ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

Date:

Advertisements

ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್)ಯಿಂದ‌ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮತದಾನದ ಮಹತ್ವ ಕುರಿತು ‘ಯುವ ಮತದಾರರಿಂದ ಮಾನವ ಸರಪಳಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

“18 ವರ್ಷ ಪೂರ್ಣಗೊಂಡ ಅರ್ಹ ಮತದಾರರೆಲ್ಲರೂ ಮತದಾನ ಮಾಡುವುದು ಅತಿ ಮುಖ್ಯವಾಗಿದೆ. ಪ್ರತಿ ಮತವೂ ಅಮೂಲ್ಯವಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 1950 ಅಥವಾ ಸಿವಿಜಲ್ ಆಪ್ ಮೂಲಕ ದೂರು ದಾಖಲಿಸಬಹುದಾಗಿದೆ. ಜತೆಗೆ ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಬಹುದಾಗಿದೆ” ಎಂದು ಜಿಲ್ಲಾಧಿಕಾರಿ ವೈಶಾಲಿ ಅವರು ವಿವರಿಸಿದರು.

Advertisements

“ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಯುವ ಮತದಾರರ ಪಾತ್ರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಪ್ರಜಾಪ್ರಭುತ್ವ ಬಲಪಡಿಸಲು ಸಾಧ್ಯ” ಎಂದರು.

ಮತದಾರರಿಂದ ಮಾನವ ಸರಪಳಿ

“ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಹಾಗೂ ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆ” ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಪಂ ಸಿಇಒ ಎಸ್ ಭರತ್ ಮಾತನಾಡಿ, “ಮೇ 7ರಂದು ನಡೆಯುವ ಮತದಾನದಂದು ಅರ್ಹರೆಲ್ಲರೂ ಮತ ಚಲಾಯಿಸಬೇಕು. ಅರ್ಹರು ಮತದಾನದಿಂದ ವಂಚಿತರಾಗಬಾರದು. ಚುನಾವಣಾ ಪ್ರಕ್ರಿಯೆಯಲ್ಲಿ ಯುವಜನರು ಸಡಗರ-ಸಂಭ್ರಮದಿಂದ ಮತ ಹಕ್ಕು ಚಲಾಯಿಸಬೇಕು. ಪ್ರತಿಯೊಂದು ಮತವೂ ಕೂಡಾ ಅತ್ಯಮೂಲ್ಯವಾಗಿದ್ದು, ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು” ಎಂದು ಕೋರಿದರು.

ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ ಮಾತನಾಡಿ, ಯುವಜನರು ಯಾವುದೇ ಆಸೆ-ಆಮಿಷಗಳಿಗೆ ತುತ್ತಾಗದೇ ಮತ ಚಲಾಯಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತರಾಷ್ಟ್ರೀಯ ಯೋಗಪಟು ಭೀಮಪ್ಪ ಯಮನಪ್ಪ ಕಬಾಡರ ಮಾತನಾಡಿ, “ರಾಷ್ಟ್ರದ ಸುಭದ್ರತೆಗೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಅರ್ಹರೆಲ್ಲರೂ ಕಡ್ಡಾಯವಾಗಿ ಮತ ಹಕ್ಕು ಚಲಾಯಿಸಬೇಕು. ಆ ನಿಟ್ಟಿನಲ್ಲಿ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು” ಎಂದು ಅವರು ಕರೆ ನೀಡಿದರು.

ಜಿ.ಪಂ.ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಸಿ ಬಿ ದೇವರಮನಿ, ತಾ ಪಂ ಇಒ ಮಾಣಿಕರಾವ್ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X