ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ ಟ್ವಿಟರ್) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಬಳಕೆದಾರರು ಎಕ್ಸ್‌ನಲ್ಲಿದ್ದ ತೊಂದರೆಯ ಬಗ್ಗೆ ವರದಿ ಮಾಡುತ್ತಿದ್ದ ಕಾರಣ ಸರ್ಕಾರ ಈ ಆದೇಶವನ್ನು ಫೆಬ್ರವರಿಯಿಂದಲೇ ಜಾರಿಗೊಳಿಸಿತ್ತು. ಆದರೆ ಅಧಿಕೃತವಾಗಿ ಘೋಷಿಸಿರಲಿಲ್ಲ.ಇಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಆಂತರಿಕ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ
ಪಾಕಿಸ್ತಾನ ಸರ್ಕಾರದ ಕಾನೂನಾತ್ಮಕ ನಿರ್ದೇಶನಗಳನ್ನು ಪಾಲಿಸುವಲ್ಲಿ ಎಕ್ಸ್ ವಿಫಲವಾಗಿದೆ. ಹಲವರು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಕಾರಣ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಪಾಕ್ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಈ ನಡುವೆ ಎಕ್ಸ್ ಹೊಸ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇನ್ನು ಮುಂದೆ ಹೊಸದಾಗಿ ಬಳಕೆದಾರರಾಗುವ ಎಕ್ಸ್ ಖಾತೆದಾರರು ಲೈಕ್, ಪೋಸ್ಟ್, ರೀಟ್ವೀಟ್ ಮಾಡಲು ವಾರ್ಷಿಕವಾಗಿ ಪಾವತಿಸಬೇಕು. ಪಾವತಿರಹಿತ ಚಂದಾದಾರರು ತಮ್ಮ ನೋಡುವ ಆಯ್ಕೆಯನ್ನು ಮಾತ್ರ ಹೊಂದಿರುತ್ತಾರೆ. ಹಳೆಯ ಬಳಕೆದಾರರಿಗೆ ಈ ನಿಯಮ ಅನ್ವಯವಾಗುವುದಿಲ್ಲ. ನೂತನ ಆದೇಶ ಶೀಘ್ರದಲ್ಲೇ ಜಾರಿಗೆ ಬರುವ ಸಾಧ್ಯತೆಯಿದೆ.
