ಬ್ರೇಕ್ ಫೇಲ್ ಆದ ಪರಿಣಾಮ ರಾಜಹಂಸ ಬಸ್ ಪಲ್ಟಿಯಾಗಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.
ಮಂಗಳವಾರ ಸಂಜೆ, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ತಿಮ್ಮಾಪುರ ಬಳಿ ಬ್ರೇಕ್ ಫೇಲ್ ಆಗಿ, ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದೆ. ಬಳಿಕ, ಪಲ್ಟಿಯಾಗಿದೆ. ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ 10 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ.
ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.