ತೆನೆ ಹೊತ್ತ ಮಹಿಳೆಗೆ ‘ಕಮಲ’ ಎಂಬ ಹೊಸ ನಾಮಕರಣ: ಪ್ರಜ್ವಲ್‌ ರೇವಣ್ಣ

Date:

Advertisements

“ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ತೆನೆಹೊತ್ತ ಮಹಿಳೆ ಚಿಹ್ನೆ ಇರುತ್ತಾ ಅಥವಾ ಕಮಲದ ಚಿಹ್ನೆ ಇರುತ್ತಾ ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಜನರಿಗೆ ಅನುಮಾನ ಗೊಂದಲ ಬೇಡ. ತೆನೆಹೊತ್ತ ಮಹಿಳೆ ನಮ್ಮ ಚಿಹ್ನೆಗೆ ಕಮಲ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ” ಎಂದು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚಿಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, “ದೇಶಕ್ಕಾಗಿ ನಡೆಯುತ್ತಿರುವ ಚುನಾವಣೆ ಲೋಕಸಭಾ ಚುನಾವಣೆ. ಅಭಿವೃದ್ಧಿ ವಿಚಾರದಲ್ಲಿ ನಮಗೆ ಯಾರೂ ಸರಿಸಾಟಿಯೇ ಇಲ್ಲ” ಎಂದಿದ್ದಾರೆ.

“ಕಾಂಗ್ರೆಸ್‌ ನಾಯಕರು ಮಾತು ಎತ್ತಿದರೇ, ಎಚ್‌.ಡಿ.ರೇವಣ್ಣ ದುರಹಂಕಾರಿ ಎಂದೆನ್ನುತ್ತಾರೆ. ಆದರೆ, ರೇವಣ್ಣನವರಿಗೆ ಸ್ವಲ್ಪ ಸಿಟ್ಟು ಜಾಸ್ತಿ ಇದೆ. ಆದರೆ, ಅವರ ಹೃದಯದಲ್ಲಿ ಪ್ರೀತಿ ಇದೆ. ರೇವಣ್ಣನವರು ಸ್ವಂತ ಕುಟುಂಬವನ್ನೂ ಮರೆತು ಜನರಿಗಾಗಿ ದುಡಿಯುತ್ತಾರೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಅಬಕಾರಿ ಪ್ರಕರಣ | ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ಏ.15ರಂದು ವಿಚಾರಣೆ

“ನನ್ನ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಎಚ್‌.ಡಿ ರೇವಣ್ಣ ಅವರ ಕಣ್ಣೀರು ಒರೆಸುವ ಕೆಲಸ ಮಾಡಿ. ರೇವಣ್ಣ ಅವರಿಗೆ ಬಲತುಂಬುವ ಕೆಲಸ ಮಾಡಿ. ನಾನು ಗೆದ್ದ ಬಳಿಕ ಈ ಭಾಗದಲ್ಲಿ ಇಲ್ಲಿಯವರೆಗೂ ಏನೇನೂ ಕೆಲಸ ಮಾಡಿದ್ದೇನೆಂದು ಅರ್ಧ ಗಂಟೆವರೆಗೂ ಹೇಳಬಲ್ಲೇ, ಮನೆ ಮನೆಗೆ ನೀರು ತರಿಸುವ ಕೆಲಸ ಮಾಡಿದ್ದೇನೆ. ₹4907 ಕೋಟಿ ರೂಪಾಯಿ ಅನುದಾನ ತಂದಿದ್ದೇನೆ. ರಸ್ತೆಗಳನ್ನ ಮಾಡಿಸಿದ್ದೀನಿ” ಎಂದಿದ್ದಾರೆ.

“ಆರ್‌ಎಸ್‌ಎಸ್‌ ಸ್ವಯಂ ಸೇವಕ ವಿಜಯಕುಮಾರ್ ಮೇಲೆ ಹಲ್ಲೆ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಮೀಲಾಗಿದ್ದಾರೆ. ಪೊಲೀಸರು ಒತ್ತಡಕ್ಕಡ ಸಿಲುಕಿದ್ದಾರೆ. ವಿಜಯಕುಮಾರ್ಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇನೆ” ಎಂದು ಹೇಳಿದರು.

“ವಿಜಿಯವರ ಮೇಲೆ ಮಾರಕಾಸ್ತ್ರ ಬಳಸಿ ಹಲ್ಲೆ ಮಾಡಿದ್ದಾರೆ. ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ಅಂಗಡಿ ನಾಶಪಡಿಸಿದ್ದಾರೆ. ವಿಜಿಯವರು ಹಿಂದುತ್ವಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರಿಗಿನ್ನೂ ಮದುವೆಯಾಗಿಲ್ಲ. ಅವರ ಬಳಿ ಆಸ್ಪತ್ರೆಗೆ ಕಟ್ಟಲು ಹಣ ಸಹ ಇಲ್ಲ. ಅವರ ತುಂಬಾ ಒಳ್ಳೆಯ ವ್ಯಕ್ತಿ. ಅವರ ಮೇಲೆ ಹಲ್ಲೆ ಮಾಡುವಂತಹವರ ಮನಸ್ಥಿತಿ ಹೇಗಿರಬೇಕು. ವಿಜಿಯವರಿಗೆ ಏನಾದರೂ ಆಗಿದ್ದರೇ, ಅವರ ತಂದೆ-ತಾಯಿಯನ್ನ ಯಾರು ನೋಡಿಕೊಳ್ಳುತ್ತಿದ್ದರು” ಎಂದು ಹೇಳಿದರು.

“ವಿಜಿಯವರ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಸಬ್ಕಾನ್ಷಿಯಸ್ ಲೆವೆಲ್ನಲ್ಲಿ ಇರಲಿಲ್ಲ. ರಾತ್ರಿ ಸ್ವಲ್ಪ ಚೇತರಿಸಿಕೊಂಡ ಮೇಲೆ ಹೇಳಿಕೆ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಕೆಲವರು ರಾತ್ರೋರಾತ್ರಿ ಹಾಸನದಿಂದ ಪೊಲೀಸರಿಗೆ ಫೋನ್ ಮಾಡಿಸಿದ್ದಾರೆ. ಕಿಡಿಗೇಡಿಗಳ ಮೇಲೆ ಪೊಲೀಸರು ಕಠಿಣವಾದ ಕ್ರಮ ಜರುಗಿಸಬೇಕಿತ್ತು. ಆದರೆ ವಿಫಲರಾಗಿದ್ದಾರೆ. ರಾಜಕೀಯ ಒತ್ತಡಕ್ಕೆ ಮಣಿದು ರೌಡಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಈ ಬಗ್ಗೆ ಸೂಕ್ತವಾದ ತನಿಖೆಯಾಗಬೇಕು. ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ಪೊಲೀಸರ ಜವಾಬ್ದಾರಿಯಾಗಿದೆ. ಜನಪರ ಕೆಲಸ ಮಾಡುವ ಖಾಕಿ ಯಾರೋ ಒಬ್ಬರ ಗುಲಾಮರಾಗಬಾರದುಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X