EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

Date:

Advertisements

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ ಲಭಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್ ಆರೋಪ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಇವಿಎಂ-ವಿವಿಪ್ಯಾಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತ ಅವರ ಪೀಠ ಮೌಖಿಕ ನಿರ್ದೇಶನ ನೀಡಿತು.

ಸ್ವಯಂಸೇವಾ ಸಂಸ್ಥೆ ಎಡಿಆರ್ ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಪ್ರಶಾಂತ್ ಭೂಷಣ್, ಕೇರಳದ ಕಾಸರಗೋಡು ಕ್ಷೇತ್ರದಲ್ಲಿಇವಿಎಂ ಮೂಲಕ ಅಣಕು ಮತದಾನ ಮಾಡುವ ಸಂದರ್ಭದಲ್ಲಿ ಬಿಜೆಪಿಗೆ ಒಂದು ಹೆಚ್ಚು ಮತ ದಾಖಲಾಗಿದ್ದನ್ನು ಮಾಧ್ಯಮವೊಂದು ಪ್ರಕಟಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಇದನ್ನು ಗಮನಿಸಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಮಣಿಂದರ್‌ ಸಿಂಗ್‌ ಅವರಿಗೆ ಪರಿಶೀಲನೆಗೊಳಪಡಿಸುವಂತೆ ನಿರ್ದೇಶನ ನೀಡಿದರು.

ಬಿಜೆಪಿಗೆ ಹೆಚ್ಚುವರಿ ಮತ ದಾಖಲಾದ ಈ ವರದಿಯನ್ನು ಆಧರಿಸಿ ಕೇರಳದ ಆಡಳಿತ ಪಕ್ಷ ಎಲ್‌ಡಿಎಫ್ ಹಾಗೂ ವಿಪಕ್ಷ ಯುಡಿಎಫ್ 4 ಇವಿಎಂಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿತ್ತು.

ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ನಡೆಸಲು ಚುನಾವಣೆ ಪ್ರಕ್ರಿಯೆ ಪಾವಿತ್ರತೆ ಹೊಂದಿರಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

“ಇದೊಂದು ಚುನಾವಣಾ ಪ್ರಕ್ರಿಯೆ. ಇಲ್ಲಿ ಪಾವಿತ್ರ್ಯತೆ ಇರಬೇಕು. ಇಲ್ಲಿ ಏನೋ ನಡೆಯುತ್ತಿದೆ ಎಂಬ ಆತಂಕ ಯಾರೊಬ್ಬರಿಗೂ ಅನಿಸಬಾರದು” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ನೇತೃತ್ವದ ಪೀಠ ಚುನಾವಣಾ ಆಯೋಗಕ್ಕೆ ತಿಳಿಸಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

Download Eedina App Android / iOS

X