ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ.
ಸಂಘರ್ಷ ಪೀಡಿತ ಮಣಿಪುರದಲ್ಲಿ ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು ನಾಶಪಡಿಸಿದ ಘಟನೆಗಳು ನಡೆದಿದೆ. ಬೂತ್ ವಶಪಡಿಸಿಕೊಂಡ ಆರೋಪಗಳು ಕೂಡಾ ಕೇಳಿ ಬಂದಿದೆ. ಶುಕ್ರವಾರದಂದು ಎರಡು ಲೋಕಸಭಾ ಕ್ಷೇತ್ರಗಳಾದ ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಶೇಕಡ 68ಕ್ಕಿಂತ ಹೆಚ್ಚು ಮತದಾನವಾಗಿದೆ.
VIDEO | Lok Sabha Elections 2024: Here’s what Congress leader Keisham Meghachandra (@meghachandra_k) said on the party filing a complaint with the Election Commission against the alleged rigging during voting in Manipur today.
“Workers and agents of Congress candidates were… pic.twitter.com/edgto3M9fO
— Press Trust of India (@PTI_News) April 19, 2024
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ, “ಮಣಿಪುರದ ಒಳ ಕ್ಷೇತ್ರದ 36 ಮತಗಟ್ಟೆಗಳಲ್ಲಿ ಮತ್ತು ಹೊರ ಮಣಿಪುರ ಕ್ಷೇತ್ರದಲ್ಲಿ 11 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಒತ್ತಾಯಿಸಿ ಮಣಿಪುರ ಮುಖ್ಯ ಚುನಾವಣಾಧಿಕಾರಿಗೆ ಪಕ್ಷವು ದೂರು ನೀಡಿದೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ
“ಕೆಲವು ದಿನಗಳಿಂದ ಅಪರಿಚಿತ ಶಸ್ತ್ರಧಾರಿ ದುಷ್ಕರ್ಮಿಗಳು ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಮತ್ತು ಪಕ್ಷದ ಚುನಾವಣಾ ಏಜೆಂಟರಿಗೆ ಬೆದರಿಕೆ ಹಾಕುತ್ತಿದ್ದಾರೆ. ಒಳ ಮಣಿಪುರದ 36 ಮತಗಟ್ಟೆಗಳು ಮತ್ತು ಹೊರ ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನ ಮಾಡುವಂತೆ ಮಣಿಪುರ ಸಿಇಒ ಅವರಿಗೆ ದೂರು ನೀಡಿದ್ದೇವೆ” ಎಂದು ಹೇಳಿದರು.
ಇನ್ನು ಈ 47 ಮತಗಟ್ಟೆಗಳಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ವಿಧಾನಸಭೆ ಕ್ಷೇತ್ರವಾದ ಹೀಂಗಾಂಗ್ ಪ್ರದೇಶದಲ್ಲಿರುವ ಮೂರು ಮತಗಟ್ಟೆಗಳು ಕೂಡಾ ಸೇರಿದೆ.
ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ| ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ: ಇಬ್ಬರ ಹತ್ಯೆ
ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಿನಿಂದ ಮೈತಿ ಮತ್ತು ಕುಕಿ ಜನಾಂಗದ ನಡುವೆ ಹಿಂಸಾಚಾರ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿಯೂ ಹಿಂಸಾಚಾರ ನಡೆದಿದ್ದು, ಗುಂಡಿನ ಚಕಮಕಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.