ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್ ಸೃಷ್ಟಿ; ಸಿದ್ದರಾಮಯ್ಯ ವಿರುದ್ಧ ಅವಹೇಳನ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ.

ಅಲ್ಲದೇ ಬೆಂಗಳೂರಿಮ ಆರ್ ಆರ್ ನಗರ ವಿಧಾನಸಭೆ ಕ್ಷೇತ್ರದಲ್ಲಿಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸುಮಾ ವಿರುದ್ಧವೂ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ ಎಂಬ ನಕಲಿ ಫೇಸ್‌ಬುಕ್ ಖಾತೆಯ ಡಿಪಿಯಲ್ಲಿ ಯತೀಂದ್ರ ಫೋಟೋ ಹಾಕಿರುವ ಕಿಡಿಗೇಡಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಶಶಾಂಕ್ ಗೌಡ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Advertisements

ಕಿಡಿಗೇಡಿಗಳು ಅಶ್ಲೀಲ ಪದಗಳಿಂದ ನಿಂದಿಸಿ ಜತೆಗೆ ಅಸಭ್ಯವಾಗಿ ಫೋಟೋಗಳನ್ನು ಹಾಕಿ ಸಾರ್ವಜನಿಕರನ್ನು ಪ್ರಚೋದಿಸುವ ಪೋಸ್ಟ್‌ ಹಾಕಲಾಗಿದೆ. ಸಿಎಂ ಸಿದ್ದರಾಮಯ್ಯರ ಚಿತ್ರ ತಿರುಚಿ, ಅಶ್ಲೀಲದೊಂದಿಗೆ ಅವಾಚ್ಯ ಶಬ್ಧಗಳನ್ನು ಬಳಿಸಿ ಅನೇಕ ಪೋಸ್ಟ್‌ಗಳನ್ನು ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನುಕ್ರಮಕ್ಕೆ ಒತ್ತಾಯಿಸಿದ್ದಾರೆ. ಈಗಾಗಲೇ ಪೊಲೀಸರು ನಕಲಿ ಫೇಸ್‌ಬುಕ್ ಪೇಜ್‌ ಡಿಲೀಟ್ ಮಾಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X