ಕನ್ನಡ ಸೇವೆ ಮಾಡಿದ ಅಪರೂಪದ ನಟ ದ್ವಾರಕೀಶ್: ಸಿಎಂ ಸಿದ್ದರಾಮಯ್ಯ ಬಣ್ಣನೆ

Date:

Advertisements

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಕನ್ನಡ ಚಿತ್ರರಂಗದಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಕೊಡುಗೆ ಹಾಗೂ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಯಲ್ಲದೆ ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು” ಎಂದರು.

Advertisements

“ಡಾ. ರಾಜ್ ಕುಮಾರ್ ಮತ್ತು ಅವರ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿ ಯೂ ಅಭಿನಯಿಸಿದ್ದರು. ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಾಜಕೀಯ, ಸಿನಿಮಾ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೆವು” ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

“ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ” ಎಂದು ದೇವರಲ್ಲಿ ಪ್ರಾರ್ಥಿಸುವುದು ಸಂತಾಪ ವ್ಯಕ್ತಡಿಸಿದರು.

ನೇತ್ರದಾನ ಮೂಲಕ ಸಮಾಜಮುಖಿ ಕೆಲಸ

“ಅವರ ಎರಡು ಕಣ್ಣುಗಳನ್ನು ದಾನಮಾಡಿರುವುದು ಶ್ಲಾಘನೀಯ. ಸತ್ತ ನಂತರವೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಕೆಲ ವರ್ಷಗಳ ಹಿಂದೆ ಅವರ ಧರ್ಮಪತ್ನಿಯವರು ಮೃತಪಟ್ಟ ದಿನವೇ ದ್ವಾರಕೀಶ್ ಅವರೂ ಮೃತಪಟ್ಟಿದ್ದು, ಅವರಿಬ್ಬರ ಆತ್ಮಕ್ಕೆ ಶಾಂತಿ ದೊರಕಲಿ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X