ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

Date:

Advertisements

“ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ. ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ ನಡೆಸುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗೂ ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹುಬ್ಬಳ್ಳಿಯ ವಿದ್ಯಾರ್ಥಿನಿಯ ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೇಳಿದರು.

ಕರ್ನಾಟಕ ಬಿಹಾರ ಆಗುತ್ತದೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಈ ವಿಚಾರವಾಗಿ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರು ತಮ್ಮ ಕೆಲಸ ಮಾಡಲಿದ್ದಾರೆ” ಎಂದು ತಿಳಿಸಿದರು.

Advertisements

ಮಾಲೀಕಯ್ಯಾ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಮಾತನಾಡಿದ ಡಿಸಿಎಂ, “ಮಾಲೀಕಯ್ಯಾ ಗುತ್ತೇದಾರ್ ಅವರು ಬಹಳ ವರ್ಷಗಳಿಂದ ನಮ್ಮ ಜೊತೆಗಿದ್ದವರು. ಕಾರಣಾಂತರಗಳಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿ ಭವಿಷ್ಯವಿಲ್ಲ ಎಂದು ಅರಿವಾಗಿ ಮತ್ತೆ ಮರಳಿ ಬಂದಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಕೋಮು ರಾಜಕಾರಣ ನಮ್ಮದಲ್ಲ; ಕೋಮು ರಾಜಕಾರಣದ ವಿರುದ್ಧ ಧ್ವನಿ ಎತ್ತಿದ ಕರಾವಳಿ ಬ್ರಾಹ್ಮಣ ಸಮುದಾಯ

“ಬಿಜೆಪಿ- ದಳದವರ ಮೈತ್ರಿಯನ್ನು ಅವರ ಕಾರ್ಯಕರ್ತರೇ ವಿರೋಧಿಸಿದ್ದಾರೆ. ಉತ್ತರ ಭಾರತದಲ್ಲೂ ಸಾಕಷ್ಟು ಜನ ಬಿಜೆಪಿ ತೊರೆಯುತ್ತಿದ್ದಾರೆ. ಅವರು 400 ಸ್ಥಾನ ಗೆಲ್ಲುತ್ತದೆ ಎನ್ನುವ ವಿಶ್ವಾಸ ಇದ್ದಿದ್ದರೆ ಇತರೆ ಪಕ್ಷಗಳ ನಾಯಕರನ್ನು ಏತಕ್ಕೆ ಬಿಜೆಪಿಗೆ ಸೇರಿಸಿಕೊಳ್ಳುತ್ತಿದ್ದರು. ನನಗೆ ಬಂದಿರುವ ಮಾಹಿತಿ ಪ್ರಕಾರ, ಎನ್‌ಡಿಎ ದೇಶದಲ್ಲಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ಕೇರಳ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ಒಂದಂಕಿ ಸ್ಥಾನಗಳನ್ನು ಪಡೆಯುತ್ತಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X