ಬಿಜೆಪಿಯವರದ್ದು ಉಂಡು ಹೋದ ಕೊಂಡು ಹೋದ ಸಂಸ್ಕೃತಿ: ಮೋದಿ ಮುಂದೆ ಪ್ರಶ್ನೆಯಿಟ್ಟು ಕೃಷ್ಣ ಬೈರೇಗೌಡ ಕಿಡಿ

Date:

Advertisements

ನಮ್ಮಿಂದ ತೆರಿಗೆ ಹಣ, ಸಂಸತ್ ಸೀಟುಗಳನ್ನು ಕಸಿಯಲಾಗುತ್ತಿದೆ. ನೆಂಟರ ಮನೆಗೆ ಹೋದಾಗ ಖಾಲಿ ಕೈಯಲ್ಲಿ ಹೋಗುವುದು ಭಾರತೀಯ ಸಂಸ್ಕೃತಿಯಲ್ಲ. ಆದರೆ ಬಿಜೆಪಿಯವರದ್ದು ಉಂಡು ಹೋದ ಕೊಂಡು ಹೋದ ಸಂಸ್ಕೃತಿ ಎಂದು ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು.

ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ ಅವರಿಗೆ ಸರಣಿ ಪ್ರಶ್ನೆಗಳನ್ನು ಮುಂದಿಟ್ಟು ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಶ್ನೆಗಳಿಗೆ ಉತ್ತರಿಸಿ ಎಂದು ಪ್ರಧಾನಿಗೆ ಆಗ್ರಹಿಸಿದರು.

“ತೆರಿಗೆ ಜೊತೆಗೆ ನದಿ ನೀರು ಹಂಚಿಕೆಯಲ್ಲೂ ನಮಗೆ ಸಾಕಷ್ಟು ಅನ್ಯಾಯವಾಗಿದೆ. ಕೃಷ್ಣ, ತುಂಗಭದ್ರಾ, ಮಹದಾಯಿ, ಕಾವೇರಿ ಸೇರಿದಂತೆ ಅನೇಕ ನದಿ ನೀರಿನ ವಿಚಾರದಲ್ಲಿ ಮೋಸವಾಗಿದೆ. ಇಡೀ ದೇಶದಲ್ಲಿ ಅತ್ಯಂತ ಹೆಚ್ಚು ಖುಷ್ಕಿ ಭೂಮಿ ಇರುವುದು ಕರ್ನಾಟಕದಲ್ಲಿ. ಅತಿ ಹೆಚ್ಚು ಮಳೆ ಆಶ್ರಯ ಹೊಂದಿರುವ ಕರ್ನಾಟಕ. ಅತಿ ಹೆಚ್ಚು ಬರಕ್ಕೆ ಈಡಾಗಿದೆ. ನಮ್ಮ ನದಿ ನೀರುಗಳನ್ನು ಉಪಯೋಗಿಸಲು ಕೇಂದ್ರ ಸರ್ಕಾರ ಅನುವು ಮಾಡಿಕೊಡದೆ ಅನ್ಯಾಯ ಎಸಗುತ್ತಿದೆ. ನಮ್ಮ ಪಾಲಿನ ನೀರನ್ನು ಕೊಡಿ ಎಂದು ಪ್ರಧಾನಿಗಳನ್ನು ಪ್ರಶ್ನೆ ಮಾಡುತ್ತೇನೆ” ಎಂದರು.

Advertisements

“2023- 24 ಕೇಂದ್ರ ಬಜೆಟ್ ಅಲ್ಲಿ ಪ್ಯಾರಾ 39 ರಲ್ಲಿ ಬರ ಪೀಡಿತ ಮಧ್ಯಕರ್ನಾಟಕದ ಕೆರೆಗೆ ನೀರು ತುಂಬಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡಬೇಕು ಎಂದು ಬಜೆಟ್ಅಲ್ಲಿ ಘೋಷಣೆ ಮಾಡಿ ಒಂದು ವರ್ಷ ಮೂರು ತಿಂಗಳು ಆದರೂ ಏಕೆ ಕೊಡುತ್ತಿಲ್ಲ” ಎಂದು ಕಿಡಿಕಾರಿದರು.

“ಡಿ ಕೆ ಶಿವಕುಮಾರ್ ಅವರು ಖುದ್ದಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಹಣ ಬಿಡುಗಡೆ ಮಾಡಬೇಕು ಎಂದು ಕೈ ಮುಗಿದು ಮನವಿ ಮಾಡಿದ್ದರು. ಆದರೂ ಹಣ ಬಿಡುಗಡೆ ಮಾಡದೆ ಕೇಂದ್ರ ಅನ್ಯಾಯ ಮಾಡಿದೆ. ಕರ್ನಾಟಕದ 5 ಜಿಲ್ಲೆಗಳಿಗೆ ಮಾಡಿದ ಮೋಸ. ಕರ್ನಾಟಕಕ್ಕೆ ಬರುವ ಮೋದಿಯವರೇ ಹಣ ಬಿಡುಗಡೆ ಮಾಡುತ್ತೇವೆ ಎಂದು ಘೋಷಣೆ ಮಾಡುತ್ತೀರಾ? ಅಥವಾ ಕರ್ನಾಟಕದ ತೆರಿಗೆಹಣ ತೆಗೆದು ಕೊಂಡು ಮೋಸ ಮಾಡಿದ್ದೇವೆ ಎಂದು ಒಪ್ಪಿಕೊಳ್ಳುವಿರಾ? ರೈತರಿಗೆ ಮೂರು ನಾಮ ಹಾಕುತ್ತಿದ್ದೇವೆ ಎಂದು ಒಪ್ಪಿಕೊಳ್ಳುವಿರಾ?” ಎಂದು ಕುಟುಕಿದ್ದಾರೆ.

