ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

Date:

Advertisements

ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯರ ಜತೆಗೇ ಕುಳಿತು ಉಪಹಾರ ಸೇವಿಸಿದ್ದು ವಿಶೇಷವಾಗಿತ್ತು.

ಜನಸಾಮಾನ್ಯರ ಜತೆ ಪ್ರಚಾರಕ್ಕೂ ಮುನ್ನ ವಿಜಯಪುರ ನಗರದ ಸೊಲ್ಲಾಪುರ ರಸ್ತೆಯ ಮುಂದಿನ ಕ್ಯಾಂಟೀನ್‌ವೊಂದರಲ್ಲಿ ಚಹಾ ಕುಡಿಯುತ್ತ ಚರ್ಚಿಸುತ್ತಿದ್ದಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕರೆ ಬಂದಿದ್ದು ಮತ್ತೂ ವಿಶೇಷವಾಗಿತ್ತು. ಖರ್ಗೆಯವರು ಚುನಾವಣೆ ಕುರಿತು ಮಾಹಿತಿ ಪಡೆದು, “ಹೇಗೆ ನಡೆಯುತ್ತಿದೆ ಪ್ರಚಾರ? ನಿಮ್ಮ ಬಗ್ಗೆ ಹೈಕಾಮಂಡ್‌ಗೆ ಒಳ್ಳೆಯ ವರದಿ ಬಂದಿದೆ. ನೀವು ಗೆಲ್ಲುವ ಅಭ್ಯರ್ಥಿಯಾಗಿದ್ದೀರಿ. ಎಲ್ಲರ ಸಹಕಾರ ಪಡೆಯಿರಿ” ಎಂದು ಹೇಳಿದರು.

ಹೋಟೆಲ್‌ವೊಂದರಲ್ಲಿ ಇರುವುದಾಗಿ ಹೇಳಿದ ಆಲಗೂರರು, “ಜಿಲ್ಲೆಯ ಎಲ್ಲ ಪ್ರಮುಖ ನಾಯಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಎಲ್ಲರೂ ಒಮ್ಮತ ಹಾಗೂ ಉತ್ಸಾಹದಿಂದ ಬೆನ್ನಿಗಿದ್ದು ಪಕ್ಷದ ಗೆಲುವಿಗಾಗಿ ಶತ ಪ್ರಯತ್ನ ಮಾಡುತ್ತಿದ್ದಾರೆ. ಕೆಳ ಹಂತದಿಂದ ಮತದಾರರನ್ನು ತಲುಪುತ್ತಿದ್ದೇವೆ” ಎಂದು ವಿವರಿಸಿದರು.‌

Advertisements

ರಾಜು ಆಲಗೂರ ಸಂವಾದ

ಖರ್ಗೆಯವರು ಇದಕ್ಕುತ್ತರಿಸಿ, “ನೀವು ಗೆದ್ದೇ ಗೆಲ್ಲುತ್ತೀರಿ. ಇದೇ ಉತ್ತಮ ಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು” ಎಂದು ಹೇಳಿ ಹಲವು ಸೂಚನೆ, ಸಲಹೆಗಳನ್ನು ಕೊಟ್ಟರು.

ನಾಷ್ಟಾ ಜೊತೆಗೆ ಚರ್ಚೆ, ಆಪ್ತ ಮಾತು

ಉಪಹಾರ ಮಾಡುತ್ತ ಆಲಗೂರರು ಹೋಟೆಲ್‌ಗೆ ಬಂದವರ ಜತೆಗೆ ಮಾತನಾಡುತ್ತ ರಾಜಕಾರಣ ಹೊರತುಪಡಿಸಿ ಅವರ ಕುಷಲೋಪರಿ ವಿಚಾರಿಸುತ್ತಿದ್ದರು. ದೇಶದ ಇಂದಿನ ಸ್ಥಿತಿ, ಬೆಲೆ ಏರಿಕೆ ಬಗ್ಗೆಯೂ ಹಲವರು ಮಾತನಾಡಿದರು.

“ನೀವು ಹೀಗೆ ಎಲ್ಲರೊಂದಿಗೆ ಬೆರೆಯುತ್ತೀರಿ. ಸದ್ಯದ ಸಂಸದರು ನಮಗೆ ಮುಖವನ್ನೇ ತೋರಿಸಿಲ್ಲ. ಈಗ ಚುನಾವಣೆ ಬಂದಾಗ ಅವರ ಮುಖ ನೋಡುತ್ತಿದ್ದೇವೆ. ನಿಮ್ಮಂತಹವರು ಜನಪ್ರತಿನಿಧಿಗಳಾದರೆ ಉತ್ತಮ” ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.

ರಾಜು ಆಲಗೂರ ಸಂವಾದ

“ನೀವು ಆಯ್ಕೆಯಾದರೆ ನಗರಕ್ಕೆ ರೈಲು, ವಿಮಾನಯಾನ, ಪ್ರವಾಸಿ ತಾಣವಾಗಿ ಅಭಿವೃದ್ಧಿ, ಮೂಲ ಸೌಕರ್ಯಗಳಂತಹ ಮಹತ್ವದ ಕೆಲಸ ಮಾಡಬೇಕು” ಎಂದು ಪಟ್ಟಿ ಮುಂದಿಟ್ಟರು.

