ಉತ್ತರಪ್ರದೇಶದ ಡಿಯೋರಿಯಾದಲ್ಲಿ ಶನಿವಾರ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲೆಮಾರಿ ಕುಟುಂಬಕ್ಕೆ ಸೇರಿದ ಬಾಲಕಿಯ ಛಿದ್ರ ಛಿದ್ರವಾದ ದೇಹವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೇಥಿ ಮಾತಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಎಂದು ಎಸ್‌ಎಚ್‌ಒ ವೇದಪ್ರಕಾಶ್ ಶರ್ಮಾ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆ. ಗ್ರಾಮಾಂತರ | ಒಂದೇ ದಿನ 14 ಮಂದಿ ಮೇಲೆ ಬೀದಿ ನಾಯಿಗಳ ದಾಳಿ
ಶಂಕರ್ ಎಂಬವರು ತನ್ನ ಕುಟುಂಬದೊಂದಿಗೆ ದೇವಸ್ಥಾನದ ಬಳಿ ಕಳೆದ ಹಲವಾರು ತಿಂಗಳುಗಳಿಂದ ತಾತ್ಕಾಲಿಕ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. ಶನಿವಾರ ಬೆಳಿಗ್ಗೆ, ಶಂಕರ್ ಮತ್ತು ಇತರ ಕುಟುಂಬ ಸದಸ್ಯರು ಭಿಕ್ಷಾಟನೆಗೆ ಅಥವಾ ಕೆಲಸಕ್ಕಾಗಿ ಹೊರಗೆ ಹೋದಾಗ, ಅವರ ಮಗಳು ಹಿಂಬಾಲಿಸಿ ಬಂದಿದ್ದಾಳೆ. ಈ ಸಂದರ್ಭದಲ್ಲಿ ಬೀದಿ ನಾಯಿಗಳು ದಾಳಿ ಮಾಡಿದೆ ಎಂದು ಹೇಳಿದರು.
ಜನರು ನಾಯಿಗಳನ್ನು ಓಡಿಸುವಷ್ಟರಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಎಸ್‌ಎಚ್‌ಒ ತಿಳಿಸಿದರು.