ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.
ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಅನುಶಾ ಮತ್ತು ಸುರೇಶ್ ಕೊಲೆಯಾದ ದುರ್ದೈವಿಗಳು.
ಸಾರಕ್ಕಿ ಬಳಿ ಇರುವ ಪಾರ್ಕ್‌ವೊಂದರಲ್ಲಿ ಇಬ್ಬರು ಕುಳಿತಿದ್ದರು. ಗುರುವಾರ ಸಂಜೆ 4:15ರ ಸುಮಾರಿಗೆ ಏಕಾಏಕಿ ಇಬ್ಬರನ್ನೂ ಚಾಕುವಿನಿಂದ ಇರಿದು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು
ಈ ಹತ್ಯೆ ನಡೆದಿದ್ದು ಯಾವ ಕಾರಣಕ್ಕೆ, ಕೊಲೆ ಮಾಡಿದವರು ಯಾರು ಎಂಬ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದೆ.
ಜೆ.ಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.