ತುಮಕೂರು | ಲೋಕಸಭಾ ಚುನಾವಣೆ; ಅಂಚೆ ಮತದಾನ ಆರಂಭ

Date:

Advertisements

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏ. 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಲು ಆಗದಂತಹ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲ ಚೇತನರು ಮನೆಯಿಂದಲೇ ಮತದಾನ ಮಾಡುವ ಕಾರ್ಯ ಏ.13ರಿಂದ ಆರಂಭವಾಗಿದೆ. ತುಮಕೂರು ನಗರದ ಲೇಬರ್ ಕಾಲೋನಿಯಲ್ಲಿ ಹಿರಿಯ ಮತದಾರರು ಮತದಾನ ಮಾಡಿದ್ದಾರೆ.

ತುಮಕೂರು ನಗರದ ಲೇಬರ್ ಕಾಲೋನಿಯ ನಿವಾಸಿಗಳು ಹಾಗೂ ಹಿರಿಯ ನಾಗರಿಕರರಾದ ಶಾಂತಕುಮಾರಿ ಮತ್ತು ವೆಳ್ಳಿಯಮ್ಮ ಅವರು ತಮ್ಮ ಮನೆಯಲ್ಲೇ ಮತದಾನ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಹಣೆ ಬರಹಕ್ಕೆ ಮುದ್ರೆ ಒತ್ತಿದರು.

ಚುನಾವಣಾಧಿಕಾರಿಗಳು ಬೆಳಿಗ್ಗೆ 7 ಗಂಟೆಗೆ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರ ಮನೆಗಳಿಗೆ ಭೇಟಿ ನೀಡಿ ಮತದಾನ ಮಾಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisements

ಮನೆಯಿಂದ ಮತದಾನ ಮಾಡಿದ ಶಾಂತಕುಮಾರಿ ಮತ್ತು ವೆಳ್ಳಿಯಮ್ಮ ಅವರು ಸಂತಸ ವ್ಯಕ್ತಪಡಿಸಿದ್ದು, ನಮಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಚುನಾವಣಾ ಆಯೋಗ ಈ ರೀತಿಯ ವ್ಯವಸ್ಥೆ ಮಾಡಿರುವುದು ನಮಗೆ ತುಂಬಾ ಖುಷಿ ತಂದಿದೆ. ಇಂದು ಅಧಿಕಾರಿಗಳು ನಮ್ಮ ಮನೆಗೆ ಬಂದು ಮತದಾನ ಮಾಡಲು ಅನುವು ಮಾಡಿಕೊಟ್ಟಿದ್ದಾರೆ. ಮನೆಯಿಂದಲೇ ಮತದಾನ ಮಾಡಿರುವುದು ನಮಗೆ ತುಂಬಾ ಖುಷಿ ಕೊಟ್ಟಿದೆ ಎಂದು ಪ್ರತಿಕ್ರಿಯಿಸಿದರು.

ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಬಿ.ವಿ. ಅಶ್ವಿಜಾ ಅವರು, ಹಿರಿಯ ನಾಗರಿಕರು ಮತ್ತು ವಿಕಲಚೇತನರು ಮನೆಯಿಂದಲೇ ಮತದಾನ ಮಾಡವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ಇಂದಿನಿಂದ ಹೋಮ್ ವೋಟಿಂಗ್ ಆರಂಭವಾಗಿದ್ದು, ಏ. 18ರವರೆಗೆ ನಡೆಯಲಿದೆ. ಹಿರಿಯ ಮತದಾರರು ಹಾಗೂ ಶೇ. 40ರಷ್ಟು ಅಂಗವೈಕಲ್ಯ ಹೊಂದಿರುವವರಿಗೆ ಮನೆಯಿಂದಲೇ ಮತದಾನ ಮಾಡಲು ಫಾರಂ 12ರ ಮೂಲಕ ಅವಕಾಶ ಮಾಡಿಕೊಟ್ಟಿದ್ದೆವು. ಅದರಲ್ಲಿ 43 ವಿಶೇಷ ಚೇತನ ಮತದಾರರು ಹಾಗೂ 85 ವರ್ಷ ಮೇಲ್ಪಟ್ಟ 337 ಮತದಾರರು ಸೇರಿ ಒಟ್ಟು 380 ಮತದಾರರು ಮನೆಯಿಂದಲೇ ಮತದಾನ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ 7ಗಂಟೆಗೆ ಮನೆಯಿಂದ ಮತದಾನ ಮಾಡುವ ಕಾರ್ಯ ಆರಂಭವಾಗಿದ್ದು, 4 ಅಧಿಕಾರಿಗಳ ತಂಡ 4 ರೂಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರತೀ ತಂಡ 35 ಮತದಾರರಿಂದ ಮನೆಯಿಂದಲೇ ಮತದಾನ ಮಾಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣಾ ಆಯೋಗದ ಈ ಕಾರ್ಯದಿಂದ ಮತಗಟ್ಟೆಗಳಿಗೆ ಬಂದು ಮತದಾನ ಮಾಡಲು ಸಾಧ್ಯವಾಗದವರು ಖುಷಿ ವ್ಯಕ್ತಪಡಿಸುತ್ತಾ ಮತದಾನ ಮಾಡುತ್ತಿದ್ದಾರೆ ಎಂದರು.

ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 235 ಮತಗಟ್ಟೆಗಳಿದ್ದು, 36 ಮತಗಟ್ಟೆಗಳನ್ನು ಕ್ರಿಟಿಕಲ್ ಎಂದು ಗುರುತಿಸಿಲಾಗಿದೆ. ವಿಶೇಷವಾಗಿ 5 ಮಹಿಳಾ ಮತಗಟ್ಟೆಗಳು, 1 ವಿಕಲಚೇತನ ಮತಗಟ್ಟೆಗಳು, 1 ಧ್ಯೇಯ ಆಧಾರಿತ ಮತಗಟ್ಟೆಗಳು, 1 ಯುವ ಅಧಿಕಾರಿಗಳ ಮತಗಟ್ಟೆ ಹಾಗೂ 1 ಸಾಂಪ್ರದಾಯಿಕ ಆಧಾರಿತ ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X