ಕಲಬುರಗಿ | ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ: ತಾಹೇರ್ ಹುಸೇನ್

Date:

Advertisements

ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ. ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಕಲಬುರಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕಳೆದ ಹತ್ತು ವರ್ಷಗಳ ಆಡಳಿತ ಇಲ್ಲಿನ ಸಂವಿಧಾನದ ಆಶಯವನ್ನು ದುರ್ಬಲ ಪಡಿಸುವಂತಿತ್ತು ಎಂಬುದು ಎಲ್ಲರಿಗೂ ತಿಳಿದ ವಿಚಾರವಾಗಿದೆ. ಮುಂದೆ ಏನಾದರೂ ಈ ಅಧಿಕಾರ ಮುಂದುವರಿದರೆ ಸಂವಿಧಾನವನ್ನೇ ಬದಲಾಯಿಸುವ ಸಾಧ್ಯತೆ ಇದೆ. ಅವರು ಅದನ್ನು ಹೇಳುತ್ತಲೂ ಇದ್ದಾರೆ. ಮುಂದಿನ ದಿನಗಳು ನಿಜಕ್ಕೂ ಜಾತ್ಯಾತೀತ ತತ್ವಗಳಿಗೆ ಮಾರಕವಾಗಲಿದೆ ಎಂದರು.

ಕೋಮುಪ್ರಚೋದನೆ ಮಾತ್ರ ಇವರ ಬಂಡವಾಳ. ಅದನ್ನು ಬಳಸಿಕೊಂಡು ಜನರನ್ನು ದಾರಿಗೆಡಿಸುತ್ತಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವ ಭಾಷಣದ ಮುಖಾಂತರ ಮತಪೆಟ್ಟಿಗೆ ಭದ್ರ ಪಡಿಸುತ್ತಿದ್ದಾರೆ. ಕಾರ್ಪೊರೇಟ್ ದಿಗ್ಗಜರ ಕೈಗೆ ದೇಶವನ್ನು ನೀಡುತ್ತಿದ್ದಾರೆ ಎಂದರ ಅವರು,

Advertisements

ರೈತರನ್ನು ಕಡೆಗಣಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ವ್ಯಾಪಕವಾಗಿ ಯುವಕರ ಆತ್ಮಹತ್ಯೆ ಪ್ರಕರಣಗಳೂ ಹೆಚ್ಚಾಗಿದೆ. ಅಡುಗೆ ಅನಿಲ ಗ್ರಹ ಬಳಕೆ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಹೀಗೆ ದೇಶದ ಎಲ್ಲಾ ಮೂಲಭೂತ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ. ಆದರೂ ಆಡಳಿತಾರೂಢರು ದೇಶದ ಅಭಿವೃದ್ಧಿಯ ಮಾತನಾಡುತ್ತಿದ್ದಾರೆ ಎಂದರು.

ದೇಶದ ಅಲ್ಪ ಸಂಖ್ಯಾತರಿಗೆ ಮತ್ತು ದಲಿತ ಹಿಂದುಳಿದ ವರ್ಗಗಳಲ್ಲಿ ಅಭದ್ರತಾ ಭಾವನೆ ಹೆಚ್ಚಾಗುತ್ತಿದೆ. ಮಣಿಪುರದಲ್ಲಿ ಕ್ರೈಸ್ತರ ವಿರುದ್ಧ ನಡೆಯುತ್ತಿರುವಂತಹ ದಾಳಿಯ ಬಗ್ಗೆ ಕೇಂದ್ರ ಮೌನವಾಗಿದೆ. ಪ್ರತಿಪಕ್ಷಗಳ ಮೇಲೆ ಇಡಿ, ಐಟಿ ದಾಳಿಯ ಮೂಲಕ ಬೆದರಿಸಿ ಬಾಯಿ ಮುಚ್ಚಿಸುವ ಶ್ರಮ ನಡೆಯುತ್ತಿವೆ. ತಮ್ಮ ಪಕ್ಷಕ್ಕೆ ಸೇರುವವರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಹೀಗೆ ಆಡಳಿತವು ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ. ಹೀಗಿರುವಾಗ ಪ್ರತಿಪಕ್ಷಗಳ ಒಕ್ಕೂಟದ ಅಗತ್ಯ ಈ ದೇಶಕ್ಕೆ ಅಗತ್ಯವಿದೆ ಎಂದರು.

ಈ ದೇಶವನ್ನು ಈ ಸ್ವಾರ್ಥ ಹಿತಾಸಕ್ತಿಗಳಿಂದ ಕಾಪಾಡಬೇಕಾಗಿದೆ. ಮತದಾನ ಎಂಬ ಮೂಲಭೂತ ಹಕ್ಕುಗಳನ್ನು ಚಲಾಯಿಸುವ ಸಮಯ ಕೂಡಿ ಬಂದಿದೆ. ಇದನ್ನು ಸಮರ್ಪಕವಾಗಿ ಬಳಸಬೇಕಾಗಿದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಇದರಲ್ಲಿ ಭಾಗಿಯಾಗುವಂತೆ ಮಾಡಲು ಶಕ್ತಿ ಮೀರಿ ಪ್ರಯತ್ನಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಇದರ ಅಗತ್ಯವಿದೆ. ಭಾರತ ಉತ್ತಮ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಇದರಲ್ಲಿ ಕೈಜೋಡಿಸಬೇಕಾಗಿದೆ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X