ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು ಎಎಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಆರೋಪ ಮಾಡಿರುವ ಸಚಿವೆ ಅತಿಶಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಪ್ರಯತ್ನಗಳು ನಡೆಯುತ್ತಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಕೆಲವು ದಿನಗಳಿಂದ 300 ಎಂಜಿ ದಾಟಿದೆ. ತಿಹಾರಿ ಜೈಲಿನ ಸಿಬ್ಬಂದಿಗೆ ಕೇಜ್ರಿವಾಲ್ ಅವರು ಇನ್ಸುಲಿನ್ ನೀಡಬೇಕೆಂದು ಕೇಳುತ್ತಿದ್ದರೂ ಅವರು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದರು.
55 ವರ್ಷದ ಅಸ್ತಮ ರೋಗಿಗೆ ಇನ್ಸುಲಿನ್ ನಿರಾಕರಿಸುವ ಮೂಲಕ ಯಾವ ರೀತಿಯ ಸಂಚು ನಡೆಸಲಾಗುತ್ತಿದೆ? ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆಯೆ? ಎಂದು ಅತಿಶಿ ಪ್ರಶ್ನಿಸಿದರು.
“ಕೇಜ್ರಿವಾಲ್ ಅವರಂಥ ವ್ಯಕ್ತಿಯನ್ನು ಬಿಜೆಪಿ ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ. ಇಂದು ಅದೇ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟು ಕೊಲ್ಲಲು ಪ್ರಯತ್ನಿಸಲಾಗುತ್ತಿದೆ” ಎಂದು ಅತಿಶಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ
ಅಸ್ತಮ ರೋಗಿಯಾಗಿರುವ ಕೇಜ್ರಿವಾಲ್ ಅವರು ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ನಿತ್ಯ 54 ಯೂನಿಟ್ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಅವರು ಕಳೆದ 30 ವರ್ಷಗಳಿಂದ ಅಸ್ತಮ ರೋಗದಿಂದ ಬಳಲುತ್ತಿದ್ದಾರೆ. ಅವರ ಸಕ್ಕರೆ ಪ್ರಮಾಣ ನಿಯಂತ್ರಿಸಬೇಕೆಂದರೆ ನಿತ್ಯ 54 ಯೂನಿಟ್ ಇನ್ಸುಲಿನ್ ತೆಗೆದುಕೊಳ್ಳಬೇಕಿದೆ ಎಂದು ಅತಿಶಿ ತಿಳಿಸಿದ್ದಾರೆ.
ಅಸ್ತಮ ರೋಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆ ಆಹಾರ ನೀಡಲು ಕೋರ್ಟ್ ಅನುಮತಿಸಿದೆ. ಅದೇ ರೀತಿ ಸಕ್ಕರೆ ಪ್ರಮಾಣ ಸಾಧಾರಣ ಮಟ್ಟಕ್ಕೆ ಇಳಿಸಲು ಪ್ರತ್ಯೇಕ ಆಹಾರ ಕೂಡ ಅಗತ್ಯವಿದೆ. ಇಂದು ಬಿಜೆಪಿ ತಮ್ಮ ಸಹ ಸಂಸ್ಥೆ ಇ.ಡಿ ಮೂಲಕ ಕೇಜ್ರಿವಾಲ್ ಅವರ ಆರೋಗ್ಯವನ್ನು ಕೆಡಿಸಲು ಪ್ರಯತ್ನಿಸುತ್ತಿದೆ ಎಂದು ಅತಿಶಿ ಹೇಳಿದ್ದಾರೆ.
ಇ.ಡಿ ಕೂಡ ಇಂದು ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಸಿಹಿ ಪದಾರ್ಥಗಳನ್ನು ಸೇವಿಸುತ್ತಿದ್ದಾರೆ ಎಂದು ದೆಹಲಿ ಕೋರ್ಟ್‌ಗೆ ದಾಖಲೆ ಸಲ್ಲಿಸಿತ್ತು. ಈ ಬೆಳವಣಿಗೆ ನಂತರ ಅತಿಶಿ ಅವರಿಂದ ಆರೋಪಿ ಕೇಳಿಬಂದಿದೆ.
