ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

Date:

Advertisements
  • ʼಮೇಲ್ಮಾತಿಯವರಿಗೆ ನೀಡಿರುವ ಇಡಬ್ಲ್ಯೂಎಸ್ ಮೀಸಲಾತಿಯನ್ನು ವಿರೋಧಿಸಬೇಕುʼ
  • ಪಿಟಿಸಿಎಲ್ ಕಾಯಿದೆಯನ್ನು ಸಮರ್ಪಕವಾಗಿ ಜಾರಿಗೆ ತರುವಂತೆ ಒತ್ತಾಯ

ಭಾರತದ ನೆಲ ಕಂಡಂತಹ ಅತ್ಯಂತ ಸಮರ್ಥ ಜನ ಚಳವಳಿಗಳಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ವಿಶಿಷ್ಟವಾಗಿ ನಿಲ್ಲುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಭಾರತದ ಸಂವಿಧಾನ ನಮ್ಮ ಜೀವಾಳ ಹಾಗೂ ಮನೋರ್ಯ. ಅಂಬೇಡ್ಕರ್ ಸಿದ್ಧಾಂತವೇ ನಮ್ಮ ಸಿದ್ಧಾಂತ ಹಾಗಾಗಿ ಅಂಬೇಡ್ಕರ್‌ ಸಿದ್ಧಾಂತದ ಪ್ರಜಾಪ್ರಭುತ್ವವನ್ನು ನಿರ್ಮಾಣ ಮಾಡಬೇಕು. ವಿಧಾನಸಭಾ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಮಣಿಸುವ ಉದ್ದೇಶದಿಂದ ಹಲವು ಷರತ್ತುಗಳನ್ನು ಮುಂದಿಟ್ಟು ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹೇಳಿದೆ.

ಗುರುವಾರ ಪತ್ರಿಕಾಗೋಷ್ಠಿ ನಡೆಸಿರುವ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿಯ ಮುಖಂಡರು, “ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪುಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್‌ಗೆ ‘ಷರತ್ತುಬದ್ಧ ಬೆಂಬಲ’ ನೀಡಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಆಯ್ಕೆಯಾಗಿ ಸರ್ಕಾರ ರಚಿಸಿದ ಬಳಿಕ ಜನಪರ ಆಡಳಿತ ನೀಡುವುದರೊಂದಿಗೆ ಸಂವಿಧಾನ ಮತ್ತು ಪುಜಾಪಭುತ್ವದ ಆಶಯಗಳನ್ನು ಹಿಡಿಯಬೇಕು ಎಂದು ದಸಂಸ ಸಂಘಟನಾಕಾರರು ಆಗ್ರಹಿಸಿದ್ದಾರೆ.

“ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕೈಗೊಂಡ ಹಲವು ನೀತಿಗಳ ವಿರುದ್ದ ನಮಗೆ ಅಸಮಾಧಾನವಿರುವುದು ನಿಜ. ಬಾಬಾಸಾಹೇಬ್ ಅಂಬೇಡ್ಕರ್ ಅವರ ‘ಪ್ರಭುತ್ವ ಸಮಾಜವಾದ’ ಕಲ್ಪನೆಯ ವಿರುದ್ಧವಾಗಿ ‘ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ’ ಪರವಾಗಿ ನಿಂತ ಕಾಂಗ್ರೆಸ್ ಸರ್ಕಾರದ ನಿಲುವಿನ ಬಗ್ಗೆ ನಮಗೆ ಬೇಸರವಿದೆ. 1989 ರಲ್ಲಿ ಜಾರಿಗೊಳಿಸಿದ ‘ಅಟ್ರಾಸಿಟಿ ಕಾಯ್ದೆ’ಯನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸದೆ ಇದ್ದುದರ ಪರಿಣಾಮವಾಗಿ ಕಂಬಾಲಪಲ್ಲಿ, ನಾಗಲಾಪಲ್ಲಿ, ಖೈರ್ಲಾಂಜಿ ಮುಂತಾದ ಕಡೆ ನಡೆದ ದಲಿತರ ನರಮೇದಗಳಿಗೆ ನ್ಯಾಯ ಸಿಗದ ಬಗ್ಗೆ ತೀವ್ರ ನೋವಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

