ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಕಳುಹಿಸಿದ ಆರೋಪದ ಮೇಲೆ ಗಾಜಿಯಾಬಾದ್ ನಿವಾಸಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಆರೋಪಿ ರೋಹಿತ್ ತ್ಯಾಗಿಯನ್ನು ಆತನ ಊರಿನಿಂದ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇದು ತಮಾಷೆ ಮಾಡುವ ಉದ್ದೇಶದಿಂದ ಮಾಡಿರುವುದಾಗಿ ಹೇಳಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬುಧವಾರ, ಖಾನ್ ಅವರ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಪ್ರಯಾಣಿಸಲು ರೋಹಿತ್ ತ್ಯಾಗಿ ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ. ಕ್ಯಾಬ್ ಡ್ರೈವರ್ ವಿಳಾಸವನ್ನು ತಲುಪಿದಾಗ, ಇದು ತಮಾಷೆ ಎಂದು ಅರಿತು ದೂರು ದಾಖಲಿಸಿದ್ದಾರೆ.
ಇದನ್ನು ಓದಿದ್ದಿರಾ? ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ: ಇನ್ನೋರ್ವ ಆರೋಪಿ ಬಂಧನ
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಾಂದ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತ್ಯಾಗಿಯನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಭಾನುವಾರ ಖಾನ್ ಅವರ ನಿವಾಸದ ಮೇಲೆ ಮೋಟಾರ್‌ಬೈಕ್‌ನಲ್ಲಿ ಬಂದು ಗುಂಡು ಹಾರಿಸಲಾಗಿದೆ. ಈ ಘಟನೆಯ ಬಳಿಕ ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್ ಆನ್‌ಲೈನ್ ಪೋಸ್ಟ್‌ನಲ್ಲಿ ಈ ದಾಳಿಯ ಹೊಣೆ ಹೊತ್ತಿದ್ದಾರೆ. ಹಾಗೆಯೇ ಬಾಲಿವುಡ್ ನಟನಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
ಇದನ್ನು ಓದಿದ್ದೀರಾ?ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ
ಇನ್ನು ಪೊಲೀಸ್ ಮೂಲಗಳ ಪ್ರಕಾರ ಸಲ್ಮಾನ್ ಖಾನ್ ನಿವಾಸಕ್ಕೆ ಗುಂಡು ಹಾರಿಸಿದ ಇಬ್ಬರೂ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಭಾಗವಾಗಿದ್ದಾರೆ. ಗಾಯಕ ಸಿಧು ಮೂಸ್ ವಾಲಾ ಮತ್ತು ರಜಪೂತ ನಾಯಕ ಮತ್ತು ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಸೇರಿದಂತೆ ಹಲವಾರು ಪ್ರಮುಖ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಷ್ಣೋಯ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ.