ರೋಣ ತಾಲೂಕಿನಲ್ಲಿ ಜನ-ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ರೋಣ ತಾಲೂಕಿನ ಬರಗಾಲ ನೋಡಲ್ ಅಧಿಕಾರಿ ಮಹೇಶಕುಮಾರ್ ವಾಗೆ ಸೂಚನೆ ನೀಡಿದರು.
ರೋಣ ತಾಲೂಕು ಪಂಚಾಯತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. “ಗ್ರಾಮೀಣ ಭಾಗದಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ರೋಣ ತಾಲೂಕಿನ 22 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ನೀರಿನ ಸಮಸ್ಯೆ ನಿಭಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದರು.
“ಮುಂದಿನ ಎರಡು ಮೂರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ತಲೆದೂರಿದಲ್ಲಿ ಸಮರ್ಪಕವಾಗಿ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಜನಸಾಮಾನ್ಯರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕು ಎಂದು ತಿಳಿಸಿದರು. ಜೊತೆಗೆ ಪ್ರತಿ ಯೋಜನೆಯಲ್ಲೂ ಒಂದು ಹೆಚ್ಚುವರಿ ನೀರಿನ ಮೂಲ ಮಾಡಬೇಕಿದೆ, ನೀರಿನ ಕೊರತೆ ಆಗುವ ಸಾಧ್ಯತೆ ಇದ್ದ ಗ್ರಾಮ ಪಂಚಾಯತಿ ಅಧಿಕಾರಿಗಳು ಕೂಡಲೆ ಅದಕ್ಕೆ ಪರಿಹಾರ ಹುಡಕಬೇಕು” ಎಂದರು.
ಸಭೆಯಲ್ಲಿ ತಹಶೀಲ್ದಾರ್ ನಾಗರಾಜ, ಕಾರ್ಯ ನಿರ್ವಾಹಕ ಅಧಿಕಾರಿ ಎಸ್ ಕೆ ಇನಾಮದಾರ ಹಾಗೂ ತಾಲೂಕ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು…