ಹೆಚ್‌ಡಿಕೆ ಮಾತಿಗೆ ಪ್ರಧಾನಿ ಉತ್ತರ ನೀಡಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

Date:

Advertisements

ರಾಜ್ಯದ ನನ್ನ ತಾಯಂದಿರು ಹಾಗೂ ಅಕ್ಕ, ತಂಗಿಯರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಪಮಾನ ಮಾಡಿದ್ದು, ಈ ವಿಚಾರವಾಗಿ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕೆಂದು ನಾನು ಆಗ್ರಹಿಸುವುದಿಲ್ಲ. ಬದಲಿಗೆ ಪ್ರಧಾನಮಂತ್ರಿಗಳು ಹಾಗೂ ಎನ್‌ಡಿಎ ಮೈತ್ರಿಕೂಟದ ಸಚಿವೆಯರಾದ ನಿರ್ಮಲಾ ಸೀತರಾಮನ್, ಸ್ಮೃತಿ ಇರಾನಿ ಸ್ಪಷ್ಟನೆ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಗ್ರಹಿಸಿದರು.

ಕೊಡಗಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಪರವಾಗಿ ಭಾನುವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಯ ಮಗ, ಎನ್‌ಡಿಎ ಮೈತ್ರಿಕೂಟದ ಮಂಡ್ಯ ಅಭ್ಯರ್ಥಿ ಕುಮಾರಸ್ವಾಮಿ ಅವರು, ನಮ್ಮ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಹಿಳೆಯರ ಬಗ್ಗೆ ಬಹಳ ಕೀಳಾಗಿ ಮಾತನಾಡಿದ್ದಾರೆ”

Advertisements

ತಾಯಿ ಇಲ್ಲದಿದ್ದರೆ ನಮಗೆ ಬದುಕು ಎಲ್ಲಿದೆ? ಆದರೆ ಈ ಹೇಳಿಕೆ ಮೂಲಕ ಕುಮಾರಸ್ವಾಮಿ ಅವರು ಆ ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ರಾಜ್ಯದ ಮಹಿಳೆಯರು ಸ್ವಾಭಿಮಾನಿಗಳು. ನನಗೆ ಕರೆ ಮಾಡಿ ದಂಗೆ ಏಳುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ತಾಯಂದಿರ ಹೋರಾಟಕ್ಕೆ ನಾವು ಅಡ್ಡಿ ಮಾಡುವುದಿಲ್ಲ. ಆದರೆ ನಿಮ್ಮ ಹೋರಾಟ ಕಾನೂನಿನ ಚೌಕಟ್ಟಿನಲ್ಲಿರಲಿ ಎಂದು ಮನವಿ ಮಾಡುತ್ತೇನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ನಮ್ಮ ಸರ್ಕಾರ ಮಹಿಳೆಯರ ಬದುಕು ಕಟ್ಟಿಕೊಡಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆ ಮೂಲಕ 1.20 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. 1.50 ಕೋಟಿ ಕುಟುಂಬಗಳು ಗೃಹಜ್ಯೋತಿ ಯೋಜನೆ ಮೂಲಕ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಸುಮಾರು 1.50 ಕೋಟಿ ಕುಟುಂಬಗಳು ಅನ್ನಭಾಗ್ಯ ಯೋಜನೆ ಮೂಲಕ ಉಚಿತ ಅಕ್ಕಿ ಪಡೆಯುತ್ತಿವೆ. ಪ್ರತಿನಿತ್ಯ 60 ಲಕ್ಷ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದರು ಡಿಸಿಎಂ ಹೇಳಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಸುಮಾರು 4-5 ಸಾವಿರ ಉಳಿತಾಯವಾಗುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಪ್ರತಿಫಲವಾಗಿ ನಾವು ಓದಿ ಹೆಚ್ಚಿನ ಅಂಕ ಗಳಿಸಿದ್ದೇವೆ ಎಂದು ಪಿಯುಸಿ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳ ಉಳಿತಾಯದ ಹಣದಲ್ಲಿ ಮಹಿಳೆಯರು ರೆಫ್ರೀಜರೇಟರ್, ಟಿವಿ, ಮಕ್ಕಳಿಗೆ ಲ್ಯಾಪ್ ಟಾಪ್, ಔಷಧಿಗಳನ್ನು ಖರೀದಿಸಿದ್ದಾರೆ. ಈ ಹಣದಲ್ಲಿ ಮಹಿಳೆಯರು ತಮ್ಮ ಮಕ್ಕಳ ಭವಿಷ್ಯ ರೂಪಿಸುತ್ತಿದ್ದಾರೆ. ಇಂತಹ ಮಹಿಳೆಯರನ್ನು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಈ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ನಾನು ಆಗ್ರಹಿಸುವುದಿಲ್ಲ. ಪ್ರಧಾನಮಂತ್ರಿಗಳು, ಎನ್‌ಡಿಎ ಮೈತ್ರಿ ಕೂಟದ ಪ್ರಮುಖ ಮಹಿಳಾ ನಾಯಕಿಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಅವರು ಇದಕ್ಕೆ ಉತ್ತರ ನೀಡಬೇಕು. ಇಂತಹವರನ್ನು ನಿಮ್ಮ ಮೈತ್ರಿಕೂಟದಲ್ಲಿ ಹೇಗೆ ಸೇರಿಸಿಕೊಂಡಿದ್ದಾರೆ? ನಮ್ಮ ತಾಯಿ, ತಂಗಿಯರಿಗೆ ಈ ರೀತಿ ಅಪಮಾನ ಮಾಡಿದ್ದು, ಇದನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಹೆಚ್‌ಡಿಕೆ ವಿರುದ್ಧ ಹರಿಹಾಯ್ದರು.

