ಮತಪತ್ರ ವ್ಯವಸ್ಥೆಗೆ ಹಿಂತಿರುಗಬೇಕಾಗುತ್ತದೆ: ಸುಪ್ರೀಂ ಕೋರ್ಟ್

Date:

Advertisements

ವಿದ್ಯುನ್ಮಾನ ಮತ ಯಂತ್ರ ವ್ಯವಸ್ಥೆಯ ವಿವಿಪ್ಯಾಟ್ ಮೂಲಕ ಮತಚೀಟಿ ಕಲ್ಪಿಸುವ ಅರ್ಜಿ ಹಾಗೂ ಗುಪ್ತ ಮತಪತ್ರ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.

“60ರ ದಶಕದಲ್ಲಿ ಇದ್ದ ನಮಗೆ ಮತಪತ್ರ ವ್ಯವಸ್ಥೆಯಿಂದ ಏನು ಉಂಟಾಗಿತ್ತು ಎಂಬುದು ಗೊತ್ತಿದೆ. ನಿಮಗೂ ಗೊತ್ತಿರಬಹುದು ಆದರೆ ನಾವು ಅದನ್ನು ಮರೆತಿಲ್ಲ” ಎಂದು ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಅರ್ಜಿದಾರರ ಮನವಿಗೆ ತೀಕ್ಷವಾಗಿ ಪ್ರತಿಕ್ರಿಯೆ ನೀಡಿದರು.

“ನಾವು ಮತಪತ್ರ ವ್ಯವಸ್ಥೆಗೆ ಮರಳಬೇಕಾಗುತ್ತದೆ. ಇನ್ನೊಂದು ಆಯ್ಕೆ ಎಂದರೆ ಮತದಾರರ ಕೈಗೆ ವಿವಿಪ್ಯಾಟ್‌ ಮೂಲಕ ಮತಚೀಟಿಯನ್ನು ನೀಡಬೇಕಾಗುತ್ತದೆ. ಇಲ್ಲದಿದ್ದರೆ ಚೀಟಿಯು ಯಂತ್ರದೊಳಗೆ ಬೀಳುತ್ತದೆ ಅದನ್ನು ಮತದಾರರಿಗೆ ನೀಡಿ ಅವರು ಮತ್ತೆ ಮತಯಂತ್ರಕ್ಕೆ ಹಾಕಬೇಕಾಗುತ್ತದೆ” ಎಂದು ನ್ಯಾಯಮೂರ್ತಿಗಳು ಮುಂದಿನ ವ್ಯವಸ್ಥೆಯ ಗಂಭೀರತೆಯ ಬಗ್ಗೆ ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

ಅರ್ಜಿದಾರರೊಬ್ಬರು ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್‌ 1ರಂದು ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿತ್ತು.

ವಿವಿಧ ರಾಜಕೀಯ ಪಕ್ಷಗಳು ಹಾಗೂ ಕಾರ್ಯಕರ್ತರು ಎತ್ತಿರುವ ಗಂಭೀರ ಕಾಳಜಿಯು ಭವಿಷ್ಯದ ಚುನಾವಣೆಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಹಾದಿಗೆ ಸುಗಮವಾಗಲಿದೆ. ಮತದಾರರು ಪರಿಶೀಲಿಸುವ ಮತ್ತು ಮತ ಎಣಿಸುವ ಹಾದಿಯಲ್ಲಿನ ಬದಲಾವಣೆಗಳಿಗೆ ಗಮನಾರ್ಹ ಫಲಿತಾಂಶ ದೊರಕಿಸುವುದು ಈ ಅರ್ಜಿಯ ಉದ್ದೇಶವಾಗಿದೆ.

ಸ್ವಯಂ ಸೇವಾ ಸಂಸ್ಥೆ ಎಡಿಆರ್, ನಾಗರಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್‌ವಾಲ್‌ ವಿವಿಪ್ಯಾಟ್ ಚೀಟಿಗಳು ಮತದಾರರ ಕೈಗೆ ತಲುಪಿಸುವ ವ್ಯವಸ್ಥೆ ಮತಯಂತ್ರದಲ್ಲಿ ದೊರಕಿಸಬೇಕೆಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಂದಿನ ವಿಚಾರಣೆಯನ್ನು ಗುರುವಾರ(ಏ.18)ಕ್ಕೆ ಮುಂದೂಡಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X