ಬಿಜೆಪಿ-ಜೆಡಿಎಸ್ ಹಾಲು-ಜೇನಿನಂತೆ ಒಂದಾಗಿದ್ದು, ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ: ಯಡಿಯೂರಪ್ಪ

Date:

Advertisements

“ಜಾತಿ ವಿಷ ಬೀಜ ಬಿತ್ತಿ ಮತ ಪಡೆಯುವ ಕಾಂಗ್ರೆಸ್ ತಂತ್ರ ಇನ್ಮುಂದೆ ನಡೆಯಲ್ಲ. ಈಗಾಗಲೇ ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿ ಹಾಲು ಜೇನಿನಂತೆ ಒಂದಾಗಿದ್ದು, ಕೂಡಿ ಕೆಲಸ ಮಾಡುತ್ತಿದ್ದೇವೆ, ನಮ್ಮನ್ನು ಬೇರ್ಪಡಿಸಲು ಕಾಂಗ್ರೆಸ್‌ನಿಂದ ಸಾಧ್ಯವಿಲ್ಲ” ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.

ಚಿತ್ರದುರ್ಗದಲ್ಲಿ ಮಂಗಳವಾರ ಆಯೋಜಿಸಿದ್ದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, “ವಾತಾವರಣ ನಮಗೆ ತುಂಬಾ ಅನುಕೂಲಕರವಾಗಿದ್ದು, ಎಲ್ಲೆಡೆ ಮೋದಿ ಮೋದಿ ಘೋಷಣೆ ಕೇಳುತ್ತಿದೆ. ದೇವೇಗೌಡರು ಸಹ ರಾಜ್ಯದಲ್ಲಿ ಸಂಚರಿಸಿ ಮತಯಾಚನೆ‌ ಮಾಡುತ್ತಿದ್ದಾರೆ. ಕಾರಜೋಳ 2 ಲಕ್ಷ‌ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ. ನನಗೀಗ 82ವರ್ಷ. ದೇವರು ಶಕ್ತಿ‌ಕೊಟ್ಟರೆ ಇನ್ನೊಂದು ವಿಧಾನಸಭೆ, ಲೋಕಸಭೆ ಚುನಾವಣೆ ಮಾಡುತ್ತೇನೆ” ಎಂದರು.

“ಭದ್ರಾ ಯೋಜನೆಗೆ ರೂ. 5,300ಕೋಟಿ  ಈವತ್ತಲ್ಲ‌, ನಾಳೆ ಬರಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ತಡವಾಗಿರಬಹುದು. ಮೋದಿ, ಅಮಿತ್ ಶಾ ಜೊತೆ ಮಾತಾಡಿ ಶೀಘ್ರ ಅನುದಾನ ತರುತ್ತೇವೆ” ಎಂದು ತಿಳಿಸಿದರು

“ಕಿಸಾನ್ ಸಮ್ಮಾನ್ ಯೋಜನೆ ಅಡಿ 4ಸಾವಿರ ರೂ.‌ಕೊಡುವುದನ್ನು ಸಿದ್ಧರಾಮಯ್ಯ ಸರ್ಕಾರ ನಿಲ್ಲಿಸಿದೆ. ಇದಷ್ಟೇ ಅಲ್ಲ, ದುಡ್ಡಿಲ್ಲದೆ ಕಾಂಗ್ರೆಸ್ ಸರ್ಕಾರ ಭಾಗ್ಯ ಲಕ್ಷ್ಮಿ ಯೋಜನೆ, ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸೇರಿದಂತೆ ಹಲವು ಯೋಜನೆ ನಿಲ್ಲಿಸಿದೆ” ಎಂದು ವಾಗ್ದಾಳಿ ನಡೆಸಿದರು.

“ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಿದರೆ ನನ್ನನ್ನು ಗೆಲ್ಲಿಸಿದಂತೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ತಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂದು ಕಾಂಗ್ರೆಸ್ ಹೇಳಲಿ. ಮೋದಿ ಎದುರು ಮತ್ತೊಂದು ಹೆಸರು ಹೇಳುವ ಧೈರ್ಯ ‌ಅವರಿಗಿಲ್ಲ” ಎಂದು ಹೇಳಿದರು.

ಬೇಡ ಎಂದರೂ ಸ್ಪರ್ಧೆ

ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, “20ವರ್ಷದಿಂದ ನನ್ನನ್ನು ಒಡಹುಟ್ಟಿದ ಸಹೋದರನಂತೆ ಬಿಎಸ್‌ವೈ ಕಂಡಿದ್ದಾರೆ. ನಾನು ಈ ಮಟ್ಟಕ್ಕೆ ಬೆಳೆಯಲು ಯಡಿಯೂರಪ್ಪ ಕಾರಣ. ನಾನು ಬೇಡ ಅಂದರೂ ಬಿಎಸ್‌ವೈ ಮತ್ತು ವರಿಷ್ಠರು ಸ್ಪರ್ಧೆಗಿಳಿಸಿದ್ದಾರೆ. ಯಾವ ಜನ್ಮದ ಋಣಾನುಬಂಧವೋ ಗೊತ್ತಿಲ್ಲ. ಬಸವಣ್ಣನ ನಾಡಿನಲ್ಲಿ ಹುಟ್ಟಿ‌ ಚಿತ್ರದುರ್ಗಕ್ಕೆ ಬಂದಿದ್ದೇನೆ. ಈ ಕ್ಷೇತ್ರದ ಜನರ ಋಣ ನನ್ನ ಮೇಲಿದೆ, ಆ ಋಣ ತೀರಿಸಲು ಭಗವಂತ ಅವಕಾಶ ನೀಡಿದ್ದಾನೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

Download Eedina App Android / iOS

X