ನಾವು ಈ ದೇಶವನ್ನು ಭಾರತ ಮಾತೆ ಎನ್ನುತ್ತೇವೆ, ನಮ್ಮ ನಾಡ ದೇವತೆ ಚಾಮುಂಡೇಶ್ವರಿ. ನಾವು ನಮ್ಮ ಗ್ಯಾರಂಟಿ ಯೋಜನೆಯ ಕಾರ್ಡ್ ಅನ್ನು ತಾಯಿ ಚಾಮುಂಡೇಶ್ವರಿ ಪಾದಕ್ಕಿಟ್ಟು ಪೂಜೆ ಮಾಡಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಶಕ್ತಿ ಯೋಜನೆ ಮೂಲಕ ಮಹಿಳೆಯರು ಕೆಲಸಕ್ಕೆ, ದೇವಾಲಯಗಳಿಗೆ, ತಮ್ಮ ತವರು ಮನೆಗೆ, ಸಹೋದರರ ಮನೆಗೆ ಹೋಗುತ್ತಿದ್ದಾರೆ. ಆದರೆ ಇಂತಹ ತಾಯಂದಿರ ಪ್ರಯಾಣದ ಬಗ್ಗೆ ಈ ರೀತಿ ಹೇಳಿರುವುದಕ್ಕೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸಚಿವೆಯರು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಲೂಟಿಯಾಗುತ್ತಿದ್ದ ಹಣದಲ್ಲಿ ಗ್ಯಾರಂಟಿ ಯೋಜನೆ

