ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

Date:

Advertisements

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ ನಡೆಯಲಿದೆ. ಈ ಬಾರಿ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಹೊಟೇಲ್ ಸಂಘದಲ್ಲಿ (ಬಿಬಿಎಚ್‌ಎ) ಸದಸ್ಯತ್ವ ಹಿಂದಿರುವ ಹೋಟೆಲ್‌ಗಳು ಮತದಾನ ಮಾಡಿದ ಎಲ್ಲರಿಗೂ ತಾಜಾ ಹಣ್ಣಿನ ರಸ, ಲಡ್ಡು ಹಾಗೂ ಪಾನೀಯಗಳನ್ನು ನೀಡಲು ನಿರ್ಧರಿಸಿವೆ.

ಏ.26ರಂದು (ಶುಕ್ರವಾರ) ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಪ್ರಜಾಪ್ರಭುತ್ವದಲ್ಲಿ ನಾಗರೀಕರಿಗಿರುವ ಬಹುಮುಖ್ಯವಾದ ಹಕ್ಕು ಮತದಾನ. ಆದ್ದರಿಂದ ಎಲ್ಲರೂ ಮತದಾನ ಮಾಡುವುದರ ಮೂಲಕ ಸದ್ಬಳಕೆ ಮಾಡಬೇಕು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ನಗರದಲ್ಲಿ ಕೇವಲ 54% ಮತದಾನವಾಗಿದೆ. ಹೆಚ್ಚು ಯುವಕರು, ವಿದ್ಯಾವಂತರನ್ನು ಹೊಂದಿರುವ ಬೆಂಗಳೂರು ನಗರದಲ್ಲಿ ಇಷ್ಟೊಂದು ಕಡಿಮೆ ಪ್ರಮಾಣದಲ್ಲಿ ಮತದಾನವಾಗಿರುವುದು ಸಮಂಜಸವಲ್ಲ. ಹಾಗಾಗಿ, ಈ ಬಾರಿ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಯುವಕರು ಸೇರಿದಂತೆ ಎಲ್ಲ ನಾಗರಿಕರೂ ಕೂಡ ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು” ಎಂದು ಹೋಟೆಲ್‌ ಸಂಘ ತಿಳಿಸಿದೆ.

Advertisements

“ನಾವು ಹೋಟೆಲ್ ಮಾಲೀಕರು ಹೋಟೆಲ್‌ಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಹಾಕಲಿದ್ದೇವೆ. ಮತದಾನದ ದಿನದಂದು ಗ್ರಾಹಕರಲ್ಲಿ ಮತದಾನ ಮಾಡಿರುವಿರಾ ಎಂದು ಕೇಳಲಿದ್ದೇವೆ. ಕಳೆದ ಬಾರಿ ಚುನಾವಣೆಯ ದಿನದಂದು ಮತದಾನ ಮಾಡಿ ಬಂದವರಿಗೆ ಬಹಳಷ್ಟು ಹೋಟೆಲ್‌ಗಳಲ್ಲಿ ಉಚಿತ ಹಾಗೂ ರಿಯಾಯಿತಿ ದರದಲ್ಲಿ ತಿಂಡಿ-ತಿನಿಸು, ಪಾನೀಯಗಳನ್ನು ನೀಡಿ ಪ್ರೋತ್ಸಾಹಿಸಿದ್ದೇವೆ. ಈ ಬಾರಿಯೂ ಕೆಲವು ಹೋಟೆಲ್‌ಗಳಲ್ಲಿ ಅದೇ ರೀತಿಯ ಪ್ರೋತ್ಸಾಹ ನೀಡುವ ಕೆಲಸ ನಡೆಯಲಿದೆ” ಎಂದಿದೆ.

“ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾವೂ ಮತದಾನ ಮಾಡಿ ಇತರರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ಹೇಳಿದೆ.

ಇನ್ನು ಹೋಟೆಲ್‌ಗಳಲ್ಲಿ ಉಚಿತ ಆಹಾರವನ್ನು ಪಡೆಯಲು ಮತದಾನ ಮಾಡಿ ಬಂದವರು ತಮ್ಮ ತೋರು ಬೆರಳುಗಳ ಮೇಲೆ ಅಳಿಸದೇ ಶಾಹಿಯನ್ನು ಅಥವಾ ಮತದಾನ ಮಾಡಿ ಬಂದ ಗುರುತು ತೋಡಿಸುವುದು. ನಗರದಲ್ಲಿ ಹೆಚ್ಚಿನ ಮತದಾರರನ್ನು ಉತ್ತೇಜಿಸಲು ಹೋಟೆಲ್‌ ಸಂಘ ಮಾಡಲಾಗುತ್ತಿದೆ.

ನಗರದಾದ್ಯಂತ ಹಲವಾರು ಹೋಟೆಲ್‌ಗಳು ಮತದಾನದ ಕೊನೆಯ ವಾರದಲ್ಲಿ ಮತದಾನದ ಮಹತ್ವದ ಕುರಿತು ಪೋಸ್ಟರ್‌ಗಳನ್ನು ಹಾಕಲಿದ್ದು, ಬೆಂಗಳೂರಿಗರಲ್ಲಿ ಜಾಗೃತಿ ಮೂಡಿಸಲಿದೆ ಎಂದು ಬಿಬಿಎಚ್‌ಎ ಅಧ್ಯಕ್ಷ ಪಿ ಸಿ ರಾವ್ ಗುರುವಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

“ಬೆಂಗಳೂರು ಕೋಟಿಗಟ್ಟಲೆ ವಿದ್ಯಾವಂತ ಯುವಕರನ್ನು ಹೊಂದಿದೆ. ದೇಶದ ಪ್ರಾಥಮಿಕ ಐಟಿ ಕೇಂದ್ರವಾಗಿದೆ. ಆದರೆ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಗರದಲ್ಲಿ ಕೇವಲ ಶೇ 54ರಷ್ಟು ಮತದಾನವಾಗಿತ್ತು. ಈ ಬಾರಿ ಲೋಕಸಭಾ ಚುನಾವಣೆಯಿದ್ದು, ಮತ ಚಲಾಯಿಸುವುದು ನಿರ್ಣಾಯಕವಾಗಿದೆ” ಎಂದು ತಿಳಿಸಿದರು.

“ಮತದಾನವು ನಮ್ಮ ನಗರದ ಸಾಮಾಜಿಕ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತದೆ. ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರವಾಗಿ, ಹೋಟೆಲ್ ಮಾಲೀಕರು ನಮ್ಮ ಜನರು ಹೆಚ್ಚು ಜಾಗೃತರಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ಬಯಸುತ್ತಾರೆ”ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X