ನಾನು ಜನರಿಗಾಗಿ ದಿನದ 24 ಗಂಟೆಯೂ ಕೆಲಸ ಮಾಡುತ್ತೇನೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ಶನಿವಾರ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯ ಪ್ರಚಾರವನ್ನು ನಡೆಸಿದ್ದಾರೆ. ಪ್ರಚಾರದ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ತಾನು ದಿನದ 24 ಗಂಟೆಯೂ ಜನರಿಗಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಇಂಡಿ ಒಕ್ಕೂಟದ ಇತಿಹಾಸ ಕೇವಲ ಹಗರಣ: ಪ್ರಧಾನಿ ಮೋದಿ
“ನಿಮಗಾಗಿ ಹಗಲು ರಾತ್ರಿ ನಾನು ದುಡಿಯುತ್ತೇನೆ. ನಿಮ್ಮ ಕನಸೇ ಮೋದಿಯ ಸಂಕಲ್ಪ. ದಿನದ 24 ಗಂಟೆಯೂ, ವಾರದ ಏಳು ದಿನವೂ, 2047ರವರೆಗೆ ನಿಮಗಾಗಿ ಕೆಲಸ ಮಾಡುವ ಸಂಕಲ್ಪ ಹೊಂದಿದ್ದೇನೆ” ಎಂದು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಎರಡೂ ಕಡೆಗಳಲ್ಲೂ ಹೇಳಿದ್ದಾರೆ.
Claims of working 24×7 for the people, yet where was he during Karnataka’s floods and droughts?
So, what’s the real story behind this ’24×7′?
Sounds like it’s all PR, all the time!#Modis24x7
— Siddaramaiah (@siddaramaiah) April 20, 2024
ಇದಕ್ಕೆ ಎಕ್ಸ್ ಪೋಸ್ಟ್ ಮೂಲಕ ತಿರುಗೇಟು ನೀಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, “ಜನರಿಗಾಗಿ 24×7 ಕೆಲಸ ಮಾಡುತ್ತೇನೆ ಎಂದು ಹೇಳುತ್ತಾರೆ. ಆದರೆ ಕರ್ನಾಟಕದ ಪ್ರವಾಹ ಮತ್ತು ಬರಗಾಲದ ಸಮಯದಲ್ಲಿ ಅವರು ಎಲ್ಲಿದ್ದರು” ಎಂದು ಪ್ರಶ್ನಿಸಿದ್ದಾರೆ.
“ಹಾಗಾದರೆ, ಈ ’24×7′ ಹಿಂದಿನ ನಿಜವಾದ ಕಥೆ ಏನು” ಎಂದು ಕೇಳಿರುವ ಸಿಎಂ ಸಿದ್ಧರಾಮಯ್ಯ ಅವರು “ಇದು ಎಲ್ಲಾ ಬರೀ ಪ್ರಚಾರ, ಪ್ರತಿ ಬಾರಿ ಹೀಗೆ ಮಾಡೋದು ಅನ್ನೋದು ತಿಳಿಯುತ್ತದೆ” ಎಂದು ಹೇಳಿದ್ದಾರೆ.