ಗ್ಯಾರಂಟಿ ಯೋಜನೆಗೆ ಹಣ ಎಲ್ಲಿಂದ ತರುತ್ತಾರೆ ಎಂದು ಕೇಳುತ್ತಿರುವ ಬಗ್ಗೆ ಕೇಳಿದಾಗ, “ನಾವು ರಾಜ್ಯದಲ್ಲಿ ಲೂಟಿಯಾಗುತ್ತಿದ್ದ ಹಣವನ್ನು ತಪ್ಪಿಸಿ, ಆ ಹಣವನ್ನು ಬಜೆಟ್ ಮೂಲಕ ಈ ಯೋಜನೆಗಳಿಗೆ ಮೀಸಲಿಟ್ಟು ನೀಡುತ್ತಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಬಗ್ಗೆ ಕೇಳಿದಾಗ, “ಬಿಜೆಪಿ ಪ್ರಣಾಳಿಕೆಯಲ್ಲಿ ಏನಿದೆ? ಅವರು ತಮ್ಮ ಬಜೆಟ್ ಪುಸ್ತಕವನ್ನೇ ಪ್ರಣಾಳಿಕೆ ಮಾಡಿದ್ದಾರೆ. ಅದರ ಹೊರತಾಗಿ ಬೇರೆ ಏನೂ ಇಲ್ಲ. ಅವರ ಪ್ರಣಾಳಿಕೆಯಲ್ಲಿ ನಮ್ಮಂತೆ ಯಾವುದೇ ಗ್ಯಾರಂಟಿ ಕೊಟ್ಟಿಲ್ಲ” ಎಂದು ತಿಳಿಸಿದರು.

ಯಾರಿಗೆ ಉದ್ಯೋಗ ಕೊಟ್ಟಿದ್ದಾರೆ?

25 ಕೋಟಿ ಉದ್ಯೋಗ ಕೊಟ್ಟಿದ್ದೇವೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, “ಯಾರಿಗೆ ಉದ್ಯೋಗ ನೀಡಿದ್ದಾರೆ? ನಾವು ಈಗ ಕೊಡುಗಿನಲ್ಲಿದ್ದೇವೆ. ಕೊಡಗಿನಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಸಮೀಕ್ಷೆ ನಡೆಸಿ. ನಂತರ ಮಾತನಾಡುತ್ತೇನೆ” ಎಂದು ತಿಳಿಸಿದರು.

ಮೈಸೂರು ಹಾಗೂ ಕೊಡಗು ಕ್ಷೇತ್ರದಲ್ಲಿ ಒಕ್ಕಲಿಗರ ಅಸ್ತ್ರ ಯಶಸ್ವಿಯಾಗುತ್ತದೆಯೇ ಎಂದು ಕೇಳಿದಾಗ, “ಕಳೆದ 40 ವರ್ಷಗಳಿಂದ ಈ ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಟಿಕೆಟ್ ನೀಡಿರಲಿಲ್ಲ. ಒಕ್ಕಲಿಗರಿಗೆ ಟಿಕೆಟ್ ನೀಡಬೇಕು ಎಂದು ಪಕ್ಷದಲ್ಲಿ ಬೇಡಿಕೆ ಇತ್ತು. ಈ ಕ್ಷೇತ್ರ ಸೇರಿದಂತೆ ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಒಕ್ಕಲಿಗರಿಗೆ ಟಿಕೆಟ್ ನೀಡಿದ್ದೇವೆ. ಇಲ್ಲಿನ ಜನ ಬುದ್ದಿವಂತರು ಕಳೆದ ಚುನಾವಣೆಯಲ್ಲಿ ನಮಗೆ 2 ಕ್ಷೇತ್ರ ಕೊಟ್ಟಿದ್ದಾರೆ. ಜನ ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಅವಕಾಶ ಕೊಟ್ಟಿ ಆಗಿದೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡುವ ಸರದಿ” ಎಂದು ತಿಳಿಸಿದರು.

ಮೈಸೂರು – ಕೊಡಗು ಲೋಕಸಭೆ ಅಭ್ಯರ್ಥಿ ಲಕ್ಷ್ಮಣ್ ಪರ ಕೊಡಗಿನಲ್ಲಿ ಭಾನುವಾರ ನಡೆದ ಚುನಾವಣೆ ಪ್ರಚಾರದ ಪ್ರಜಾಧ್ವನಿ-2 ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಹಿರಿಯ ನಾಯಕ ಎಂ ಸಿ ನಾಣಯ್ಯ ಮತ್ತಿತರರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X