ಶಿವಮೊಗ್ಗ | ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಗ್ಯಾರಂಟಿಗಳು ಜನರ ಕೈ ಹಿಡಿದಿವೆ: ಗೀತಾ ಶಿವರಾಜ್‌ಕುಮಾರ್

Date:

Advertisements

ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ ಎಂದು ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅಭಿಪ್ರಾಯಪಟ್ಟರು.

ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಮಹಿಳೆಯರಿಗೆ ವಾರ್ಷಿಕ ₹1 ಲಕ್ಷ ಕುಟುಂಬ ನಿರ್ವಹಣೆ ಭತ್ಯೆ ಸೇರಿದಂತೆ ಅನೇಕ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಗ್ಯಾರಂಟಿ ಯೋಜನೆಗಳು ಶೇ.100ರಷ್ಟು ನಮ್ಮ ಕೈಹಿಡಿಯಲಿವೆ. ಇವುಗಳಿಂದ ಬಿಜೆಪಿಯವರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅನುಕೂಲ ಆಗಿದ್ದು, ಆರ್ಥಿಕ ಶಕ್ತಿ ಸಿಕ್ಕಿದೆ” ಎಂದು ಹೇಳಿದರು.

Advertisements

“ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ 60 ಸಾವಿರ ಕುಟುಂಬಗಳು ಒಂದಿಲ್ಲೊಂದು ಯೋಜನೆಯ ಫಲಾನುಭವಿಗಳಾಗಿವೆ. ಫಲಾನುಭವಿಗಳೆಲ್ಲರಿಗೂ ಕಾಂಗ್ರೆಸ್ ಬಗ್ಗೆ ಕೃತಜ್ಞತೆ ಇರುವುದು ನನಗೆ ಶ್ರೀರಕ್ಷೆಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ ಪಲ್ಲವಿ ಮಾತನಾಡಿ, “ತಳಮಟ್ಟದಲ್ಲೆಲ್ಲೂ ನರೇಂದ್ರ ಮೋದಿ ಅಲೆ ಇಲ್ಲ. ಇರುವುದೆಲ್ಲವೂ ರಾಜ್ಯ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳು ಮತ್ತು ಕಾಂಗ್ರೆಸ್ ಅಲೆ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಅವರಿಗೆ ಬೆಂಬಲಿಸಬೇಕು” ಎಂದು ಕೋರಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, “ಈ ಭಾಗಕ್ಕೆ ಮಾಜಿ ಮುಖ್ಯಮಂತ್ರಿ ದಿ.‌ಬಂಗಾರಪ್ಪ ಅವರು ಅತಿ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರೂ ಕೂಡ ಇಲ್ಲಿನ ರೈತರ ನೆರವಿಗೆ ನಿಂತಿದ್ದರು. ಅದೇ ಹಾದಿಯಲ್ಲಿ ಗೀತಾ ಅವರೂ ಕೂಡ ಸಾಗಲಿದ್ದಾರೆ. ಆದ್ದರಿಂದ, ಈ ಚುನಾವಣೆಯಲ್ಲಿ ಗೀತಾ ಶಿವರಾಜ್‌ಕುಮಾರ್‌ ಅವರಿಗೆ ಮತ ನೀಡಿ ಹರಸಬೇಕು” ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, “ಗ್ಯಾರಂಟಿ ಯೋಜನೆಗಳಿಂದ ಎಲ್ಲ ಜಾತಿ- ಧರ್ಮಗಳಿಗೆ ಅನುಕೂಲವಾಗಿದೆ‌. ಕಡುಬಡವರು ಬದುಕು ರೂಪಿಸಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆ ಋಣ ತೀರಿಸಲು ಸಿಕ್ಕ ಅವಕಾಶವಿದು. ಆದ್ದರಿಂದ, ಇಲ್ಲಿ ಗೀತಕ್ಕ ಅವರಿಗೆ ಮತ ನೀಡಬೇಕು” ಎಂದರು.

“ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೀತಾ ಶಿವರಾಜ್‌ಕುಮಾರ್ ಪರ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ‌. ಇಲ್ಲಿ ಹೆಚ್ಚು ಕೂಲಿ ಕಾರ್ಮಿಕರು ಬದುಕು ಕಟ್ಟಿಕೊಂಡಿದ್ದಾರೆ. ಇದರಿಂದ, ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಿವೆ” ಎಂದು ಸ್ಥಳೀಯರಾದ ವಿನಾಯಕ, ಮಲೆಶಂಕರ ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಒಕ್ಕಲಿಗರು ಒಗ್ಗೂಡಿ ಮುದ್ದಹನುಮೇಗೌಡರನ್ನು ಗೆಲ್ಲಿಸಬೇಕು: ಶಾಸಕ ಟಿ ಬಿ ಜಯಚಂದ್ರ

ವಿ ನಿಗಮ ಅಧ್ಯಕ್ಷ ಎಸ್ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತವೀರ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಆರ್ ನಾಗರಾಜ, ಲೋಕೇಶಪ್ಪ, ನಿರಂಜನ್, ಧೀರರಾಜ ಹೊನ್ನವಿಲೆ, ಇಕ್ಕೇರಿ ರಮೇಶ್, ಗಿರೀಶ್, ಉಡ್ಡಪ್ಪ, ಮಸ್ಕರ್ ರಾಜಪ್ಪ, ಕೆ ಪಿ ಗಣಪತಿ, ಅಣ್ಣಪ್ಪ, ಕಲೀಂ, ಕೆ ಆರ್ ಲೋಕೇಶ್, ಶ್ರೀನಿವಾಸ, ಕೆ ಸಿ ನಾಗರಾಜ, ನೂರುಲ್ಲಾ, ದೊಡಪ್ಪ, ಶಂಕರಪ್ಪ, ಕೃಷ್ಣಮೂರ್ತಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X