ಪ್ರಧಾನಿ @narendramodi ಅವರೇ, ನಿಮ್ಮ ಪಕ್ಷದ ರಾಜ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಗಳೊಳಗೆ ಹಾವೇರಿಯಲ್ಲಿ ಬೀಜ-ಗೊಬ್ಬರ ಕೇಳಿದ ರೈತರಿಗೆ ಗುಂಡಿಟ್ಟು ಸಾಯಿಸಿದರು. ಸಾಲ ಮನ್ನಾ ಮಾಡಿ ಎಂದು ರೈತರು ಕೇಳಿದರೆ “ನಾನೇನು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಂಡಿದೇನಾ?”…
— Siddaramaiah (@siddaramaiah) April 20, 2024
ಇನ್ನು ಕಾಂಗ್ರೆಸ್ ರೈತ ವಿರೋಧಿ ಸರ್ಕಾರ ಎಂದು ಪ್ರಧಾನಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರೇ ಎದೆ ಮೇಲೆ ಕೈಯಿಟ್ಟು ಆತ್ಮಸಾಕ್ಷಿಗೆ ಕಿವಿಕೊಟ್ಟು ಹೇಳಿ, ನೀವು ನಿಜವಾಗಿ ರೈತರ ಹಿತೈಷಿಗಳಾ? ಹಿತಶತ್ರುಗಳಾ? ರೈತರ ಪಾಲಿನ ಮರಣ ಶಾಸನದಂತಿದ್ದ ಕೃಷಿ ಕ್ಷೇತ್ರದ ಐದು ಕರಾಳ ಕಾಯ್ದೆಗಳನ್ನು ಬಲವಂತವಾಗಿ ಜಾರಿಗೊಳಿಸಲು ಪ್ರಯತ್ನಿಸಿದವರು ಯಾರು? ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಪ್ರತಿಭಟನೆಗಿಳಿದ ರೈತರು ದೆಹಲಿಗೆ ಬರದಂತೆ ರಸ್ತೆ ಮೇಲೆ ಮುಳ್ಳು ನೆಟ್ಟು, ಗುಂಡಿ ತೋಡಿ ಹಿಂದಕ್ಕೆ ಓಡಿಸುವ ಕುಟಿಲ ಕಾರಸ್ತಾನಗಳನ್ನು ಮಾಡಿದ್ದು ಯಾರು” ಎಂದು ಪ್ರಶ್ನಿಸಿದ್ದಾರೆ.
“ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಲ್ಲಿ ಸುಮಾರು 700 ಅಮಾಯಕರು ಪೊಲೀಸರ ದೌರ್ಜನ್ಯ, ಸರ್ಕಾರದ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡಾಗ ಕನಿಷ‍್ಠ ಸಂತಾಪವನ್ನೂ ಸೂಚಿಸದ ನಿಮಗೆ ರೈತರ ಸಮ್ಮಾನ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ” ಎಂದು ಕಿಡಿಕಾರಿದ್ದಾರೆ.
“ನಮ್ಮ ರಾಜ್ಯದಲ್ಲಿ ನೆರೆ ಬಂದಾಗ ಬರಲಿಲ್ಲ, ಬರ ಬಿದ್ದಾಗ ಬರಲಿಲ್ಲ, ಬೆಳೆ ಕಳೆದುಕೊಂಡ ಬರಗಾಲ ಪೀಡಿತ ಪ್ರದೇಶದ ರೈತರಿಗೆ ಪರಿಹಾರ ನೀಡಲಿಲ್ಲ. ನಾನೇ ಖುದ್ದಾಗಿ ದೆಹಲಿಗೆ ಬಂದು ಭೇಟಿ ಮಾಡಿ ಮನವಿ ಕೊಟ್ಟರೂ ಇಲ್ಲಿಯ ವರೆಗೆ ಪೈಸೆ ಹಣ ನೀಡಿಲ್ಲ. ಈ ರೀತಿಯ ರೈತ ವಿರೋಧಿ ಧೋರಣೆ ಇಟ್ಟುಕೊಂಡ ನೀವು ಚುನಾವಣೆಯ ಕಾಲದಲ್ಲಿ ಮಾತ್ರ ತಪ್ಪದೆ ಹಾಜರಾಗಿ ರೈತರ ಪರ ಪ್ರೀತಿ-ಕಾಳಜಿಯ ಮಳೆ ಸುರಿಸಿದರೆ ರಾಜ್ಯದ ರೈತರು ನಿಮ್ಮನ್ನು ನಂಬುತ್ತಾರೆ ಎಂದು ತಿಳಿದುಕೊಂಡಿದ್ದಿರಾ ಮೋದಿಯವರೇ” ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಡಾ.ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ 76,000 ಕೋಟಿ ರೂಪಾಯಿಗಳಷ್ಟು ರೈತರ ಸಾಲವನ್ನು ಮನ್ನಾ ಮಾಡಿತ್ತು. ಆದರೆ ನೀವು ನಿಮ್ಮ ಸ್ನೇಹಿತರಾದ ವಂಚಕ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದಿರಿ. ಆದರೆ ಅದೇ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕೆಂದು ನಿಮಗೆ ಅನಿಸಲೇ ಇಲ್ಲವೇ…
— Siddaramaiah (@siddaramaiah) April 20, 2024
“ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನನ್ನಾಗಿ ಮಾಡಬೇಕೆಂಬ ರೈತರ ಬೇಡಿಕೆಯನ್ನು ಇನ್ನೂ ಈಡೇರಿಸಲು ನೀವು ಸಿದ್ಧರಿಲ್ಲ. ರಸಗೊಬ್ಬರದ ಬೆಲೆಯನ್ನು ಏರಿಸುತ್ತಲೇ ಇದ್ದೀರಿ, ಬೀಜ- ಗೊಬ್ಬರಗಳ ಮೇಲೆ ಜಿಎಸ್‌ಟಿ ಹೇರಿಕೆ ಮಾಡಿದ್ದೀರಿ. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ರೈತರ ಭೂಮಿಯನ್ನು ಕಾರ್ಪೋರೇಟ್ ಕುಳಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿರುವ ನಿಮ್ಮನ್ನು ಯಾವ ರೈತ ತಮ್ಮ ಹಿತಚಿಂತಕ ಎಂದು ನಂಬುತ್ತಾರೆ ಹೇಳಿ ಅವರೇ” ಎಂದು ಕೇಳಿದ್ದಾರೆ.
ಇದನ್ನು ಓದಿದ್ದೀರಾ? ಕುಕ್ಕರ್ ಬಾಂಬ್ ಸ್ಫೋಟವಾದಾಗ ಬಿಜೆಪಿಗರು ತುಷ್ಟೀಕರಣ ಮಾಡಿದ್ದರಾ: ಸಿಎಂ ಸಿದ್ಧರಾಮಯ್ಯ ಪ್ರಶ್ನೆ
“ಪ್ರಧಾನಿ ಮೋದಿ ಅವರೇ, ನಿಮ್ಮ ಪಕ್ಷದ ರಾಜ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಗಳೊಳಗೆ ಹಾವೇರಿಯಲ್ಲಿ ಬೀಜ-ಗೊಬ್ಬರ ಕೇಳಿದ ರೈತರಿಗೆ ಗುಂಡಿಟ್ಟು ಸಾಯಿಸಿದರು. ಸಾಲ ಮನ್ನಾ ಮಾಡಿ ಎಂದು ರೈತರು ಕೇಳಿದರೆ ‘ನಾನೇನು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಂಡಿದೇನಾ?’ ಎಂದು ವಿಧಾನಮಂಡಲದಲ್ಲಿ ಕೇಳಿದ್ದರು. ಇದೇನಾ ನಿಮ್ಮ ಪಕ್ಷದ ರೈತರ ಬಗೆಗಿನ ಕಾಳಜಿ” ಎಂದು ಪ್ರಶ್ನಿಸಿದ್ದಾರೆ.
“ರಾಜ್ಯದಲ್ಲಿ ಎರಡನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಳಿಸುವ ತಿದ್ದುಪಡಿ, ಭೂಸುಧಾರಣಾ ಕಾಯ್ದೆಗೂ ತಿದ್ದುಪಡಿ ತರುವ ಪ್ರಯತ್ನ ಮಾಡಿತ್ತು. ಇದೇನಾ ನಿಮ್ಮ ರೈತ ಪರ ಸರ್ಕಾರ” ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.