ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

Date:

Advertisements

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು ಬ್ಯಾಂಕ್ ಆರಂಭ ಪ್ರತೀ ಕೆ.ಜಿ ಮೇವಿಗೆ ೨ ರೂ ಅಂತೆ ರೈತರ ಜಾನುವಾರುಗಳಿಗೆ ವಿತರಣೆ- ತಹಶೀಲ್ದಾರ ಹೇಳಿಕೆ

ಬರಗಾಲದಿಂದಾಗಿ ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವಿನ ಬ್ಯಾಂಕ್ ಆರಂಭ ಮಾಡಲಾಗಿದೆ. ಪ್ರತಿ ಕೆ.ಜಿ. ಮೇವಿಗೆ ಎರಡು ರೂ.ನಂತೆ ರೈತರಿಗೆ ಕೈಗೆಟುಕುವ ದರದಲ್ಲಿ ತಾಲೂಕು ಆಡಳಿತದಿಂದ ಮೇವನ್ನು ಮಾರಾಟ ಮಾಡಲಾಗುತ್ತದೆ. ಇದರ ಸದೂಪಯೋಗವನ್ನು ಕೊಣ್ಣೂರು ಹೋಬಳಿ ಮಟ್ಟದ ಎಲ್ಲ ರೈತರು ಪಡೆದುಕೊಳ್ಳಬೇಕೆಂದು ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರಿನ ಎಪಿಎಂಸಿ ಆವರಣದಲ್ಲಿ ಜಿಲ್ಲಾ ಪಂಚಾಯತ ಮತ್ತು ತಾಲೂಕು ಆಡಳಿತ ವತಿಯಿಂದ 2024-25ನೇ ಸಾಲಿನ ಬರಗಾಲ ಯೋಜನೆಯ ಅಡಿಯಲ್ಲಿ ರೈತರಿಗೆ ರಿಯಾಯತಿ ದರದಲ್ಲಿ ಮೇವು ಪೂರೈಸುವ ಮೇವು ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Advertisements

ತಾಲೂಕಿನಲ್ಲಿ ಬರಗಾಲದಿಂದಾಗಿ ಕುಡಿಯುವ ನೀರು, ಜಾನುವಾರಗಳಿಗೆ ಮೇವಿನ ಕೊರತೆ ನೀಗಿಸಲು ತಾಲೂಕು ಆಡಳಿತ ಯುದ್ದೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ಸದ್ಯ ಕೊಣ್ಣೂರು ಹೋಬಳಿ ಮಟ್ಟದಲ್ಲಿ ಸುಮಾರು ಎರಡೂವರೆ ಸಾವಿರ ಜಾನುವಾರಗಳಿಗೆ ಮೇವಿನ ಕೊರತೆ ತಪ್ಪಿಸಲು ಮೇವಿನ ಬ್ಯಾಂಕ್ ಇಂದು ಉದ್ಘಾಟನೆ ಮಾಡಲಾಗಿದೆ ಎಂದರು.

ಇದರ ಸದೂಪಯೋಗವನ್ನು ಕೊಣ್ಣೂರು ಹೋಬಳಿ ವ್ಯಾಪ್ತಿಗೆ ಬರುವ ವಾಸನ, ಶೀರೋಳ, ಕೊಣ್ಣೂರು, ರೆಡ್ಡರ ನಾಗನೂರು, ಹದಲಿ, ಸುರಕೋಡ ಮತ್ತು ಬೈರನಹಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಯ ರೈತರು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಮೇವು ಬ್ಯಾಂಕ್ ನಿಂದ ಒಂದು ಜಾನುವಾರಿಗೆ ಪ್ರತಿನಿತ್ಯ 6 ಕೆ.ಜಿ ಮೇವನ್ನು ಕೊಡಲಾಗುವುದು. ಪ್ರತಿ ರೈತರಿಗೆ 50ಕೆ.ಜಿವರೆಗೂ ಮೇವನ್ನು ವಿತರಿಸಲಾಗುವುದು. ರೈತರು ಒಂದು ಕೆ.ಜಿ ಮೇವನ್ನು 2 ರೂ.ಕೊಟ್ಟು ಖರೀದಿ ಮಾಡಬಹುದು. ಇದರಿಂದ ಬರಗಾಲದಲ್ಲಿ ರೈತರ ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆಯನ್ನು ನೀಗಿಸಲು ಸಹಕಾರಿಯಾಗುತ್ತದೆ ಎಂದರು.

ಮೇವಿನ ಬ್ಯಾಂಕ್‌ನಲ್ಲಿ ಸದ್ಯ 4 ಟನ್ ಮೇವು ದಾಸ್ತಾನು ಮಾಡಲಾಗಿದೆ. ಇದರಿಂದ ಮುಂದಿನ ಎರಡ್ಮೂರು ತಿಂಗಳಿಗೆ ಸಾಕಾಗುವಷ್ಟು ಮೇವನ್ನು ಸಂಗ್ರಹ ಮಾಡಿಕೊಳ್ಳಲಾಗಿದೆ. ಈಗಾಗಲೇ ಮೇವು ಪೂರೈಕೆ ಮತ್ತು ಸರಬರಾಜಿಗೆ ಟೆಂಡರ್ ಕರೆದು ಟೆಂಡರದಾರರನ್ನು ಗುರ್ತಿಸಲಾಗಿದೆ. ಮೇವು ಬ್ಯಾಂಕ್‌ನಲ್ಲಿ ಮೇವು ಖಾಲಿಯಾದ ಕೂಡಲೇ ಟೆಂಡರ್‌ದಾರರ ಮೂಲಕ ಮೇವು ದಾಸ್ತಾನು ಕೆಲಸ ಮಾಡಲಾಗುವುದು. ಮೇವು ಬ್ಯಾಂಕ್ ಪ್ರತಿನಿತ್ಯ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5.30ರವರೆಗೆ ತೆರೆದಿರುತ್ತದೆ. ಇದರ ಸದೂಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ನರಗುಂದ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ವೆಂಕಟೇಶ ಹೇಳಿದರು.

ಕೊಣ್ಣೂರು ಗ್ರಾಮದ ರೈತರಾದ ಸಿದ್ದಪ್ಪ ಡಂಬಳ ಮತ್ತು ಅಲ್ಲಿಸಾಬ್ ಸುರಕೋಡ ಅವರಿಗೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ಬಿರಾದರ್ ಅವರು ಮೇವಿನ ಗಂಟನ್ನು ವಿತರಿಸುವ ಮೂಲಕ ಮೇವಿನ ಬ್ಯಾಂಕನ್ನು ಉದ್ಘಾಟನೆಗೊಳಿಸಿದರು.

ಈ ಸಂದರ್ಭದಲ್ಲಿ ಕೊಣ್ಣೂರು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮಂಜುನಾಥ ಗಣಿ, ಟಿ.ಆರ್. ಪಾಟೀಲ್ ಗ್ರಾಮ ಆಡಳಿತ ಅಧಿಕಾರಿಗಳು, ಜಿ.ಎ. ನಿರಾಣಿ ಪಶು ಪಾಲನಾ ಇಲಾಖೆ, ಐ.ವಾಯ್. ಕಳಸಣ್ಣವರ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಪಂಚಾಯತ ಸಿಬ್ಬಂದಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X