2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದಿನ್ಹಾಟಾದಲ್ಲಿರುವ ಬಿಜೆಪಿ ಬೂತ್ ಅಧ್ಯಕ್ಷನ ಮನೆಯಲ್ಲಿ ಬಾಂಬ್ ಪತ್ತೆಯಾಗಿದ್ದು, ಅಧಿಕಾರಿಗಳು ಬಾಂಬ್ ಅನ್ನು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಂತದಲ್ಲಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
Despite stringent security arrangements, violence marred voting for the first phase of the #LokSabha elections in inner #Manipur constituency. Shooting by miscreants broke out at a polling station at Thamanpokpi under Moirang Assembly segment.
📹: Special Arrangement pic.twitter.com/LIWQDb8vwd
— The Hindu (@the_hindu) April 19, 2024
ತಮ್ಮ ಮುಖಂಡನ ಮನೆ ಮೇಲೆ ಟಿಎಂಸಿ ಕಾರ್ಯಕರ್ತರು ಕಚ್ಚಾ ಬಾಂಬ್ ಎಸೆದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಲೋಕಸಭಾ ಕ್ಷೇತ್ರದ ಚಂದಮಾರಿಯಲ್ಲಿ ಮತಗಟ್ಟೆಯೊಂದರ ಮುಂದೆ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ
ಚಂದಮಾರಿಯಲ್ಲಿ ಮತದಾರರು ಮತದಾನ ಮಾಡದಂತೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಈ ಕಲ್ಲು ತೂರಾಟದಲ್ಲಿ ಬಿಜೆಪಿಯ ಮತಗಟ್ಟೆ ಏಜೆಂಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭಾರಿ ಭದ್ರತಾ ವ್ಯವಸ್ಥೆಗಳ ನಡುವೆಯೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ. ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ತಮನ್‌ಪೋಕ್ಪಿ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
Location: Thamnapokpi Upper Primary School, Inner Manipur LS seat. #Manipur
This is the polling station where firing took place around 8.30/9am while the polling was on. Blank firing (in air) by unknown miscreants. No one hit by bullet; NO CASUALTY
Police have dominated the… pic.twitter.com/s0kCbnw2K4
— Tamal Saha (@Tamal0401) April 19, 2024
ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜು ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಗಲಭೆ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಚುನಾವಣಾ ಆಯೋಗದ ವರದಿಯಂತೆ ವಿವಿಧ ರಾಜ್ಯಗಳಲ್ಲಿ ಮತದಾನವಾಗಿರುವ ಅಂಕಿಅಂಶ
