ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ ಎಂದವರನ್ನು ಸೋಲಿಸಬೇಕು, ನಮ್ಮ ಮತ ಸಂವಿಧಾನ ಉಳಿವಿಗೆ ಎಂಬ ಘೋಷವಾಕ್ಯ ಮೊಳಗುತ್ತಿರುವ ನಡುವೆ ರಾಜಾಸ್ಥಾನದ ನಾಗೌರ್‌ನಲ್ಲಿ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದ ಅವರು ನೀಡಿರುವ, ಬಿಜೆಪಿಗೆ ಪ್ರಚಂಡ ಬಹುಮತ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂಬ ಹೇಳಿಕೆ ಬಾರಿ ಸದ್ದು ಮಾಡಿ ವಿರೋಧಕ್ಕೆ ಕಾರಣವಾಗಿತ್ತು.
ಈಗ ತುಮಕೂರಿನಲ್ಲಿ ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ, ಸಂವಿಧಾನವನ್ನು ದಲಿತರ ಸಂವಿಧಾನ ಎಂದು ಕರೆಯುವ ಮೂಲಕ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ ಮುಖಂಡರ ಸಭೆಯಲ್ಲಿ ಮಾತನಾಡಿರುವ ಶಾಸಕರು, ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದ್ದಾರೆ. ಅದರೆ, ದಲಿತರ ಸಂವಿಧಾನ ಬದಲಿಸುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದು ಚರ್ಚೆ ಹುಟ್ಟು ಹಾಕಿದ್ದಾರೆ.
ಸಂವಿಧಾನ ಬದಲಿಸುವುದಾಗಿ ಹೇಳಿದ್ದ ಅನಂತ್ ಕುಮಾರ್ ಹೆಗಡೆ ಐದು ಬಾರಿ ಸಂಸದರಾಗಿದ್ದರೂ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಅವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದ್ದು ನಿಜ ಎನ್ನುವ ಮೂಲಕ ತಪ್ಪು ಒಪ್ಪಿಕೊಂಡಿದ್ದಾರೆ.
ದಾರಿಲಿ ಹೋಗೊ ದಾಸಯ್ಯ ಹೇಳಿದರೆ ಯಾವ ದಲಿತರು ಕೇಳಲ್ಲ. ಪ್ರಧಾನ ಮಂತ್ರಿಗಳು, ರಾಜ್ಯಧ್ಯಕ್ಷರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದರೆ ಅದು ಪರಿಣಾಮಕಾರಿ ಆಗುತ್ತದೆ ಎಂದ ಅವರು, ಸಂವಿಧಾನವನ್ನು ದಲಿತರ ಸಂವಿಧಾನ ಎನ್ನುವ ಮೂಲಕ ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ.
