ತುಮಕೂರು | ಸಮಾನತೆಯ ತತ್ವವನ್ನು ಪ್ರತಿಪಾದಿಸಿದವರು ಬಾಬಾ ಸಾಹೇಬ್ ಅಂಬೇಡ್ಕರ್‌: ಡಿಸಿ ಶುಭ ಕಲ್ಯಾಣ್

Date:

Advertisements

ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ದೃಷ್ಟಿಯಲ್ಲಿ ಸಮಾನರು. ಎಲ್ಲರನ್ನು ಸಮಾನತೆಯಿಂದ ಕಾಣಬೇಕೆಂಬ ಬಾಬಾ ಸಾಹೇಬರ ಸಮಾನತೆಯ ಸಿದ್ಧಾಂತವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.

ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್‌ರವರ 133ನೇ ಜನ್ಮ ದಿನಾಚರಣೆ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸತಿ ಸಹಗಮನ ಪದ್ಧತಿ, ಬಾಲ್ಯ ವಿವಾಹ, ದೇವದಾಸಿ ಪದ್ಧತಿಗಳ ವಿರುದ್ಧ ಹೋರಾಡಿ ಮಹಿಳೆಯರಿಗೆ ಆತ್ಮ ಗೌರವವನ್ನು ತಂದು ಕೊಟ್ಟು ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುಕ್ತವಾಗಿ ಭಾಗವಹಿಸಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ ಎಂದು ತಿಳಿಸಿದರು.

Advertisements

ನಾನು ಇಂದು ಒಬ್ಬ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂದಿನ ಬಾಬಾ ಸಾಹೇಬರ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನಗೆ ಸಂತಸ ಹಾಗೂ ಹೆಮ್ಮೆ ಉಂಟು ಮಾಡಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಭಾರತ ದೇಶಕ್ಕೆ ಅಂಬೇಡ್ಕರ್‌ರವರು ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ಶತಮಾನಗಳ ಕಾಲ ಶಾಶ್ವತವಾಗಿ ಉಳಿಯುವಂತ ಸಂವಿಧಾನ ನಮ್ಮದಾಗಿದೆ. ಪ್ರತಿಯೊಬ್ಬರೂ ಅಂಬೇಡ್ಕರ್ ರವರ ಸಿದ್ದಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಬಡತನದಲ್ಲಿ ಹುಟ್ಟಿ ಪ್ರಪಂಚವೇ ತಿರುಗಿ ನೋಡುವಂತೆ, ದೇಶವೇ ಹೆಮ್ಮೆ ಪಡುವಂತೆ ಎತ್ತರಕ್ಕೆ ಬೆಳೆದವರು ಅಂಬೇಡ್ಕರ್. ಇವರು ನೀಡಿರುವ ಸಂವಿಧಾನದಿಂದಲೇ ದೇಶವು ಇಂದಿಗೂ ಸುಭೀಕ್ಷವಾಗಿ, ನ್ಯಾಯಯುತವಾಗಿ ಸಾಗುತ್ತಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕಾರಳೆ ಮಾತನಾಡಿ, ಭಾರತ ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಬಹಳ ಮುಖ್ಯವಾಗಿದ್ದು, ಸಂವಿಧಾನದಲ್ಲಿರುವ ತತ್ವಗಳನ್ನು ನಮ್ಮ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಸೀಲ್ದಾರ್ ಎಂ.ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಬೆಂಗಳೂರು ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಚ್. ನಾರಾಯಣಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ದಲಿತ ಸಂಘದ ಹೋರಾಟಗಾರರು, ಪ್ರಗತಿಪರ ಹೋರಾಟಗಾರರು, ಸಾರ್ವಜನಿಕರು ಸೇರಿದಂತೆ ಮತ್ತಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X