ಕೇರಳ | ಪ್ರಧಾನಿ ಭದ್ರತೆಗೆ ಕಟ್ಟಿದ್ದ ಹಗ್ಗಕ್ಕೆ ಸಿಲುಕಿ ಬೈಕ್ ಸವಾರ ಸಾವು

Date:

Advertisements

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಭದ್ರತೆಯ ಭಾಗವಾಗಿ ರಸ್ತೆಯುದ್ದಕ್ಕೂ ಕಟ್ಟಲಾಗಿದ್ದ ಹಗ್ಗಕ್ಕೆ ಸಿಲುಕಿ ಬೈಕ್‌ ಸವಾರನೊಬ್ಬ ಮೃತಪಟ್ಟ ಘಟನೆ ಕೇರಳ ದ ಕೊಚ್ಚಿಯಲ್ಲಿ ನಡೆದಿದೆ.

ಮೃತರನ್ನು ವಡುತಲ ನಿವಾಸಿ ಮನೋಜ್‌ ಉನ್ನಿ ಎಂದು ಗುರುತಿಸಲಾಗಿದ್ದು, ಘಟನೆಯು ಭಾನುವಾರ(ಏ.14) ರಾತ್ರಿ 10.30 ಗಂಟೆಗೆ ಸಂಭವಿಸಿದೆ.

ಹಗ್ಗಕ್ಕೆ ಸಿಲುಕಿ ಗಾಯಗೊಂಡಿದ್ದ ಉನ್ನಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೋಯ್ದರು ಬದುಕಿಸಲು ಸಾಧ್ಯವಾಗಲಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ರಸ್ತೆಯುದ್ದಕ್ಕೂ ಯಾವುದೇ ಎಚ್ಚರಿಕೆಯನ್ನು ನೀಡದೆ ಹಗ್ಗವನ್ನು ಕಟ್ಟಲಾಗಿದ್ದು, ಸಾರ್ವಜನಿಕರಿಗೆ ಹಾಗೂ ಬೈಕ್‌ ಸವಾರರಿಗೆ ರಾತ್ರಿಯಲ್ಲಿ ಹಗ್ಗವಿರುವುದನ್ನು ಪತ್ತೆಹಚ್ಚಲು ಕಷ್ಟವಾಗುತ್ತದೆ ಎಂದು ಉನ್ನಿಯ ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಧಾನಿ ಭೇಟಿಯ ಭದ್ರತೆ ಭಾಗವಾಗಿ ಹಗ್ಗಗಳನ್ನು ಕಟ್ಟಲಾಗಿದೆ.ಆದಾಗ್ಯೂ, ರಾತ್ರಿಯಲ್ಲಿ ಸಾರ್ವಜನಿಕರಿಗೆ ಗೋಚರಿಸುವ ಹಾಗೆ ರಿಬ್ಬನ್‌ ರೀತಿಯ ಯಾವುದೇ ವಸ್ತುಗಳನ್ನು ಕಟ್ಟಿಲ್ಲ” ಎಂದು ಮೃತನ ಸಂಬಂಧಿಕರೊಬ್ಬರು ಹೇಳಿದ್ದಾರೆ.

ಬಿಜೆಪಿಯ ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಕೇರಳದ ಎರಡು ಸಾರ್ವಜನಿಕ ಸ್ಥಳ್ಗಗಳಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

Download Eedina App Android / iOS

X