“ಮಹಾದಾಯಿ ನೀರಿಗಾಗಿ ರೈತರು ಸಾವಿರಾರು ದಿನಗಳ ಕಾಲ ಹೋರಾಟ ಮಾಡಿದ್ದಾರೆ. 13.4 ಟಿಎಂಸಿ ನೀರನ್ನು 2019 ರಲ್ಲಿ ಟ್ರಿಬ್ಯುನಲ್ ಕರ್ನಾಟಕಕ್ಕೆ ಎಂದು ಗೆಜೆಟ್ ನೋಟಿಫಿಕೇಷನ್ ಮಾಡಿದೆ. ಅಂದರೆ ನೀರಿನ ಹಂಚಿಕೆಯ ಸೂತ್ರವನ್ನು ಅಂತಿಮಗೊಳಿಸಿದೆ. ಕುಡಿಯುವ ನೀರಿಗೆ 5.4 ಟಿಎಂಸಿ, ವಿದ್ಯುತ್ ಉತ್ಪಾದನೆಗೆ 8.02 ನೀರನ್ನು ಹಂಚಿಕೆ ಮಾಡಲಾಗಿದೆ. ಇಷ್ಟು ಆದರೂ ಕೇಂದ್ರ ಸರ್ಕಾರ ಮಹದಾಯಿ ಯೋಜನೆಗೆ ಅನುಮತಿ ಕೊಟ್ಟಿಲ್ಲ. ಕಳೆದ 4 ವರ್ಷಗಳಿಂದ ಟೆಂಡರ್ ಆದರೂ ಸಹ ಕಿತ್ತೂರು ಕರ್ನಾಟಕ ಭಾಗದ ರೈತರಿಗೆ ಅನ್ಯಾಯ ಮಾಡಿದೆ. 20 ಜೂನ್ 2023 ರಲ್ಲಿ ಮಹದಾಯಿ ಯೋಜನೆಗೆ ಡಿಸಿಎಂ ಅವರು ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ. ಪರಿಸರ ಇಲಾಖೆಯ ಅನುಮತಿ ಕೊಡದೆ ಇದರ ಹಿಂದೆ ದುರುದ್ದೇಶ ಅಡಗಿದೆ” ಎಂದು ಆರೋಪಿಸಿದರು.

“ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದರು, ಜೋಶಿ ಅವರು ಕೇಂದ್ರ ಸಚಿವರಾಗಿದ್ದರೂ ಕಳೆದ 5 ವರ್ಷಗಳಿಂದ ಏಕ ಕರ್ನಾಟಕಕ್ಕೆ ಅನ್ಯಾಯ ಎಸಗಲಾಗಿದೆ. ಮೇಕೆದಾಟು ಯೋಜನೆಗೆ ಕಳೆದ 5 ವರ್ಷದಿಂದ ಅನುಮತಿ ನೀಡಿ ಎಂದು ಮನವಿ ಮಾಡಿದರೂ ನಮ್ಮ ಮೇಲೆ ಏಕೆ ಹಗೆತನ ಸಾಧನೆ. ಮಾನ್ಯ ಪ್ರಧಾನಿಗಳೇ ನೀವು ಏಕೆ ಕರ್ನಾಟಕ್ಕೆ ಮೋಸ ಮಾಡುತ್ತಾ ಇದ್ದೀರಾ? ಉತ್ತರಿಸಿ” ಎಂದು ಒತ್ತಾಯಿಸಿದ್ದಾರೆ.

“ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಲೋಕಸಭಾ ಸೀಟುಗಳು 129 ಇದ್ದು ಕ್ಷೇತ್ರ ಮರು ವಿಂಗಡಣೆ ಮಾಡಿದರೆ 103 ಕ್ಕೆ ಇಳಿಯಲಿದೆ. ದಕ್ಷಿಣ ಭಾಗದ ಎಲ್ಲಾ ರಾಜ್ಯಗಳ ಹಕ್ಕನ್ನು, ಪ್ರಾತಿನಿಧ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ಇದರ ಬಗ್ಗೆ ಮೋದಿಯವರು ಉತ್ತರಿಸಬೇಕು” ಎಂದಿದ್ದಾರೆ.

“ಭದ್ರಾ ಮೇಲ್ದಂಡೆ ಯೊಜನೆಗೆ 5,300 ಕೋಟಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಘೋಷಣೆ ಮಾಡುವಿರಾ? ಮಹದಾಯಿ ಯೋಜನೆಗೆ ಬಾಕಿ ಇರುವ ಪರಿಸರ ಇಲಾಖೆ ಅನುಮತಿ ಪತ್ರವನ್ನು ಕೊಡಿಸುವಿರಾ?” ಎಂದು ಪ್ರಶ್ನೆ ಮಾಡಿದ್ದಾರೆ.

“ಮೇಕೆದಾಟು ಯೋಜನೆಗೆ ಕಳೆದ 5 ವರ್ಷಗಳಿಂದ ಅನುಮತಿ ಕೊಡದೆ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಸರಿಪಡಿಸಿ ಅನುಮತಿ ನೀಡುವಿರಾ? ದಕ್ಷಿಣ ಭಾರತದ ಎಲ್ಲಾ ಲೋಕಸಭಾ ಸೀಟುಗಳನ್ನು ಹೇಗೆ ಇವೆಯೊ ಅದೇ ರೀತಿ ಉಳಿಸುವಿರಾ” ಎಂದು ಕೃಷ್ಣ ಬೈರೇಗೌಡ ಕೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X