ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ, ಹೀಗಾಗಿ ಜೋಶಿ ವಿರುದ್ಧ ಸ್ಪರ್ಧೆ: ಯತ್ನಾಳ್ ಆರೋಪ

Date:

Advertisements

ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಹೀಗಾಗಿಯೇ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಲ್ಹಾದ್‌ ಜೋಶಿ ವಿರುದ್ಧ ಸ್ಪರ್ಧಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ‌ ಯತ್ನಾಳ್ ಆರೋಪಿಸಿದರು.‌

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಮೊದಲು ಶಾಸಕ ವಿನಯ ಕುಲಕರ್ಣಿ ಅವರು ಸ್ವಾಮೀಜಿ ಅವರನ್ನು ಬೇಕಾಬಿಟ್ಟಿ ಬಯ್ಯುತ್ತಿದ್ದರು. ಈಗ ಹೊಗಳುತ್ತಿದ್ದಾರೆ ಎಂದರೆ ಪೇಮೆಂಟ್ ಆಗಿದೆ. ಸ್ವಾಮೀಜಿಗೆ ಯಾರು ಪೇಮೆಂಟ್ ಮಾಡಿದ್ದಾರೆ ಎನ್ನುವುದನ್ನು ಮೇ.7ರ ನಂತರ ಹೇಳುವೆ” ಎಂದರು.

“ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು ಬಿಜೆಪಿ ಜೊತೆಗೆ ನಿಲ್ಲುತ್ತಾರೆ. ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮಗೆ, ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅವರ ಎಷ್ಟು ಮತಗಳನ್ನು ಗಳಿಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ದಿಂಗಾಲೇಶ್ವರ ಸ್ವಾಮೀಜಿ ಸುಮಾರು 5000 ಮತಗಳನ್ನು ಪಡೆಯುತ್ತಾರೆ” ಎಂದು ಯತ್ನಾಳ್‌ ಹೇಳಿದರು.

Advertisements

“ರಾಜ್ಯದಲ್ಲಿ ಹಿಂದೂ‌ಗಳಿಗೆ ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಭಯದ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಜ್ಯದಲ್ಲಿ ನಿರಂತರವಾಗಿ ಹಲ್ಲೆ, ಕೊಲೆಗಳು ನಡೆದಿವೆ. ಈ ಪರಿಸ್ಥಿತಿ ಬಗ್ಗೆ ರಾಷ್ಟ್ರಪತಿ ಅವರಿಗೆ ವರದಿ ನೀಡಬೇಕು. ಜೊತೆಗೆ ಇಲ್ಲಿನ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X