ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಏ.26ರಂದು ಮೊದಲ ಹಂತದ ಮತದಾನ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ಬಾರಿ ಮತದಾನದ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಏ.25ರ ಸಂಜೆ 6ರಿಂದ ಏ.26ರ ರಾತ್ರಿ 8 ರವರೆಗೂ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದ. ಹಾಗೆಯೇ, ನಂದಿ ಗಿರಿಧಾಮದಲ್ಲಿರುವ ಅತಿಥಿ ಗೃಹಗಳಿಗೂ ಬೀಗ ಹಾಕಲಾಗುವುದು ಎಂದು ಚಿಕ್ಕಬಳ್ಳಾಪುರ ಡಿಸಿ ತಿಳಿಸಿದ್ದಾರೆ.
ಮತದಾನದ ದಿನ ಶುಕ್ರವಾರ ಮರುದಿನ ಶನಿವಾರ ಮತ್ತು ಭಾನುವಾರ ಇರಲಿದೆ. ಇದರಿಂದ ಸತತ ಮೂರು ದಿನ ರಜೆ ಸಿಗಲಿದೆ. ಜನರು ರಜೆ ಎಂದು ಪ್ರವಾಸಕ್ಕೆ ತೆರಳಲು ಯೋಜನೆ ಮಾಡಿದರೆ, ಮತದಾನದ ಪ್ರಮಾಣ ಕಡಿಮೆಯಾಗಲಿದೆ. ಈ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಬಳ್ಳಾಪುರ ಡಿಸಿ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನಕ್ಕೆ ಬೆಂಗಳೂರಿನಲ್ಲಿ ದಿನಗಣನೆ ಶುರುವಾಗಿದೆ. ಈಗಾಗಲೇ ಅಭ್ಯರ್ಥಿಗಳು, ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಂಗಳೂರಿನಲ್ಲಿ ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ನಿರ್ಬಂಧ ಆದೇಶ ಹೊರಡಿಸಲಾಗಿದೆ.
ಲೋಕಸಭಾ ಚುನಾವಣೆಯ ದಿನ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಕಂಪನಿಗಳೂ ಸಹ ರಜೆ ನೀಡುವುದು ಕಡ್ಡಾಯ ಎಂದು ಚುನಾವಣಾ ಆಯೋಗ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
ಲೋಕಸಭೆ ಚುನಾವಣೆಯ 2ನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.