ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ವರದಿಗಳ ಪ್ರಕಾರ, ಬಂಧಿತ ವ್ಯಕ್ತಿ ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿರುವ ಇತರ ಇಬ್ಬರೊಂದಿಗೆ ಸಂಬಂಧ ಹೊಂದಿದ್ದಾರೆ.
ಆರೋಪಿಗಳು ಮುಂಗಡವಾಗಿ 1 ಲಕ್ಷ ರೂಪಾಯಿ ಪಡೆದು ಈ ದಾಳಿಯನ್ನು ನಡೆಸಿದ್ದಾರೆ. ಮಂಗಳವಾರ ಮುಂಜಾನೆ ಮುಂಬೈ ಪೊಲೀಸರು ಗುಜರಾತ್‌ನ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.
#WATCH | Mumbai, Maharashtra: Visuals from outside actor Salman Khan’s residence in Bandra where two unidentified men opened fire this morning.
Police and forensic team present on the spot. pic.twitter.com/5vMmoXbI22
— ANI (@ANI) April 14, 2024
ಬಿಹಾರ ಮೂಲದ ವಿಕ್ಕಿ ಸಾಹಬ್ ಗುಪ್ತಾ ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ ಅವರನ್ನು ಸೋಮವಾರ ಸಂಜೆ ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ.
ಇದನ್ನು ಓದಿದ್ದೀರಾ? ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ
ಭಾನುವಾರ ಮುಂಜಾನೆ 4:55 ಕ್ಕೆ, ನಟ ವಾಸವಾಗಿರುವ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಐದು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇಬ್ಬರು ಶಂಕಿತರ ಪೈಕಿ ಒಬ್ಬನಾದ ಸಾಗರ್ ಶ್ರೀಜೋಗೇಂದ್ರ ಪಾಲ್ ಎಂಬಾತನಿಗೆ ಘಟನೆ ನಡೆಯುವ ಕೆಲವೇ ಗಂಟೆಗಳ ಮೊದಲು ಬಂದೂಕು ನೀಡಲಾಗಿತ್ತು ಎಂದು ಹೇಳಲಾಗಿದೆ.
ಏಪ್ರಿಲ್ 13ರ ರಾತ್ರಿ ಬಾಂದ್ರಾ ಪ್ರದೇಶದಲ್ಲಿ ಬಂದೂಕು ನೀಡಲಾಗಿದ್ದು, ಈ ಬಂದೂಕು ನೀಡಿದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮುಂಬೈ | ಬೆಳ್ಳಂಬೆಳಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ; ಬಿಗಿ ಬಂದೋಬಸ್ತ್
ಪೊಲೀಸ್ ಮೂಲಗಳ ಪ್ರಕಾರ, ಪಾಲ್ ಮತ್ತು ಅವನ ಸಹಚರ ವಿಕ್ಕಿ ಗುಪ್ತಾ ಇಬ್ಬರಿಗೂ ಗುಂಡಿನ ದಾಳಿ ನಡೆಸಲು 4 ಲಕ್ಷ ರೂಪಾಯಿ ಸುಪಾರಿ ನೀಡಲಾಗಿದ್ದು, ಈ ಪೈಕಿ ಒಂದು ಲಕ್ಷ ರೂಪಾಯಿ ಮುಂಗಡವಾಗಿ ಪಾವತಿಸಲಾಗಿದೆ. ಬರೀ ಬೆದರಿಸುವ ಉದ್ದೇಶ ಆರೋಪಿಗಳದ್ದಾಗಿತ್ತು, ಕೊಲ್ಲುವುದು ಅಲ್ಲ ಎಂದು ವರದಿಯಾಗಿದೆ.