2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ (ಏಪ್ರಿಲ್ 21) ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, “ದ್ವಿತೀಯ ಪಿಯುಸಿಯ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ” ಎಂದು ತಿಳಿಸಿದೆ.
ಮಾರ್ಚ್ 9ರಿಂದ ಮಾರ್ಚ್ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಇದೀದ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಶುಕ್ರವಾರ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ ನಾಳೆ ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ನಾಳೆ ವೀಕ್ಷಿಸಬಹುದು.
To visit my results of 2nd puc
To see my 2nd PUC results
To see my result