ಉಡುಪಿ‌ | ಸಿಪಿಐ(ಎಂ) ಚುನಾವಣಾ ಕನ್ನಡ ಪ್ರಣಾಳಿಕೆ ಬಿಡುಗಡೆ

Date:

Advertisements

18ನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ಕೇಂದ್ರ ಸಮಿತಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಕನ್ನಡ ಪ್ರತಿಯನ್ನು, ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿತು. ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಹಿರಿಯ ಮುಖಂಡ ಕೆ.ಶಂಕರ್ ವಹಿಸಿದ್ದರು.

ಈ ವೇಳೆ ಮಾತನಾಡಿದ ಮುಖಂಡರು, ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಸಂವಿಧಾನದ ನಾಲ್ಕು ಆಧಾರ ಸ್ತಂಭಗಳನ್ನು, ಜಾತ್ಯತೀತ, ಪ್ರಜಾಪ್ರಭುತ್ವ, ಆರ್ಥಿಕ ಸ್ವಾವಲಂಬನೆ, ಒಕ್ಕೂಟವಾದ ಮತ್ತು ಸಾಮಾಜಿಕ ನ್ಯಾಯ ಇವುಗಳನ್ನು ವ್ಯವಸ್ಥಿತವಾಗಿ ಕಳಚಿ ಹಾಕುತ್ತಿದೆ. ಜನರಲ್ಲಿ ವಿಭಜನೆ ಉಂಟು ಮಾಡುವ ಸಲುವಾಗಿ ವಿಷಪೂರಿತ ಕೋಮುವಾದಿ ಸಿದ್ದಾಂತವನ್ನು ಹೇರುತ್ತಿದೆ ಎಂದರು.

ಬೆಲೆ ಏರಿಕೆ, ನಿರುದ್ಯೋಗ ತೀವ್ರವಾಗಿ ಹೆಚ್ಚುತ್ತಿದ್ದು, ಜನ ಸಾಮಾನ್ಯರು ಕಷ್ಟಕ್ಕೆ ಒಳಗಾಗಿದ್ದಾರೆ.‌ ಜನರ ತೆರಿಗೆಯ ಹಣದಿಂದ ನಿರ್ಮಾಣವಾದ ಸಾರ್ವಜನಿಕ ‌ಆಸ್ತಿಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇಂತಹ ದುರ್ನೀತಿಯ ಬದಲಾಗಿ ಸಿಪಿಐ(ಎಂ), ರೈತ, ಕಾರ್ಮಿಕ, ದಲಿತ, ಆದಿವಾಸಿ,ಮಹಿಳೆಯರು, ಸಣ್ಣ ಉದ್ದಿಮೆದಾರರ ಪರವಾಗಿರುವ ಪರ್ಯಾಯ ಧೋರಣೆಗಳನ್ನು ಸೂಚಿಸಿದೆ ಎಂದರು.

Advertisements

ಸಿಪಿಐ(ಎಂ) ಮತದಾರರಲ್ಲಿ 3 ಮನವಿಯನ್ನು ಮಾಡಿದೆ

  1. ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಸೋಲಿಸುವುದು
  2. ಲೋಕಸಭೆಯಲ್ಲಿ ಸಿಪಿಐ(ಎಂ) ಮತ್ತು ಎಡ ಪಕ್ಷಗಳ ಬಲವನ್ನು ಹೆಚ್ಚಿಸುವುದು
  3. ಕೇಂದ್ರದಲ್ಲಿ ಪರ್ಯಾಯ ಜಾತ್ಯಾತೀತ ಸರ್ಕಾರದ ರಚನೆಯನ್ನು ಖಾತ್ರಿಗೊಳಿಸುವುದು.

ಜಿಲ್ಲಾ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಎಚ್. ನರಸಿಂಹ, ಸುರೇಶ ಕಲ್ಲಾಗರ, ವೆಂಕಟೇಶ ಕೋಣಿ, ಶಶಿಧರ, ಬಲ್ಕಿಸ್, ಶೀಲಾವತಿ ಮೊದಲಾದವರು ಭಾಗವಹಿಸಿದ ಸಭೆಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು ಮಾತ್ರವಲ್ಲದೆ ‘I.N.D.I.A.’ ಕೂಟದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸಬೇಕು ಎಂದು ನಿರ್ಧರಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಪ್ರಕಟಿಸಿದ, ‘ನಾನು ಬಾಂಡ್-ಚುನಾವಣಾ ಬಾಂಡ್’ ಭರ್ಜರಿ ಸುಳ್ಳುಗಳೇ ಮೋದಿ ಗ್ಯಾರಂಟಿಗಳು ಪುಸ್ತಕವನ್ನು ಸಹ ಬಿಡುಗಡೆ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X