ಗದಗ | ಹೊಳೆ ಮಣ್ಣೂರಲ್ಲಿ ಮನರೇಗಾ ಕೂಲಿ ಕಾರ್ಮಿಕರೊಂದಿಗೆ ಅಂಬೇಡ್ಕರ್ ಜಯಂತಿ ಆಚರಣೆ 

Date:

Advertisements

ಭಾರತ ಕಂಡ ಶ್ರೇಷ್ಟ ಮಹಾ ನಾಯಕರಲ್ಲಿ ಒಬ್ಬರಾಗಿರುವ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಶ್ರಮಿಕ ವರ್ಗವಾದ ತಮ್ಮೆಲ್ಲರ ಜತೆಗೆ ಮಾಡುತ್ತಿರುವುದು ನಮ್ಮ ನಿಮ್ಮೇಲ್ಲರ ಪುಣ್ಯ. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೊಳೆ ಮಣ್ಣೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ ತಿಳಿಸಿದರು.

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಮಣ್ಣೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಡೆದ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನ ಶಿಲ್ಪಿ’ ಡಾ ಬಿ ಆರ್‌ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಮ್ಮ ಭಾರತೀಯರಿಗೆ ಮೂರು ಮುಖ್ಯ ತತ್ವಗಳನ್ನು ಅಂಬೇಡ್ಕರ್ ಅವರು ನೀಡಿದ್ದಾರೆ.‌ ಅವುಗಳೆಂದರೆ, ʼಶಿಕ್ಷಣ, ಸಂಘಟನೆ, ಹೋರಾಟʼ ಈ ತತ್ವಗಳ ದಿಸೆಯಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು” ಎಂದರು.

Advertisements

“ಪ್ರಪಂಚದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. ದೇಶದ ಸಾಮಾನ್ಯ ಹಾಗೂ ಕಟ್ಟ ಕಡೆಯ ಮನುಷ್ಯನಿಗೆ ಎಲ್ಲ ಮೂಲಭೂತ ಹಕ್ಕುಗಳನ್ನು ದಯಪಾಲಿಸಿದ್ದು ಭಾರತದ ಶ್ರೇಷ್ಟ ಸಂವಿಧಾನ. ಅಂತಹ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಇಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ನಡೆಯುವ ಸ್ಥಳದಲ್ಲಿ ನೂರಾರು ಕಾರ್ಮಿಕರ ಸಮಕ್ಷಮದಲ್ಲಿ ಆಚರಣೆ ಮಾಡುತ್ತಿರುವುದು ಅರ್ಥಪೂರ್ಣವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಯದುವೀರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದ ಮೋದಿ: ಪ್ರಧಾನಿ ಪ್ರಮಾದಕ್ಕೆ ಕಾಲೆಳೆದ ನೆಟ್ಟಿಗರು

ಇದೇ ಸಂದರ್ಭದಲ್ಲಿ ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಗೆ ತಮ್ಮ ಅಮೂಲ್ಯವಾದ ಮತವನ್ನು ಕಡ್ಡಾಯವಾಗಿ ಚಲಾಯಿಸುವಂತೆ ಹಾಗೂ ಮತದಾನದಿಂದ ಯಾರೂ ಕೂಡಾ ಹೊರಗೆ ಉಳಿಯದಂತೆ ಮಾಹಿತಿ ನೀಡಿದ ಅವರು ಗ್ರಾಮದಿಂದ ಉದ್ಯೋಗದ ನಿಮಿತ್ಯ ಬೇರೆ ಗ್ರಾಮಗಳಿಗೆ ವಲಸೆ ಹೋಗಿರುವವರು ಕಡ್ಡಾಯವಾಗಿ ಅಂದು ಗ್ರಾಮಕ್ಕೆ ಹಾಗೂ ತಮ್ಮ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕೆಂದು ಕೋರಿ ಮತದಾನದ ಕುರಿತು ಪ್ರತಿಜ್ಞಾವಿಧಿ ಭೋದಿಸಿದರು.

ಈ ಸಂದರ್ಭದಲ್ಲಿ ಹೊಳೆ ಮಣ್ಣೂರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ನೂರಾರು ಕೂಲಿ ಕಾರ್ಮಿಕರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X