ಮೋದಿಗೆ ಹಿಟ್ಲರ್‌, ಸರ್ವಾಧಿಕಾರಿ ಎಂದರೆ ಚುನಾವಣಾ ಆಯೋಗಕ್ಕೆ ದೂರು: ಆರ್ ಅಶೋಕ್‌ ಎಚ್ಚರಿಕೆ

Date:

Advertisements

ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಹಿಟ್ಲರ್‌, ಸರ್ವಾಧಿಕಾರಿ ಎಂದು ಟೀಕೆ ಮಾಡುವವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಎಚ್ಚರಿಸಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಈ ದೇಶದಲ್ಲಿ ರಿಯಲ್‌ ಹಿಟ್ಲರ್‌ ಎಂದರೆ ಅದು ಕಾಂಗ್ರೆಸ್‌ ಮಾತ್ರ. ತುರ್ತು ಪರಿಸ್ಥಿತಿ ಹೇರಿ ಎಲ್ಲರನ್ನೂ ಜೈಲಿಗಟ್ಟುವ ಕೆಲಸವನ್ನು ಇಂದಿರಾಗಾಂಧಿ ಮಾಡಿದ್ದರು. ವಿಶ್ವವೇ ಒಪ್ಪಿಕೊಂಡ ನರೇಂದ್ರ ಮೋದಿಯವರನ್ನು ಹಿಟ್ಲರ್‌ಗೆ ಹೋಲಿಸುವ ಕಾಂಗ್ರೆಸ್‌ ಇನ್ನೂ ಬ್ರಿಟಿಷ್‌ ಮನಸ್ಥಿತಿಯಲ್ಲೇ ಇದೆ” ಎಂದರು.

“ಬೆಂಗಳೂರಿನ ಬಾಂಬ್‌ ಸ್ಫೋಟದ ತನಿಖೆಯನ್ನು ಕಾಂಗ್ರೆಸ್‌ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿರುವುದು ಅಭಿನಂದನೀಯ. ಭಯೋತ್ಪಾದಕ ದಾಳಿಯಿಂದ ರಾಜ್ಯದ ಜನರು ಆತಂಕಗೊಂಡಿದ್ದರು. ಆದರೆ ಸೂಕ್ತ ಸಮಯದಲ್ಲೇ ಉಗ್ರರನ್ನು ಬಂಧಿಸಿ ಮುಂದಿನ ಅನಾಹುತಗಳನ್ನು ಎನ್‌ಐಎ ತಪ್ಪಿಸಿದೆ” ಎಂದು ಹೇಳಿದರು.

Advertisements

“ಕಾಂಗ್ರೆಸ್‌ ನಾಯಕರು ಈ ಘಟನೆಯನ್ನು ತಿರುಚುವ ಕೆಲಸ ಮಾಡಿದ್ದರು. ಅಲ್ಪಸಂಖ್ಯಾತರಿಗೆ ನೋವಾದರೆ ಮತಬ್ಯಾಂಕ್‌ ತಪ್ಪುತ್ತದೆ ಎಂಬ ಕಾರಣಕ್ಕೆ ಪೊಲೀಸರ ಮೇಲೆ ಒತ್ತಡ ಹಾಕಿದ್ದರು. ಇದು ವೈಯಕ್ತಿಕ, ವ್ಯಾಪಾರ ಸಂಬಂಧಿ ದ್ವೇಷ ಎನ್ನುವಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದರು. ಅದರಂತೆ ಪೊಲೀಸರು ಕೂಡ ನಡೆದುಕೊಂಡರು” ಎಂದು ಆರೋಪಿಸಿದರು.

“ಹಿಂದೆ ಕುಕ್ಕರ್‌ ಸ್ಪೋಟ ಆದಗಾಲೂ ಮಧ್ಯಪ್ರವೇಶ ಮಾಡಿದ ಡಿ ಕೆ ಶಿವಕುಮಾರ್‌, ನನ್ನ ಬ್ರದರ್‌ ಎಂದಿದ್ದರು. ರಾಜ್ಯ ಸರ್ಕಾರ ಈ ರೀತಿ ನಿರ್ದೇಶನ ನೀಡಿದ್ದರಿಂದ ಪೊಲೀಸರಿಗೆ ಯಾವುದೇ ಸುಳಿವು ಸಿಗಲಿಲ್ಲ. ಆದರೆ ಎನ್‌ಐಎ ಬಂದ ಬಳಿಕ ಭಯೋತ್ಪಾದಕ ಚಟುವಟಿಕೆ ಬಯಲಾಗಿದೆ” ಎಂದರು.

“ಕಾಂಗ್ರೆಸ್‌ನ ಸಹೋದರಿ ಮಮತಾ ಬ್ಯಾನರ್ಜಿಯವರ ರಾಜ್ಯದಲ್ಲೇ ಭಯೋತ್ಪಾದಕರು ಸಿಕ್ಕಿದ್ದಾರೆ. ಇಲ್ಲಿ ಬ್ರದರ್‌ಗಳಿದ್ದರೆ, ಅಲ್ಲಿ ಸಿಸ್ಟರ್‌ ಬಳಿಯೇ ಉಗ್ರರು ಸಿಕ್ಕಿದ್ದಾರೆ. ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ ಸುರಕ್ಷಿತ ಸ್ಥಳವಾಗಿದೆ. ಎನ್‌ಐಎ ತಂಡ ಸಾಯಿ ಪ್ರಸಾದ್‌ ಎಂಬುವರನ್ನು ತನಿಖೆಗೆ ಕರೆದರೆ ಸಚಿವ ದಿನೇಶ್‌ ಗುಂಡೂರಾವ್‌ ಅದನ್ನೇ ಹಿಡಿದುಕೊಂಡು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು” ಎಂದು ಕಿಡಿಕಾರಿದರು.

“ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದ ದೇಶದ್ರೋಹಿ ಘಟನೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ತಿರುಚಲು ಯತ್ನಿಸಿದ್ದರು. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಕೂಡ ಭಯೋತ್ಪಾದಕ ಘಟನೆಯಂತೆಯೇ ಇತ್ತು. ಸಂಪತ್‌ ರಾಜ್‌ ಜೈಲಿಗೆ ಹೋಗಿ ಬಂದರೂ ಮಂಡಳಿಯ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ. ಆದರೆ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದರೂ ಕ್ರಮ ಕೈಗೊಳ್ಳಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಸಂವಿಧಾನ ಭಗವದ್ಗೀತೆ

“ಬಿಜೆಪಿಯ ಪಾಲಿಗೆ ಸಂವಿಧಾನವು ಭಗವದ್ಗೀತೆಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ದುರ್ಬಲವಾಗಿರುವುದರಿಂದ ಅವರಿಗೆ ದುರ್ಬಲ ದೇಶವೇ ಬೇಕಿದೆ. ಭಾರತ ಬಲಿಷ್ಠವಾಗುವುದು ಕಾಂಗ್ರೆಸ್‌ಗೆ ಬೇಕಿಲ್ಲ” ಎಂದು ಅಶೋಕ್ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X