ಸ್ಥಳೀಯರ ಪಟ್ಟಿಗೆ ಪ್ರತಿಕ್ರಿಯಿಸಿದ ಆಲಗೂರರು, “ಈಗಾಗಲೇ ಎರಡು ಬಾರಿ ಶಾಸಕನಾಗಿ, ನಿಗಮದ ಅಧ್ಯಕ್ಷನಾಗಿ ದುಡಿದಿದ್ದೇನೆ. ನೀವು ಈ ಬಾರಿ ವಿಶ್ವಾಸವಿಟ್ಟು ಮತ ಹಾಕಿದರೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದು ಭರವಸೆ ನೀಡಿದರು.

ಗೃಹಲಕ್ಷ್ಮಿ ರೊಕ್ಕ ಬಂದು ನಮ್ಮಂತೋರಿಗಿ ಪಾಡಾಗ್ಯಾದ್ರಿ.

ರಾಜು ಆಲಗೂರ ಅವರು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಕಷ್ಟ-ಸುಖವನ್ನೂ ಕೇಳಿ ಆಪ್ತತೆ ಮೆರೆದರು. ಅಡುಗೆ ಕೋಣೆಗೆ ಹೋಗಿ ಹೆಣ್ಣುಮಕ್ಕಳನ್ನು ಮಾತನಾಡಿಸಿದರು. ಅಲ್ಲಿದ್ದವರು, “ನಮಗ ಸಿದ್ದರಾಮಯ್ಯರು ತಿಂಗ್ಳಾ ಎರಡು ಸಾವಿರ ಹಾಕ್ತಿರೋದು, ಬಸ್ ಫ್ರೀ, ಕರೆಂಟ್ ಕೊಟ್ಟಿರೋದಕ್ಕ ಭಾಳ ಅನುಕೂಲ ಆಗ್ಯಾದ್ರಿ. ನಮ್ಮ ಮಕ್ಕಳು ನಾವೀಗ ನೆಮ್ಮದಿಯಿಂದ ಇದ್ದೀವಿ” ಎಂದು ಹೇಳಿದರು.

“ಎಂ ಬಿ ಪಾಟೀಲರು ನಮಗ ನೀರ್ ಕೊಟ್ಟು ಭಾಳ ದೊಡ್ಡ ಉಪಕಾರ ಮಾಡ್ಯಾರ್ರೀ ಸರ್” ಎಂದು ಭಾವುಕರಾದರು. ಅಲ್ಲಿದ್ದ ಅನೇಕರು ನೀರಾವರಿ ಕೆಲಸಗಳನ್ನು ಶ್ಲಾಘಿಸಿದರು.

“ಹಿಂದೆ ಬಿಜಾಪುರಕ್ಕ ತಿಂಗಳಿಗೊಮ್ಮೆ ನೀರು ಬರ್ತಿತ್ತು. ಈಗ ಆರಾಮಿದೀವ್ರಿ.. ನಮ್ಮ ಹೊಲಾನೂ ಛೊಲೋ ಬೆಳಿಲಿಕತ್ತ್ಯಾವ ಭೂಮೀಗಿ ಬಂಗಾರದ ಬೆಲಿ ಬಂದದ” ಎಂದು ಹೇಳಿದ್ದು ಕೇಳಿದ ಆಲಗೂರರಿಗೆ ಸಮಾಧಾನ ತಂದಿತು. ಮುಂದೆಯೂ ನಾವು ನಿಮ್ಮೊಂದಿಗೆ ಇದ್ದೇವೆಂದು ಹೇಳಿ, ಮೌನವಾಗಿ ನಮಸ್ಕರಿಸಿ ಮುನ್ನೆಡೆದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕರನ್ನು ಭಾರೀ ಅಂತರದಿಂದ ಗೆಲ್ಲಿಸಿ: ಸಚಿವ ಬೋಸರಾಜು

ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲರ ಪುತ್ರ ಬಸವನಗೌಡ ಪಾಟೀಲ ಮತ್ತು ಡಾ ಮಹಾಂತೇಶ ಬಿರಾದಾರ ಆಲಗೂರರಿಗೆ ಸಾಥ್ ನೀಡಿದರು.

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ವಿಜಯಪುರದ ಹೋಟೆಲೊಂದರಲ್ಲಿ ಬೆಳಗಿನ ಉಪಹಾರ ಮಾಡಿ, ಜನರ ಜತೆಗೆ ಬೆರೆತರು. ಸಚಿವ ಎಂ ಬಿ ಪಾಟೀಲರ ಪುತ್ರ ಬಸವನಗೌಡ ಪಾಟೀಲ, ಡಾ ಮಹಾಂತೇಶ ಬಿರಾದಾರ ಜೊತೆಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X