ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಏ.20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನೆಲೆ, ನಗರದ ನಾನಾ ಭಾಗಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.
ಏ.20ರಂದು ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಗರದ ಕೆಲವೆಡೆ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಲವೆಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಪ್ಯಾಲೇಸ್ ರಸ್ತೆ, ಜಯಮಹಲ್ ರಸ್ತೆ, ರಮಣಮಹರ್ಷಿರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜ್ ರಸ್ತೆ, ಎಂ.ವಿ. ಜಯರಾಮ್ ರಸ್ತೆ, ಸಿ.ವಿ. ರಾಮನ್ ರಸ್ತೆ, ನಂದಿದುರ್ಗರಸ್ತೆ, ಮೇಕ್ರಿ ಸರ್ಕಲ್ನಿಂದ ಯಶವಂತಪುರ ರಸ್ತೆವರೆಗೆ, ವಸಂತನಗರರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ ಈ ರಸ್ತೆಗಳ ಬದಲಿಗೆ ಪರ್ಯಾಯ ರಸ್ತೆ ಬಳಸಿ ಎಂದು ಸೂಚಿಸಿದೆ.
ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.
— DCP Traffic North, Bengaluru (@DCPTrNorthBCP) April 19, 2024
ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರವನ್ನು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ನಗರದೊಳಗೆ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸಿ.ಎಂ.ಟಿ.ಐ. ಜಂಕ್ಷನ್, ನ್ಯೂ ಬಿ.ಇ.ಎಲ್. ಜಂಕ್ಷನ್, ಓಲ್ಡ್ ಉದಯ ಟಿವಿ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿ.ಹೆಚ್.ಇ.ಎಲ್. ಜಂಕ್ಷನ್, ಹಜ್ ಕ್ಯಾಂಪ್ ನಂದಿದುರ್ಗ ರಸ್ತೆ, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಸರ್ಕಲ್, ಯಶವಂತಪುರ ಗೋವರ್ಧನ್ ಬಳಿ ಭಾರೀ ಸರಕು ಸಾಗಾಣಿಕಾ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದಿದೆ.
ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್ಗಳು
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ. ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಜತೆಗೆ, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ. ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್, ಪೊಲೀಸ್ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತಗಾಗಿ ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.