಗಳಲ್ಲಿ ಮಾರಾಟ ಮಾಡಲಾಗುತ್ತಿದೆ” ಎಂದು ಹೇಳಿದರು.