Advertisements

“ದಲಿತ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡದಿದ್ದಕ್ಕೆ ಅಸಮಾಧಾನವಿದೆ. ಆದರೂ, ಇಂದಿರಾಗಾಂಧಿ ಅವರು ಜಾರಿಗೆ ತಂದ ಇಪ್ಪತ್ತು ಅಂಶಗಳ ಕಾರ್ಯಕ್ರಮ, ಶಿಕ್ಷಣವನ್ನು ಹಕ್ಕನ್ನಾಗಿಸಿದ್ದು, ಆರ್‌ಟಿಐ ಕಾಯಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯನ್ನು ಜಾರಿಗೊಳಿಸಿದ್ದರ ಬಗ್ಗೆ ಸಮಾಧಾನವಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಪರಿಶಿಷ್ಟ ಜಾತಿ/ವರ್ಗಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯಿದೆಯ ಅನುಗುಣವಾಗಿ ರಾಜ್ಯ ಬಜೆಟ್ಟಿನ ಶೇ. 24.10 ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಈ ಅನುದಾನವನ್ನು ಸಂಪೂರ್ಣವಾಗಿ ‘ಏಕಗವಾಕ್ಷಿ ಯೋಜನೆ’ಯಲ್ಲಿ ಅನುಷ್ಠಾನಗೊಳಿಸಬೇಕು. ದಲಿತರ ಅವಶ್ಯಕತೆಗೆ ತಕ್ಕಂತೆ ಯೋಜನೆ ರೂಪಿಸುವುದರ ಮೂಲಕ ಅನುದಾನ ದುರ್ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ಇತರೆ ವೆಚ್ಚಕ್ಕಾಗಿ ಹಣ ಬಳಸಲು ಅವಕಾಶವಿರುವ ‘7ಡಿ ಸೆಕ್ಷನ್’ನನ್ನು ಕಾಯ್ದೆಯಿಂದ ತೆಗೆದುಹಾಕಬೇಕು. ಕೇಂದ್ರ ಸರ್ಕಾರವೂ ಸಹ ಇದೇ ಮಾದರಿಯ ಕಾಯಿದೆಯನ್ನು ರೂಪಿಸಬೇಕು” ಎಂದು ಒತ್ತಾಯಿಸಿದರು.

“ಕೇವಲ ಆರ್ಥಿಕ ಮಾನದಂಡದಲ್ಲಿ ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯದವರನ್ನು ಹೊರತುಪಡಿಸಿ ವಾರ್ಷಿಕ ಎಂಟು ಲಕ್ಷ ವರಮಾನವಿರುವ ಮೇಲ್ಮಾತಿಯವರಿಗೆ ನೀಡಿರುವ ಇಡಬ್ಲ್ಯೂಎಸ್ ಮೀಸಲಾತಿಯನ್ನು ವಿರೋಧಿಸಬೇಕು. ಖಾಸಗಿಯಲ್ಲಿಯೂ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯ ಸರ್ಕಾರಗಳಲ್ಲಿ ಬಹುತೇಕ ದಿನಗಳಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಎಸ್‌ಸಿ/ಎಸ್‌ಟಿ ಬ್ಯಾಕ್ಲಾಗ್ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿ, ಖಾಲಿ ಹುದ್ದೆಗಳನ್ನು ಭರ್ತಿಮಾಡಬೇಕು” ಎಂದರು.

“ಪಿಟಿಸಿಎಲ್ ಕಾಯಿದೆಯನ್ನು ಬಲಪಡಿಸಬೇಕು. ದಲಿತರ ಭೂಮಿಯು ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ಈ ಕಾಯ್ದೆಯ ಮೂಲ ಉದ್ದೇಶವಾಗಿರುವ ‘ದಲಿತರು ಭೂಮಿ ಹೊಂದುವ’ ಗುರಿಯನ್ನು ಸಮರ್ಥವಾಗಿ ಅನುಷ್ಠಾನಕ್ಕೆ ತರಬೇಕು” ಎಂದು ತಿಳಿಸಿದರು.

“ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೋಹತ್ಯಾ ನಿಷೇಧ ಕಾಯಿದೆʼ, ‘ಮತಾಂತರ ನಿಷೇಧ ಕಾಯಿದೆʼಗಳನ್ನುಈ ಕೂಡಲೇ ರದ್ದುಗೊಳಿಸಬೇಕು. ಎಸ್‌ಸಿ/ಎಸ್‌ಟಿ ಅಲೆಮಾರಿ, ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸಲು ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗ’ದ ಮಾದರಿಯಲ್ಲಿ ಪ್ರತ್ಯೇಕ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಮೀಕ್ಷೆ ಮಾಡಿ ಸೌಲಭ್ಯ ಒದಗಿಸಬೇಕು. ಡಿಎನ್‌ಟಿ (ಡಿನೋಟಿಫೈಯ್ಡ್ ಟ್ರೆಟ್ಸ್) ಸಮುದಾಯಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು” ಎಂದು ಒತ್ತಾಯಿಸಿದರು.

“ಹಿಂದುಳಿದ ವರ್ಗಗಳಲ್ಲಿ ಇರುವಂತೆ ಪರಿಶಿಷ್ಟ ಜಾತಿ/ವರ್ಗಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೆ ತರಬೇಕು. ವೈಜ್ಞಾನಿಕ ಅಧ್ಯಯನದ ಅಂಕಿ-ಅಂಶಗಳ ಆಧಾರದ ಮೇಲೆ, ಎಲ್ಲ ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಜಾರಿಗೊಳಿಸಲು ಒಕ್ಕೂಟ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಅದಕ್ಕಾಗಿ ಸಂವಿಧಾನ ತಿದ್ದುಪಡಿಗಾಗಿ ಒತ್ತಡ ಹೇರಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ‘ಕರ್ನಾಟಕಕ್ಕೆ ಕೇಂದ್ರದ ಮೋಸ’ ಮೋದಿಯ ಆಶೀರ್ವಾದವೇ, ಶಾಪವೇ: ಸಿದ್ದರಾಮಯ್ಯ

“ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತಾಪಿ ಜನರ ವಿರೋಧಿ ಭೂಸುಧಾರಣಾ ತಿದ್ದುಪಡಿ ಕಾಯಿದೆ, ಎಪಿಎಮ್‌ಸಿ ತಿದ್ದುಪಡಿ ಕಾಯಿದೆ ಹಾಗೂ ವಿದ್ಯುತ್‌ ಖಾಸಗೀಕರಣ ಮಸೂದೆ ಮತ್ತು ಕಾರ್ಮಿಕ ವಿರೋಧಿ ಕಾಯಿದೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು. ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ, ಅಸಮಾನತೆ ಹಾಗೂ ಚಾತುರ್ವಣ್ಯ ಪದ್ದತಿಯನ್ನು ಎತ್ತಿ ಹಿಡಿಯುವ ರಾಷ್ಟ್ರೀಯ ಶಿಕ್ಷಣ ನೀತಿ–2020ಯನ್ನು ಈ ಕೂಡಲೇ ರದ್ದುಗೊಳಿಸಬೇಕು” ಎಂದು ಆಗ್ರಹಿಸಿದರು.

“ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡೂ ವೃತ್ತಿಗಳಲ್ಲಿ ಮೀಸಲಾತಿ ನೀತಿಯನ್ನು ಅನುಷ್ಠಾನಕ್ಕೆ ತರಬೇಕು. ಮಲ ಹೊರುವ ಪದ್ಧತಿ ನಿಷೇಧಗೊಂಡಿದ್ದರೂ ಕೂಡ ನೂರಾರು ಸಾವುಗಳು ಇದರಿಂದ ಸಂಭವಿಸಿವೆ. ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಇಂದೂಧರ ಹೊನ್ನಾವರ, ಗುರುಪ್ರಸಾದ್‌ ಕೆಂಗೋಡು, ಜಿಗಣಿ ಶಂಕರ್‌, ಎನ್‌ ಮುನಿಸ್ವಾಮಿ, ಎಂ ಸೋಮಶೇಖರ್‌ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X