ದಾವಣಗೆರೆ | ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಾಗರ್

Date:

Advertisements

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ಸಾಗರ್ ಎಲ್.ಎಂ.ಎಚ್ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು ಲೋಕಸಭೆಗೆ ನಮ್ಮ ಕ್ಷೇತ್ರದಿಂದ ಮೊಟ್ಟ ಮೊದಲ ಮಹಿಳಾ ಸಂಸದರಾಗಿ ಆಯ್ಕೆಯಾಗುತ್ತಾರೆ. ಈ ನಿಟ್ಟಿನಲ್ಲಿ ಹಗಲು ರಾತ್ರಿ ನಾವು ಪಕ್ಷಕ್ಕೆ ದುಡಿಯುತ್ತೇವೆ ಎಂದು ಹೇಳಿದರು.

ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಸಂಘಟನಾ ಶಕ್ತಿ ಮತ್ತು ಅವರ ಉತ್ತಮ ವ್ಯಕ್ತಿತ್ವ ನೋಡಿ ಪಕ್ಷ ಟಿಕೆಟ್ ನೀಡಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಪ್ರತೀ ಮನೆ ಮನೆಗೂ ಸಹ ತೆರಳಿ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ಜನರಿಗೆ ತಿಳಿಸುತ್ತಿದ್ದೇವೆ. ನುಡಿದಂತೆ ನಡೆದ ಸರ್ಕಾರ ಎಂದರೆ ನಮ್ಮ ಕಾಂಗ್ರೆಸ್ ಸರ್ಕಾರ. ಹೀಗಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

Advertisements

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿ ಇದಕ್ಕೆ ಸಾರಥಿಯಾಗಿ ಸಚಿವರಾದ ಮಲ್ಲಿಕಾರ್ಜುನ್ ರವರು ಹಾಗೂ ಶಾಸಕರು, ಹಿರಿಯರಾದ ಡಾ. ಶಾಮನೂರು ಶಿವಶಂಕರಪ್ಪ ಮುನ್ನಡೆಸಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಈ ಚುನಾವಣೆ ನಡೆಯುತ್ತಿದ್ದು ಎಲ್ಲಾ ಮುಖಂಡರು ಸಹ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಲೆ ಇದೆ. ಜನರು ಸಹ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂದು ಸಾಗರ್ ಎಲ್.ಎಂ.ಎಚ್ ತಿಳಿಸಿದರು.

ನಾವು ಮಾಡಿದ ಸಾಧನೆ ಸರ್ಕಾರದ ಜಾರಿಗೆ ತಂದ ಯೋಜನೆಗಳೇ ಶ್ರೀರಕ್ಷೆಯಾಗಲಿದೆ. ಬಿಜೆಪಿ ಪಕ್ಷದಂತೆ ಒಬ್ಬ ವ್ಯಕ್ತಿ ಹೆಸರಲ್ಲಿ ಮತ ಕೇಳುತ್ತಿಲ್ಲ. ನಮ್ಮ ಸಾಧನೆಗಳನ್ನೇ ನಾವು ಅಸ್ತವಾಗಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ ಎಂದರು. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ದಲಿತ ಹಿಂದುಳಿದ ಅಲ್ಪಸಂಖ್ಯಾತ ಸೇರಿದಂತೆ ಎಲ್ಲ ಸಮಾಜದವರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡುತ್ತಿದ್ದಾರೆ ಎಂದರು.

ಡಾ. ಪ್ರಭಾ ಮಲ್ಲಿಕಾರ್ಜನ್ ಅವರು ವಿದ್ಯಾವಂತರಿದ್ದಾರೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತಾರೆ, ಬಡವರು, ಅಶಕ್ತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದಾಖಲೆ ಬರೆದು ಇತಿಹಾಸ ಸೃಷ್ಟಿಸಲಿದ್ದಾರೆ ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X