2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿ ಶೇ.74.67 ಫಲಿತಾಂಶ ಲಭ್ಯವಾಗಿದೆ. ಬೆಂಗಳೂರಿನ ಕಲಾ ವಿಭಾಗದ ವಿದ್ಯಾರ್ಥಿ ತಬಸ್ಸುಮ್ ಶೇಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.80.72 ವಿದ್ಯಾರ್ಥಿನಿಯರು ಹಾಗೂ ಬಾಲಕರು ಶೇ.69.05 ಸಾಧಿಸಿದ್ದಾರೆ. ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ karresults.nic.in ಗಮನಿಸಬಹುದಾಗಿದೆ.
ಕೆ ತಬಸುಮ್ ಶೇಕ್, ಎನ್ಎಂಕೆಆರ್‍ವಿ ಮಹಿಳಾ ಕಾಲೇಜು ಜಯನಗರ ಬೆಂಗಳೂರು– 593 ಅಂಕಗಳಿಸಿದ್ದಾರೆ. ಮಂಗಳೂರಿನ ಆಳ್ವಾಸ್ ಕಾಲೇಜಿನ, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನನ್ಯ ಕೆ.ಎ ಪ್ರಥಮ ಸ್ಥಾನ ಪಡೆದಿದ್ದಾರೆ. ಕೋಲಾರದ ಶ್ರೀನಿವಾಸಪುರದ ಜ್ಞಾನಗಂಗೊತ್ರಿ ಕಾಲೇಜಿನ ವಿದ್ಯಾರ್ಥಿ ಕೌಶಿಕ್ ಎಸ್ ವಾಣಿಜ್ಯ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ. ಬೆಂಗಳೂರಿನ ಆರ್ ವಿ ಪಿಯು ಕಾಲೇಜಿನ ವಿದ್ಯಾರ್ಥಿ ಸುರಭಿ ಎಸ್ 596 ಅಂಕಗಳನ್ನು ಗಳಿಸಿದ್ದಾರೆ.

ಕಳೆದ ಬಾರಿ ರಾಜ್ಯಕ್ಕೆ ಶೇ.68 ಫಲಿತಾಂಶ ಬಂದಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸ್ಥಾನ ಗಳಿಸಿದೆ. ಈ ಬಾರಿ ಫಲಿತಾಂಶ ಹೆಚ್ಚಾಗಿಸಲು 20 ಅಂಕದ ಒದು ಅಂಕದ ಪ್ರಶ್ನೆಗಳು ಇದ್ದವು.
ಒಟ್ಟು 37 ವಿಷಯಗಳಿಗೆ ಪರೀಕ್ಷೆ ಬರೆಯಲಾಗಿತ್ತು. ಅದರಲ್ಲಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47260 ವಿದ್ಯಾರ್ಥಿಗಳುವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಒಟ್ಟಾರೆಯಾಗಿ 45 ಲಕ್ಷ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಲಾಗಿತ್ತು. 23,754 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಪುನರಾವರ್ತಿತ 48.42% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, 69,870 ವಿದ್ಯಾರ್ಥಿಗಳಲ್ಲಿ 33,833 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.