ಸರ್ಕಾರದ ಮೇಲೆ ಕಾರ್ಪೊರೇಟ್ ನಿಯಂತ್ರಣವಿದೆ; ಬಿಜೆಪಿ ಪ್ರಣಾಳಿಕೆಯನ್ನ ರೈತರು ನಂಬುವುದಿಲ್ಲ: ರಾಕೇಶ್ ಟಿಕಾಯತ್

Date:

Advertisements

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ರೈತರು ನಂಬುವುದಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಕಾರ್ಪೋರೇಟ್ ನಿಯಂತ್ರಣವಿದೆ. ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಆಜ್ಞೆಯಂತೆ ಕೆಲಸ ಮಾಡುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ  ರಾಕೇಶ್ ಟಿಕಾಯತ್ ಹೇಳಿದ್ದಾರೆ.

“ಭಾರತವನ್ನು ಅಗ್ಗದ ಕಾರ್ಮಿಕರ ಮೂಲವಾಗಿ ನೋಡಲಾಗುತ್ತಿದೆ. ಸರ್ಕಾರದ ಮೇಲೆ ಕಾರ್ಪೊರೇಟ್‌ಗಳ ನಿಯಂತ್ರಣವು ಬೆಳೆದಿದೆ. ಸಮಸ್ಯೆಗಳನ್ನು ಎದುರಿಸಲು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ರೈತ ಸಂಘಟನೆಗಳು ಬಲವಾಗಿರಬೇಕು” ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ಬಿಜೆಪಿ ಪ್ರಣಾಳಿಕೆ ಮೇಲೆ ನಮಗೆ ನಂಬಿಕೆ ಇಲ್ಲ. 2014ರಲ್ಲೂ ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು, 10 ವರ್ಷ ಕಳೆದರೂ ಶಿಫಾರಸುಗಳು ಜಾರಿಯಾಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಬಿಜೆಪಿ ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದೆ. ಸ್ವಾಮಿನಾಥನ್ ಆಯೋಗವು ಸಮಗ್ರ ಉತ್ಪಾದನಾ ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳುವ C2+50% ಸೂತ್ರದಲ್ಲಿ ಎಂಎಸ್‌ಪಿ ನೀಡಲು ಶಿಫಾರಸು ಮಾಡಿದೆ. ಆದರೆ, ಬಿಜೆಪಿ ಬೆಳೆಗಳಿಗೆ A2+FL (ರೈತ ಮತ್ತು ಕುಟುಂಬದ ದುಡಿಮೆಯ ಮೌಲ್ಯ ಒಳಗೊಂಡಿರುತ್ತದೆ) ಸೂತ್ರದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವುದಾಗಿ ಬಿಜೆಪಿ ಹಿಂದಿನ ಚುನಾವಣೆಗಳಲ್ಲಿ ಹೇಳಿತ್ತು. ಆದರೆ, ಯಾವುದನ್ನೂ ಸರ್ಕಾರ ಜಾರಿಗೆ ತರಲಿಲ್ಲ” ಎಂದು ಆರೋಪಿಸಿದರು.

“ಉದ್ಯಮಿಗಳ ಗುಂಪು ಬಿಜೆಪಿಯನ್ನು ವಶಪಡಿಸಿಕೊಂಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನಿರ್ದಿಷ್ಟ ವ್ಯಕ್ತಿಯ ಸರ್ಕಾರವಾಗಿದೆ. ಹೀಗಾಗಿಯೇ, ಅದು ರೈತರು ಮತ್ತು ದೇಶದ ಜನರಿಗಾಗಿ ಕೆಲಸ ಮಾಡುತ್ತಿಲ್ಲ. ಅದು ಕೆಲವರಿಗಾಗಿ ಮಾತ್ರ ಕೆಲಸ ಮಾಡುತ್ತಿದೆ” ಎಂದು ಟಿಕಾಯತ್ ಹೇಳಿದ್ದಾರೆ.

“ಈಗ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತನಾಡುತ್ತಿವೆ. ಪ್ರತಿಯೊಬ್ಬ ರಾಜಕಾರಣಿಯೂ ಬಡವರು, ಯುವಕರು ಮತ್ತು ಆದಿವಾಸಿಗಳು ಹಾಗೂ ರೈತರ ಬಗ್ಗೆ ಮಾತನಾಡುತ್ತಿದ್ದಾರೆ. ರೈತ ಸಂಘಟನೆಗಳು ಬಲಿಷ್ಠವಾಗಬೇಕು. ರೈತ ಸಂಘಟನೆಗಳು ಬಲಿಷ್ಠವಾದರೆ ಎಲ್ಲವೂ ಆಗುತ್ತದೆ. ರೈತ ಸಂಘಟನೆಗಳು ದುರ್ಬಲವಾದರೆ ಏನೂ ಆಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X