ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

Date:

Advertisements

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಗೆಲುವು ಕಂಡಿದ್ದರು. ಅವರಿಗೆ ಬೆನ್ನಲುಬಾಗಿದ್ದ ನಟ ದರ್ಶನ್, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಅಭ್ಯರ್ಥಿ ಸ್ಟಾರ್ಚಂದ್ರು ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ. ಸುಮಲತಾ ಅವರು ಬಿಜೆಪಿ ಸೇರಿದ್ದು, ದರ್ಶನ್ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸಂಸದೆ ಸುಮಲತಾ ಅವರುಮ ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಟಿಕೆಟ್‌ ವಂಚಿತೆಯಾಗಿದ್ದಾರೆ. ಆದರೂ, ಮೈತ್ರಿಯನ್ನು ಒಪ್ಪಿಕೊಂಡು ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಮೈತ್ರಿ ಧರ್ಮ ಪಾಲಿಸಬೇಕಿರುವುದರಿಂದ ಸುಮಲತಾ ಅವರು ಕುಮಾರಸ್ವಾಮಿಗೆ ಬೆಂಬಲ ನೀಡಬೇಕು. ಆದರೆ, ಸುಮಲತಾ ಬೆನ್ನಿಗೆ ನಿಂತಿದ್ದ ನಟ ದರ್ಶನ್, ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ಚಂದ್ರು ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

ಸ್ಟಾರ್ ಚಂದ್ರು ಪರವಾಗಿ ಗುರುವಾರ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್‌ ಪ್ರಚಾರ ನಡೆಸಲಿದ್ದಾರೆ. ದರ್ಶನ್ಅವರ ನಡೆ ಈಗ ಕುತೂಹಲ ಕೆರಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X