ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

Date:

Advertisements

“ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಆದರೆ, ರೈತರ ಸಾಲಮನ್ನಾ ಮಾಡಿಲ್ಲ” ಎಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಎಐಸಿಸಿ ಮುಖಂಡ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.

ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, “ನಾವು ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ 24 ಸಾವಿರ ರೂ. ನೀಡುತ್ತೇವೆ” ಎಂದು ತಮ್ಮ ಗ್ಯಾರಂಟಿ ಘೋಷಣೆಯನ್ನು ಪುನರುಚ್ಚರಿಸಿದರು.

“ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿ ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ” ಎಂದು ಹೇಳಿದರು.

Advertisements

“ಈ ಬಾರಿಯ ಚುನಾವಣೆ ಎರಡು ವಿಚಾರದಲ್ಲಿ ನಡೆಯುತ್ತಿದೆ. ಒಂದು ಸಂವಿಧಾನ ಉಳಿವು ಮತ್ತೊಂದು ಕಡೆ ಸಂವಿಧಾನ ಮುಗಿಸುವ ಕೆಲಸ. ನಾವು ಸಂವಿಧಾನ ಉಳಿವಿಗಾಗಿ ಭಾರತ್‌ ಜೋಡೋ ಯಾತ್ರೆ ಮಾಡಿದೆವು. ಆದ್ರೆ ಬಿಜೆಪಿ ಇ.ಡಿ, ಐಟಿ ಹಾಗೂ ಸಿಬಿಐ ಮೂಲಕ ಹೆದರಿಸಿ ದೊಡ್ಡ ಭ್ರಷ್ಟಾಚಾರ ಮಾಡಿದೆ. ಚುನಾವಣಾ ಬಾಂಡ್‌ ಕಾನೂನುಬಾಹಿರವೆಂದು ಸುಪ್ರೀಂಕೋರ್ಟ್‌ ಹೇಳಿದೆ. ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂಪಾಯಿ ಸಂಗ್ರಹಿಸಲಾಗಿದೆ. ಇದು ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದರು.

“ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರು, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ಕಂಡಿದ್ದೇನೆ” ಎಂದರು.

“ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ ಅನ್ನು ಬಿಜೆಪಿ ಬಿ ಟೀಮ್‌ ಎಂದು ಹೇಳಿದ್ದೆ. ಆದರೆ ಈಗ ಜೆಡಿಎಸ್‌, ಬಿಜೆಪಿ ಇಬ್ಬರೂ ಪಾರ್ಟನರ್ಸ್‌ ಆಗಿದ್ದಾರೆ” ಎಂದು ಟೀಕಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಹುಲ್ ಗಾಂಧಿ ಜೀ… ಕೇಂದ್ರ ಸರ್ಕಾರವೇನೋ ಉದ್ಯಮಿಗಳ ಪರವಾಗಿದೆ ಅಂತಿದ್ದೀರಿ.. ಅದ್ರೆ, ನಿಮ್ಮ ಕಾಂಗ್ರೆಸ್ ಪಕ್ಷ ಕೇವಲ ಮುಸ್ಲಿಮರ ಪರವಾಗಿದೆಯಲ್ಲಾರೀ…ಮೊದಲು ನಿಮ್ಮ ದೃಷ್ಟಿಕೋನ ಸರಿಮಾಡಿಕೊಳ್ಳಿ ಸ್ವಾಮಿ…

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X