ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

Date:

Advertisements

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ ಪ್ರತಿಪಾದನೆಯನ್ನು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಭಾರೀ ಬಿರುಸಾಗಿ ಪ್ರಚಾರ ಮಾಡುತ್ತಿದೆ. ನಂಬರ್ ಗೇಮಿಂಗ್‌ ಮೂಲಕ ಮತದಾರರನ್ನು ಯಾಮಾರಿಸಿ, ಬಿಜೆಪಿಗೆ ಮತ ಹಾಕುವಂತೆ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ, ಎನ್‌ಡಿಎ 300 ದಾಟುವುದು ಸುಲಭವಿಲ್ಲ ಎಂದು ಹಲವಾರು ತಜ್ಷರು ಹೇಳುತ್ತಿದ್ದಾರೆ. ಈ ನಡುವೆ, ಬಿಜೆಪಿ-ಎನ್‌ಡಿಎ ಗೆಲುವಿಗೆ 13 ರಾಜ್ಯಗಳು ಸವಾಲುವೊಡ್ಡಲಿವೆ. ಆ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶವೇ ಇಲ್ಲ ಎಂದು ‘ಆಕ್ಸಿಸ್ ಮೈ ಇಂಡಿಯಾ’ದ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಾದ ರಾಜಕೀಯ ಬದಲಾವಣೆಗಳಿಂದಾಗಿ ಮಹಾರಾಷ್ಟ್ರ, ಬಿಹಾರ, ಕರ್ನಾಟಕ ಮತ್ತು ದೆಹಲಿಯಲ್ಲಿ ಎನ್‌ಡಿಎಗೆ ಭಾರೀ ಹಿನ್ನಡೆಯಾಗಲಿದೆ. ಅಲ್ಲದೆ, 9 ರಾಜ್ಯಗಳಲ್ಲಿ ಎನ್‌ಡಿಎಗೆ ತನ್ನ ಸ್ಥಾನಗಳನ್ನು ಸುಧಾರಿಸಿಕೊಳ್ಳುವ ಸಾಧ್ಯತೆಗಳು ತೀರಾ ಕಡಿಮೆ ಇವೆ. ಅದಾಗ್ಯೂ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಒಡಿಶಾ, ತೆಲಂಗಾಣ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ತನ್ನ ಸ್ಥಾನಗಳನ್ನು ಕೊಂಚ ಹೆಚ್ಚಿಕೊಳ್ಳಬಹುದು ಎಂದು ಗುಪ್ತಾ ಹೇಳಿದ್ದಾರೆ.

“2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮೇಲೆ ಹೆಸರಿನಲಾಗಿರುವ ರಾಜ್ಯಗಳಲ್ಲಿ ಎನ್‌ಡಿಎ 93% ‘ಸ್ಟ್ರೈಕ್ ರೇಟ್’ ಹೊಂದಿತ್ತು. ಆದಾಗ್ಯೂ, 2024ರ ಚುನಾವಣೆಯಲ್ಲಿ ಎನ್‌ಡಿಎ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಸಾಧ್ಯತೆ ಶೂನ್ಯವಾಗಿದೆ. ಮಾತ್ರವಲ್ಲದೆ, ಅದರ ಸಂಖ್ಯೆ ಕಳೆದ ಚುನಾವಣೆಗಿಂತ ಕುಸಿತ ಕಾಣಬಹುದು. ಎನ್‌ಡಿಎ 400 ಸ್ಥಾನಗಳನ್ನು ತಲುಪುವುದಿರಲಿ, ಕನಿಷ್ಠ ತನ್ನ ಅಸ್ತಿತ್ವದಲ್ಲಿರುವ ಸ್ಥಾನವನ್ನು ಉಳಿಸಿಕೊಳ್ಳವುದು ಕಷ್ಟಸಾಧ್ಯವಾಗಿದೆ” ಎಂದು ಗುಪ್ತಾ ಹೇಳಿರುವುದಾಗಿ ‘ಮನಿ ಕಂಟ್ರೋಲ್‌’ ವರದಿ ಮಾಡಿದೆ.

Advertisements

ಆಕ್ಸಿಸ್‌ ನಡೆಸಿದ ಸಮೀಕ್ಷೆ ಪ್ರಕಾರ, ಈ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 243-254 ಸ್ಥಾನಗಳನ್ನು ಗೆಲ್ಲಬಹುದು. ‘ಇಂಡಿಯಾ’ ಒಕ್ಕೂಟವು 232-242 ಸ್ಥಾನಗಳನ್ನು ಹಾಗೂ ಇತರರು 40-55 ಸ್ಥಾನಗಳನ್ನು ಗೆಲ್ಲಬಹುದು. ಅಲ್ಲದೆ, ಕ್ರಮವಾಗಿ 44%, 43% ಹಾಗೂ 13% ಮತ ಹಂಚಿಕೆಯನ್ನೂ ಪಡೆಯುವ ಸಾಧ್ಯತೆ ಇದೆ.

ಎಕ್ಸಿಕ್

ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ 2019ರ ಚುನಾವಣೆಯ ನಂತರ ನಡೆದ ಅನೇಕ ರಾಜಕೀಯ ಬದಲಾವಣೆಗಳನ್ನು ಗಮಿಸಿರುವ ಗುಪ್ತಾ, “ಇಂಡಿಯಾ ಒಕ್ಕೂಟವು ಸ್ವಲ್ಪಮಟ್ಟಿಗೆ ಮುರಿದುಹೋಗಿದ್ದರೂ, ವಿರೋಧ ಪಕ್ಷಗಳು ಬಲವಾಗಿ ಮುನ್ನುಗ್ಗಲು ತಮ್ಮದೇ ಆದ ಮಾರ್ಗಗಳನ್ನು ಕಂಡುಕೊಂಡಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಮಹಾರಾಷ್ಟ್ರವು ಹೊಸ ಮೈತ್ರಿಗಳನ್ನು ಹೊಂದಿದ್ದು, ಎರಡು ಪ್ರಮುಖ ಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿಯಲ್ಲಿ ಒಡಕು ಉಂಟಾಗಿದೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ರಾಜಕೀಯ ಸಮೀಕರಣವೂ ಬದಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿ ಸರ್ಕಾರ ರಚಿಸಿದ್ದು, ಈ ಬಾರಿ ಹೆಚ್ಚು ಸೀಟುಗಳನ್ನೂ ಗೆಲ್ಲುವ ಸಾಮರ್ಥ್ಯ ಹೊಂದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಈಗಾಗಲೇ ಮೈತ್ರಿ ಮಾಡಿಕೊಂಡಿವೆ. ಇದೆಲ್ಲವೂ ‘ಇಂಡಿಯಾ’ ಒಕ್ಕೂಟದ ಗೆಲುವಿಗೆ ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಗುಪ್ತಾ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X