ಭ್ರಷ್ಟ ಸುಧಾಕರ್ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ: ಸಿಎಂ ಸಿದ್ದರಾಮಯ್ಯ

Date:

Advertisements

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದ ಅವರು, “ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ” ಎಂದರು.

ಜನತಾ ನ್ಯಾಯಾಲಯದಲ್ಲಿ ಶಿಕ್ಷೆ ಕೊಡಿ

Advertisements

“ಎನ್‌ಡಿಎ ಅಭ್ಯರ್ಥಿ ಸುಧಾಕರ್ ಅವರಿಗೆ ಜನತಾ ನ್ಯಾಯಾಲಯದಲ್ಲಿ ನೀವೂ ಶಿಕ್ಷೆ ಕೊಡಬೇಕು. ಶಿಕ್ಷೆ ಕೊಟ್ಟರೆ ಮಾತ್ರ ಕ್ಷೇತ್ರದ ಜನತೆಯ ಹೆಸರಿನಲ್ಲಿ ಮಾಡಿದ ಮೋಸಕ್ಕೆ ಮತ್ತು ಮಂತ್ರಿಯಾಗಿ ಮಾಡಿದ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಮಾಡಿದಂತಾಗುತ್ತದೆ” ಎಂದು ಹೇಳಿದರು.

“ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತೀ ಕುಟುಂಬಗಳ ಖಾತೆಗೆ ಬರುತ್ತದೆ” ಎಂದು ತಿಳಿಸಿದರು.

“ಇಡೀ ದೇಶದ ಅಷ್ಟೂ ರೈತರ ಸಾಲ ಮನ್ನಾ ಮಾಡಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಲಕ್ಷ ನಿರುದ್ಯೋಗ ಭತ್ಯೆ ಸಿಗುತ್ತದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತವಾಗಿ ನೀಡಲಾಗುವುದು” ಎಂದರು.

“ಪ್ರಧಾನಿ ಮೋದಿಯವರ ಕೆಟ್ಟ ನೀತಿಯಿಂದಾಗಿ ಹದಗೆಟ್ಟಿರುವ ಭಾರತದ ಆರ್ಥಿಕತೆಯನ್ನು ಸರಿ ದಾರಿಗೆ ತಂದು ಜನರ ಪರವಾದ ಆರದಥಿಕತೆಯನ್ನು ಪುನರ್ ಸ್ಥಾಪಿಸಲಾಗುವುದು. ನೂರಕ್ಕೆ ನೂರು ಈ ಬಾರಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ. ಇವರಿಗೆ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಆಶೀರ್ವಾದ ಇರಲಿ” ಎಂದು ಕೋರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X