ಅಧಿಕಾರಿಗಳ ವಾಹನಗಳಿಗಾಗಿ ₹220 ಕೋಟಿ ಬಿಬಿಎಂಪಿಯಿಂದ ದುರ್ಬಳಕೆ; ಎಎಪಿ ಆರೋಪ

Date:

Advertisements
  • 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ
  • ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಪ್ರಲ್ಹಾದ್‌ ಜೋಷಿ ಹಾಗೂ ಬಿ.ಎಲ್ ಸಂತೋಷ್‌ ನಡುವೆ ಪೈಪೋಟಿ

ಬಿಬಿಎಂಪಿಯ 166 ಹುದ್ದೆಗಳಲ್ಲಿರುವ ಅಧಿಕಾರಿಗಳಿಗಾಗಿ ವಾಹನ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್‌ ಆದ್ಮಿ ಪಕ್ಷ (ಎಎಪಿ) ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, “ಬಿಬಿಎಂಪಿಯು ಹೊರಡಿಸಿರುವ ಆದೇಶದ ಪ್ರಕಾರ 2017-18ರಿಂದ 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ. ಆದರೆ, ಈ ಪೈಕಿ ಶೇ.90ರಷ್ಟು ಜನರಿಗೆ ವಾಹನ ವಿತರಿಸಿಲ್ಲ. ಇದು ₹223 ಕೋಟಿ ಮೊತ್ತದ ಯೋಜನೆಯಾಗಿದ್ದು, ಈ ಹಣ ಎಲ್ಲಿಗೆ ಹೋಗಿದೆ ಎಂಬ ಬಗ್ಗೆ ತನಿಖೆಯಾಗಬೇಕು. ಚುನಾವಣಾ ಆಯೋಗ ಈ ಬಗ್ಗೆ ನಿಗಾ ವಹಿಸಬೇಕು” ಎಂದು ಆಗ್ರಹಿಸಿದರು.

“ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಜಾತಿಗೆ ಸೇರಿದ ಪ್ರಲ್ಹಾದ್‌ ಜೋಷಿ ಮುಖ್ಯಮಂತ್ರಿಯಾಗಬಹುದು ಎಂದು ಜೆಡಿಎಸ್‌ ಪಕ್ಷದ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಈಗ, ಬಿ.ಎಲ್.ಸಂತೋಷ್‌ರವರು ಏಳೆಂಟು ಅಭ್ಯರ್ಥಿಗಳನ್ನು ಬದಲಿಸಿ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಪ್ರಲ್ಹಾದ್‌ ಜೋಷಿ ಹಾಗೂ ಬಿ.ಎಲ್.ಸಂತೋಷ್‌ ನಡುವೆ ಪೈಪೋಟಿಯಿರುತ್ತದೆ ಎನ್ನುವುದು ಇದರಿಂದ ಸಾಬೀತಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊನೆಗೂ ಬಿಡುಗಡೆಯಾದ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್

“ಬೆಂಗಳೂರಿನ ಅಕ್ಕಪಕ್ಕದ ಐದು ಕ್ಷೇತ್ರಗಳಾದ ಜಯನಗರ, ಬಸವನಗುಡಿ, ಚಿಕ್ಕಪೇಟೆ, ರಾಜಾಜಿನಗರ, ಚಾಮರಾಜಪೇಟೆ ಕ್ಷೇತ್ರಗಳಲ್ಲಿ ಒಂದೇ ಜಾತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದರಿಂದ ಬಿಜೆಪಿ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಐದು ಕ್ಷೇತ್ರಗಳಲ್ಲಿ ಒಂದೇ ಜಾತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಗ್ಗೆ ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಆದ್ದರಿಂದ ನಾವು ಈ ವಿಷಯವನ್ನು ಜನರ ಮುಂದಿಡುತ್ತಿದ್ದೇವೆ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ಮಾಧ್ಯಮ ವಕ್ತಾರರಾದ ಉಷಾ ಮೋಹನ್‌ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X