ನೇಹಾ ಕೊಲೆ ಪ್ರಕರಣ | ಎನ್‌ಕೌಂಟರ್‌ ಜಾರಿಯಾಗಬೇಕು: ಸಚಿವ ಸಂತೋಷ್‌ ಲಾಡ್

Date:

Advertisements

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್‌ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಹುಬ್ಬಳ್ಳಿ ನಗರದ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ಅವರು, ಕುಟುಂಬದವರಿಗೆ ಸಾಂತ್ವನ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವು ಮುಖಂಡರು ಮಾತನಾಡಿದ್ದಾರೆ. ಆ ಕುರಿತು ನಾನು ಹೆಚ್ವಿಗೆ ಹೇಳುವುದಿಲ್ಲ.‌ ಆದರೆ, ಇಂತಹ ಪ್ರಕರಣಗಳಿಗೆ ಮುಂದೊಂದು ದಿನ ಎನ್‌ಕೌಂಟರ್ ಕಾನೂನು ಬರಲೇಬೇಕು. ಇದು ಜಾರಿಯಾದರೆ, ಇಂತಹ ಪ್ರಕರಣದ ಆರೋಪಿಗಳನ್ನು ಹೊಡೆದುರುಳಿಸಬಹುದು” ಎಂದು ಅಭಿಪ್ರಾಯಪಟ್ಟರು.

Advertisements

“ಎಲ್ಲ ಸರ್ಕಾರದ ಅವಧಿಯಲ್ಲಿಯೂ ಇಂತಹ ಘಟನೆಗಳು ನಡೆದಿವೆ. ಅವುಗಳ ಅಂಕಿ-ಸಂಖ್ಯೆ ನೀಡಬಲ್ಲೆ. ಆದರೆ, ಅವುಗಳಿಗೆಲ್ಲ ಉತ್ತರಿಸುವ ಪರಿಸ್ಥಿತಿ ಇದಲ್ಲ. ಕೆಲವರು ಇದನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಇಂತಹ ಸೂಕ್ಷ್ಮ ವಿಷಯಗಳನ್ನು ರಾಜಕೀಯ ಮಾಡದೆ, ಸೂಕ್ಷ್ಮತೆ ಹಾಗೂ ಸ್ವಯಂ ಜವಾಬ್ದಾರಿ ಕಾಯ್ದುಕೊಳ್ಳಬೇಕು” ಎಂದು ಹೇಳಿದರು.

“ನಗರದಲ್ಲಿ ಡ್ರಗ್ಸ್ ಮಾಫೀಯಾ ಬಹಳ ದಿನದಿಂದ ಇದೆ. ಡ್ರಗ್ಸ್ ಬೇರೆ ಬೇರೆ ರಾಜ್ಯ, ಜಿಲ್ಲೆಗಳಿಂದ ಇಲ್ಲಿಗೆ ಬರುತ್ತದೆ. ಎಲ್ಲಿಂದ ಸರಬರಾಜು ಆಗುತ್ತದೆಯೋ, ಅಲ್ಲಿಂದಲೇ ಅದನ್ನು ನಿಯಂತ್ರಿಸಬೇಕು. ನೇಹಾ ಕೊಲೆ ಪ್ರಕರಣಕ್ಕೂ, ಡ್ರಗ್ಸ್’ಗೂ ಹೋಲಿಕೆ ಬೇಡ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

“ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿ 13 ಲಕ್ಷ ಮಂದಿ ಯುವತಿಯರು, ಮಹಿಳೆಯರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಚಿವ ಪ್ರಲ್ಹಾದ್ ಜೋಶಿ ಉತ್ತರ ನೀಡಬೇಕು. ನೇಹಾ ಕೊಲೆ ಪ್ರಕರಣವನ್ನು ಬಿಜೆಪಿ ರಾಜಕರಣ ಮಾಡುತ್ತಿದ್ದು, ಘಟನೆಯನ್ನು ಬೇರೆ ಆಯಾಮದಲ್ಲಿ ನೋಡಬಾರದು. ತನಿಖೆ ಮುಗಿಯುವ ಮೊದಲು ರಾಜಕೀಯ ಹೇಳಿಕೆ ನೀಡುವುದು ಸರಿಯಲ್ಲ. ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಪ್ರಕರಣ ನಡೆದೇ ಇಲ್ಲವಾ” ಎಂದು ಪ್ರಶ್ನಿಸಿದರು.

“ನೇಹಾ ಕೊಲೆ ಆಕಸ್ಮಿಕ” ಎಂಬ ಗೃಹ ಸಚಿವ ಜಿ ಪರಮೇಶ್ವರ ಹೇಳಿಕೆಯನ್ನು ಸಚಿವ ಲಾಡ್ ಸಮರ್ಥಿಸಿಕೊಂಡರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X