ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ

Date:

Advertisements

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ತೆರಳುತ್ತಿದ್ದ ಹೆಲಿಕಾಪ್ಟರ್‌ಅನ್ನು ತಪಾಸಣೆಗೊಳಪಡಿಸಿದ್ದಾರೆ.

ನೀಲಗಿರಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ನಂತರ ವೈಮಾನಿಕ ದಳದ ಅಧಿಕಾರಿಗಳು ತಪಾಸಣೆ ನಡೆಸಿದರು.

ಕೇರಳದ ತಮ್ಮ ಲೋಕಸಭಾ ಕ್ಷೇತ್ರ ವಯನಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ರಾಹುಲ್‌ ಗಾಂಧಿ ಕೇರಳದಲ್ಲಿ ರೋಡ್‌ಶೋ, ಸಾರ್ವಜನಿಕ ಭಾಷಣ ಸೇರಿದಂತೆ ಹಲವು ಪ್ರಚಾರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

2019ರಲ್ಲಿ ವಯನಾಡುವಿನಿಂದ ಸಂಸದರಾಗಿದ್ದ ರಾಹುಲ್ ಗಾಂಧಿ, ಈಗ ಎರಡನೇ ಬಾರಿ ಕಣಕ್ಕಿಳಿದಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷ ಸಿಪಿಐನ ಅನ್ನೇ ರಾಜ ಹಾಗೂ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಕೂಡ ಸ್ಪರ್ಧಿಸಿದ್ದಾರೆ.

ಕೇರಳದ 20 ಕ್ಷೇತ್ರಗಳ ಲೋಕಸಭಾ ಚುನಾವಣೆಯು ಒಂದೇ ಹಂತದಲ್ಲಿ ಏ.26 ರಂದು ನಡೆಯಲಿದೆ. ತಮಿಳುನಾಡಿನಲ್ಲೂ ಕೂಡ ಏ.19ರಂದು 39 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

Download Eedina App Android / iOS

X